ಮಧ್ಯಾಹ್ನ ಬೆಂಗಳೂರಿಗೆ ಚಾಂಪಿಯನ್ಸ್ – ಸಂಜೆ ವಿಜಯೋತ್ಸವ ಮೆರವಣಿಗೆ | ಎಷ್ಟು ಗಂಟೆಗೆ ಏನು?

Public TV
1 Min Read
RCB Team

ಬೆಂಗಳೂರು: ಐಪಿಎಲ್ 2025 ಫೈನಲ್ (IPL 2025 Final) ಪಂದ್ಯದಲ್ಲಿ ಗೆದ್ದು ಕಪ್ ಎತ್ತಿಹಿಡಿದ ಆರ್‌ಸಿಬಿ (RCB) ತಂಡ ಅಭಿಮಾನಿಗಳೊಂದಿಗೆ ವಿಜಯೋತ್ಸವ ಆಚರಿಸುವ ಸಲುವಾಗಿ ತವರೂರು ಬೆಂಗಳೂರಿಗೆ (Bengaluru) ಆಗಮಿಸಲಿದೆ. ಅಹಮದಾಬಾದ್‌ನಿಂದ ವಿಶೇಷ ವಿಮಾನದಲ್ಲಿ ಆರ್‌ಸಿಬಿ ಆಟಗಾರರು ಹೊರಟು ಮಧ್ಯಾಹ್ನ 1:30ರ ವೇಳೆಗೆ ಬೆಂಗಳೂರು ಹೆಚ್‌ಎಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಇಳಿದ ಬಳಿಕ ಆರ್‌ಸಿಬಿ ತಂಡ ತಾಜ್ ವೆಸ್ಟೆಂಡ್ ಹೋಟೆಲ್‌ಗೆ ತೆರಳಲಿದೆ. ಇಲ್ಲಿ ವಿಶ್ರಾಂತಿ ಪಡೆದ ಬಳಿಕ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಟ್ರೋಫಿ ನೀಡಲಿದೆ. ಸಿಎಂ ಭೇಟಿ ಬಳಿಕ 5 ಗಂಟೆಗೆ ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ (Chinnaswamy Stadium) ಓಪನ್-ಟಾಪ್ ಬಸ್ ಮೂಲಕ ಆರ್‌ಸಿಬಿ ತಂಡದ ಪರೇಡ್ ನಡೆಯಲಿದೆ. ಸುಮಾರು 1 ಕಿ.ಮೀ ವಿಜಯಯಾತ್ರೆ ನಡೆಸಲು ಸಿದ್ಧತೆ ನಡೆದಿದೆ. ಇದನ್ನೂ ಓದಿ: ಕೊಹ್ಲಿಗೆ ಎಚ್ಚರಿಕೆ ನೀಡದ ಅಂಪೈರ್‌ ವಿರುದ್ಧ ಗವಾಸ್ಕರ್ ಗರಂ

ಸಾರ್ವಜನಿಕ ಮೆರವಣಿಗೆ ಬಳಿಕ 6 ಗಂಟೆಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಇಂದು ಸಂಜೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಕ್ಟರಿ ಪರೇಡ್

Share This Article