ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (Chinnaswamy Stadium) ಐಪಿಎಲ್ ಪಂದ್ಯಗಳನ್ನ ನಡೆಸಲು ಸಮಿತಿ ರಚನೆ ಮಾಡಿದ್ದೇವೆ. ಐಪಿಎಲ್ ಚೆನ್ನಾಗಿ ನಡೆಸಲು ಸಮಿತಿ ಕ್ರಮ ಕೈಗೊಳ್ಳಬೇಕು ಎಂದು ಗೃಹಸಚಿವ ಜಿ. ಪರಮೇಶ್ವರ್ (G Parameshwar) ಹೇಳಿದರು.
ಬೆಂಗಳೂರಲ್ಲಿ (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೊಸದಾಗಿ ಏನೂ ಮಾಡಲ್ಲ, ಸೇಫ್ಟಿ ಮೋಸ್ಟ್ ಇಂಪಾರ್ಟೆಂಟ್ ಅಂತಾ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್ – ಚಿನ್ನಸ್ವಾಮಿಯಲ್ಲಿ ಐಪಿಎಲ್‌ಗೆ ಸರ್ಕಾರ ಅನುಮತಿ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಪಂದ್ಯಗಳನ್ನ ನಡೆಸಲು ಸಮಿತಿ ರಚನೆ ಮಾಡಿದ್ದೇವೆ. ಐಪಿಎಲ್ ಚೆನ್ನಾಗಿ ನಡೆಸಲು ಸಮಿತಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ರು.

ಚಿನ್ನಸ್ವಾಮಿ ಮೈದಾನದಲ್ಲಿ ಐಪಿಎಲ್ (IPL) ಪಂದ್ಯ ಆಯೋಜಿಸಲು ರಾಜ್ಯ ಸರ್ಕಾರ ಕ್ಯಾಬಿನೆಟ್ ಸಭೆಯಲ್ಲಿ ಒಂದು ದಿನದ ಹಿಂದೆಯಷ್ಟೇ ಒಪ್ಪಿಗೆ ನೀಡಿತು. ಒಂದು ಪಂದ್ಯಕ್ಕೆ 35 ಸಾವಿರಕ್ಕಿಂತ ಹೆಚ್ಚು ಜನ ಸೇರಬಾರದು ಎಂಬ ಷರತ್ತಿನೊಂದಿಗೆ ಒಪ್ಪಿಗೆ ನೀಡಿತು. ಕ್ಯಾಬಿನೆಟ್ ಸಭೆಗೂ ಮೊದಲು ವಿಧಾನಸೌಧದಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರರಾವ್ ನೇತೃತ್ವದ ಕಮಿಟಿ, ಕೆಎಸ್‌ಸಿಎ, ಆರ್‌ಸಿಬಿ ಮಂಡಳಿ ಸದಸ್ಯರು ಭಾಗಿಯಾಗಿದ್ದರು.
ಇನ್ನೂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ ಪ್ರಕರಣದ ಕುರಿತು ಮಾತನಾಡಿ, ಹೈಕೋರ್ಟ್, ಸುಪ್ರೀಂ ಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿತ್ತು. ಹೀಗಾಗಿ ಬೈರತಿ ಬಸವರಾಜ ನಿನ್ನೆ ಶರಣಾಗಿದ್ದಾರೆ. ಸಿಐಡಿ ಮುಂದೆ ಕಾನೂನು ರೀತಿ ಕ್ರಮ ಕೈಗೊಳ್ಳುತ್ತೆ ಎಂದು ಹೇಳಿದರು ಪರಂ. ಇದನ್ನೂ ಓದಿ: ಕಿಶನ್ ದಾಖಲೆಯ ಫಿಫ್ಟಿ, ಪಾಂಡ್ಯ ಆಲ್‌ರೌಂಡರ್ ಆಟ – ನಮೀಬಿಯಾ ವಿರುದ್ಧ 93 ರನ್‌ಗಳ ಭರ್ಜರಿ ಜಯ

