ಜೆಡ್ಡಾ: 13 ವರ್ಷದ ವೈಭವ್ ಸೂರ್ಯವಂಶಿ (Vaibhav Suryavanshi) ಐಪಿಎಲ್ ಹರಾಜಿನಲ್ಲಿ (IPL Mega Auction) ಇತಿಹಾಸ ಸೃಷ್ಟಿಸಿದ್ದಾರೆ. ಎರಡನೇ ದಿನದಂದು 1.10 ಕೋಟಿ ರೂ.ಗೆ ಮಾರಾಟವಾಗುವ ಮೂಲಕ ಐಪಿಎಲ್‌ನಲ್ಲಿ ಮಾರಾಟವಾದ ಅತಿ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.
ರಾಜಸ್ಥಾನ ರಾಯಲ್ಸ್ (Rajasthan Royals) ಬಿಹಾರದ ಕಿರಿಯ ಆಟಗಾರ ಸೂರ್ಯವಂಶಿಯನ್ನು 1.10 ಕೋಟಿ ರೂ. ನೀಡಿ ಖರೀದಿಸಿತು. 30 ಲಕ್ಷ ರೂ. ಮೂಲ ಬೆಲೆಯನ್ನು ಹೊಂದಿದ್ದ ಆಟಗಾರನನ್ನು ಖರೀದಿಸಲು ದೆಹಲಿ ಕ್ಯಾಪಿಟಲ್ಸ್ ಪ್ರಯತ್ನಿಸಿತ್ತು.
Advertisement
Watch vaibhav suryavanshi’s quick fire 82 runs against Australia u19.
For whole highlights check bcci official website #KLRahul,#ViratKohli @varun pic.twitter.com/0oSnOAtpZZ
— Mahesh Patil 1717 (@1717Mahesh) September 30, 2024
Advertisement
5ನೇ ವಯಸ್ಸಿನಲ್ಲೇ ಕ್ರಿಕೆಟ್ ಅಭ್ಯಾಸ ಶುರು ಮಾಡಿದ್ದ ವೈಭವ್, 12ನೇ ವಯಸ್ಸಿಗೆ ಪ್ರಥಮ ದರ್ಜೆ ಪಂದ್ಯವಾಡಿದ್ದರು. ಈಗಾಗಲೇ ರಣಜಿ ಟ್ರೋಫಿ, ಹೇಮಂತ್ ಟ್ರೋಫಿ, ಕೂಚ್ ಬಿಹಾರ್ ಟ್ರೋಫಿ ಮತ್ತು ವಿನೂ ಮಂಕಡ್ ಟೂರ್ನಿಗಳಲ್ಲಿ ಆಡಿದ್ದಾರೆ. 13ನೇ ವಯಸ್ಸಿನೊಳಗೆ ಭಾರತ ಅಂಡರ್-19 ತಂಡದಲ್ಲೂ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: 10.75 ಕೋಟಿ ಬಿಡ್ – ಅಭಿಮಾನಿಗಳ ಮನವಿಗೆ ಭುವಿ ಖರೀದಿ ಎಂದ ಆರ್‌ಸಿಬಿ
Advertisement
🚨 THE HISTORIC MOMENT IN IPL 🚨
– 13 YEAR OLD VAIBHAV SURYAVANSHI BECOMES YOUNGEST TO PART OF IPL. 🤯
VAIBHAV SURYAVANSHI FROM Bihar SOLD TO RR FOR 1.1 Crore.#TATAIPLAuction #IPL2025 #IPLAuctiononJioStar #VaibhavSuryavanshi pic.twitter.com/9uFPMZ9kOm
— Altaf Ansari (الطاف ) (@officialaltaff) November 25, 2024
2023 ರಲ್ಲಿ ರಣಜಿ ಟೂರ್ನಿಗೆ ಪಾದಾರ್ಪಣೆ ಮಾಡಿದ್ದ ಸೂರ್ಯವಂಶಿ, ಆ ಬಳಿಕ ಬಿಹಾರ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ರಣಧೀರ್ ವರ್ಮಾ ಅಂಡರ್ 19 ಏಕದಿನ ಟೂರ್ನಿಯಲ್ಲಿ ಕಣಕ್ಕಿಳಿದಿದ್ದರು. ಈ ಪಂದ್ಯದಲ್ಲಿ ತ್ರಿಶತಕ ಸಿಡಿಸುವ ಮೂಲಕ ಈ ಸಾಧನೆ ಮಾಡಿದ ಮೊದಲ ಭಾರತೀಯ ಎಂಬ ಖ್ಯಾತಿಗೆ ಪಾತ್ರರಾಗಿದ್ದರು. ಕಳೆದ ತಿಂಗಳು ಆಸ್ಟ್ರೇಲಿಯಾದ ಅಂಡರ್-19 ತಂಡದ ವಿರುದ್ಧ 64 ಎಸೆತಗಳಲ್ಲಿ 104 ರನ್ ಸಿಡಿಸಿ ಮಿಂಚಿದ್ದರು. ಈ ವೇಳೆ ಅವರು ಕೇವಲ 58 ಎಸೆತಗಳಲ್ಲಿ ಶತಕ ಪೂರೈಸಿ, ಅಂಡರ್-19 ಟೆಸ್ಟ್‌ನಲ್ಲಿ ಅತಿ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟ್ಸ್‌ಮನ್ ಆಗಿ ಹೊರಹೊಮ್ಮಿದ್ದಾರೆ.
Advertisement
ಸೂರ್ಯವಂಶಿ ಈವರೆಗೆ ಒಟ್ಟು 49 ಶತಕಗಳನ್ನು ಸಿಡಿಸಿದ್ದಾರೆ. ಇದರಿಂದಲೇ ವೈಭವ್ ಹೆಸರು ಹರಾಜು ಪಟ್ಟಿಯಲ್ಲಿ ಕಾಣಿಸಿಕೊಂಡಿತ್ತು.