IPL ವೇದಿಕೆಯಲ್ಲಿ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ಡ್ಯಾನ್ಸ್ ಧಮಾಕ

Public TV
1 Min Read
AKSHAY KUMAR 2

17ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ (IPL) ಅದ್ಧೂರಿಯಾಗಿ ಇಂದು (ಮಾ.22) ಚಾಲನೆ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್ (Akshay Kumar), ಟೈಗರ್ ಶ್ರಾಫ್ (Tiger Shroff) ಡ್ಯಾನ್ಸ್ ಮೂಲಕ ರಂಗೇರಿಸಿದ್ದಾರೆ. ಹಿಂದಿ ಚಿತ್ರದ ಸುಂದರ ಹಾಡುಗಳಿಗೆ ಇಬ್ಬರೂ ಹೆಜ್ಜೆ ಹಾಕಿದ್ದಾರೆ.

akshay kumar

ಚೇಪಾಕ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭವನ್ನು ಬಿಸಿಸಿಐ ಆಯೋಜಿಸಿದೆ. ಮಾ.22ರ ಸಂಜೆ 6:30ಕ್ಕೆ ಸಮಾರಂಭ ಆರಂಭವಾಗಿದೆ. ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ಹೆಜ್ಜೆ ಹಾಕುವ ಮೂಲಕ ಐಪಿಎಲ್ ಕ್ರಿಕೆಟ್ ಪ್ರೇಕ್ಷಕರಿಗೆ ರಂಜಿಸಿದ್ದಾರೆ. ವೇದಿಕೆಗೆ ಎಂಟ್ರಿ ಕೊಡುವಾಗಲೇ ತ್ರಿವರ್ಣ ಧ್ವಜ ಹಿಡಿದು ಅಕ್ಷಯ್‌ ಕುಮಾರ್‌ ಹೆಜ್ಜೆ ಹಾಕಿದ್ದಾರೆ. ಇದನ್ನೂ ಓದಿ:ರಾಧಿಕಾ ಪಂಡಿತ್‌ಗೆ ಸಿಕ್ಕರು ಕ್ಯೂಟ್ ಫೋಟೋಗ್ರಾಫರ್

ಖ್ಯಾತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್, ಖ್ಯಾತ ಗಾಯಕ ಸೋನು ನಿಗಮ್ (Sonu Nigam) ಸೇರಿದಂತೆ ಪ್ರಮುಖರು ಪ್ರೇಕ್ಷಕರನ್ನು ರಂಜಿಸಿದ್ದಾರೆ. ಐಪಿಎಲ್ (IPL 2024) ಸುಂದರ ಸಂಜೆಗೆ ಎ.ಆರ್ ರೆಹಮಾನ್ ಮತ್ತು ಸೋನು ನಿಗಮ್ ಹಾಡು ಪ್ರೇಕ್ಷಕರಿಗೆ ಕಿಕ್ ಸ್ಟಾರ್ಟ್ ಕೊಟ್ಟಿದೆ.

ಇಂದಿನ ಮೊದಲ ಮ್ಯಾಚ್, ಚೆನ್ನೈ ಸೂಪರ್ ಕಿಂಗ್ಸ್ (CSK) ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸೆಣಸಾಡಲಿದೆ. ಈ ಪಂದ್ಯ ರಾತ್ರಿ 8 ಗಂಟೆಗೆ ಶುರುವಾಗಲಿದೆ.‌

Share This Article