ಮುಂಬೈ: 16ನೇ ಆವೃತ್ತಿಯ ಐಪಿಎಲ್‌ನ ಪ್ಲೇ ಆಫ್ಸ್ ಹಾಗೂ ಫೈನಲ್ ಪಂದ್ಯಗಳ ವೇಳಾಪಟ್ಟಿಯನ್ನು (IPL Playoffs Schedule) ಬಿಸಿಸಿಐ (BCCI) ಪ್ರಕಟಿಸಿದ್ದು, ಮೇ 28 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಫೈನಲ್ ಪಂದ್ಯ ನಡೆಯಲಿದೆ.
ಮೇ 23ರಂದು ಮೊದಲ ಕ್ವಾಲಿಫೈಯರ್, ಮೇ 24ರಂದು ಎಲಿಮಿನೇಟರ್ ಪಂದ್ಯಗಳು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ನಡೆಯಲಿವೆ. ಮೇ 26ರಂದು 2ನೇ ಎಲಿಮಿನೇಟರ್ ಪಂದ್ಯ ನಡೆಯಲಿದ್ದು, ಮೇ 28ರಂದು ಫೈನಲ್ ಪಂದ್ಯ ನಡೆಯಲಿದೆ. ಇದನ್ನೂ ಓದಿ: ಜಡೇಜಾ ಜಾದು, ಕಾನ್ವೆ ಕಿಕ್ – ತವರಿನಲ್ಲಿ ತಿಣುಕಾಡಿ ಗೆದ್ದ ಚೆನ್ನೈ; ಹೈದರಾಬಾದ್ ವಿರುದ್ಧ 7 ವಿಕೆಟ್‌ಗಳ ಜಯ
Advertisement
Advertisement
ಮೇ 21ಕ್ಕೆ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಳ್ಳಲಿದ್ದು, ಅಗ್ರಸ್ಥಾನದಲ್ಲಿರುವ 4 ತಂಡಗಳು ಪ್ಲೇ ಆಫ್ಸ್ ಪ್ರವೇಶಿಸಲಿವೆ. ಪ್ಲೇ ಆಫ್ಸ್‌ನ ಮೊದಲ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಸೋತ ತಂಡಕ್ಕೆ ಮತ್ತೊಂದು ಅವಕಾಶ ಸಿಗಲಿದೆ. ಮೊದಲ ಹಂತದ ಎಲಿಮಿನೇಟರ್ ಪಂದ್ಯದಲ್ಲಿ ಗೆದ್ದ ತಂಡದೊಂದಿಗೆ 2ನೇ ಹಂತದ ಎಲಿಮಿನೇಟರ್ ಪಂದ್ಯದಲ್ಲಿ ಸೆಣಸಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್ ಪ್ರವೇಶಿಸಲಿದೆ. ಇದನ್ನೂ ಓದಿ: AisaCup: ಕೊನೆಗೂ ಭಾರತದ ಎದುರು ಮಂಡಿಯೂರಿದ ಪಾಕ್ – ICCಗೆ ಕಳಿಸಿರೋ ಪ್ರಸ್ತಾವನೆಯಲ್ಲಿ ಏನಿದೆ?
Advertisement
Advertisement
ಕಳೆದ ವರ್ಷವೂ 2ನೇ ಕ್ವಾಲಿಫೈಯರ್ ಹಾಗೂ ಫೈನಲ್ ಪಂದ್ಯಗಳು ಅಹಮದಾಬಾದ್‌ನಲ್ಲೇ ನಡೆದಿದ್ದವು. ಮೊದಲ ಕ್ವಾಲಿಫೈಯರ್ ಹಾಗೂ ಎಲಿಮಿನೇಟರ್ ಪಂದ್ಯಗಳು ಕೋಲ್ಕತಾದಲ್ಲಿ ನಡೆದಿತ್ತು. ಈ ವರ್ಷ ಉದ್ಘಾಟನಾ ಸಮಾರಂಭ ಹಾಗೂ ಫೈನಲ್ ಪಂದ್ಯಕ್ಕೂ ಮೋದಿ ಕ್ರೀಡಾಂಗಣವನ್ನೇ ಬಿಸಿಸಿಐ ಆಯ್ಕೆ ಮಾಡಿದೆ.