IPL: ರಾಜಸ್ಥಾನ್ ರಾಯಲ್ಸ್ ಕೋಚ್ ಆಗ್ತಾರಾ ರಾಹುಲ್ ದ್ರಾವಿಡ್!

Public TV
1 Min Read
rahul dravid

ನವದೆಹಲಿ: ಟೀಂ ಇಂಡಿಯಾ ಕೋಚ್ ಸ್ಥಾನ ತೊರೆದಿರುವ ರಾಹುಲ್ ದ್ರಾವಿಡ್ (Rahul Dravid) ರಾಜಸ್ಥಾನ ರಾಯಲ್ಸ್ ಐಪಿಎಲ್ (IPL) ಟೀಂ ಹೆಡ್ ಕೋಚ್ ಆಗಿ ಆಯ್ಕೆಯಾಗಲಿದ್ದಾರೆ ಎಂದು ಆಂಗ್ಲ ದೈನಿಕ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

ರಾಜಸ್ಥಾನ ರಾಯಲ್ಸ್ (Rajasthan Royals) ತಂಡದ ಮುಖ್ಯಸ್ಥರು ಹಾಗೂ ರಾಹುಲ್ ದ್ರಾವಿಡ್ ಜೊತೆ ಮಾತುಕತೆ ನಡೆಯುತ್ತಿದೆ. ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ಹೇಳಿಕೆ ಘೋಷಣೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: Paris Olympic 2024: ಭಾರತೀಯ ಕ್ರೀಡಾಪಟುಗಳಿಗೆ 8.5 ಕೋಟಿ ನೆರವು ಘೋಷಿಸಿದ ಬಿಸಿಸಿಐ

Rajasthan Royals Kolkata Knight Riders Ipl 2024 2

51 ವರ್ಷದ ರಾಹುಲ್ ದ್ರಾವಿಡ್ ಕೆಕೆಆರ್ ತಂಡದಲ್ಲಿ ಗೌತಂ ಗಂಭೀರ್ ಸ್ಥಾನಕ್ಕೆ ಆಯ್ಕೆಯಾಗಬಹುದು ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ದ್ರಾವಿಡ್ ಅವರು ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೇರ್ಪಡೆಯಾಗುವ ಸಾಧ್ಯತೆಯೇ ಅಧಿಕ ಎನ್ನಲಾಗಿದೆ. 2013, 2014 ಮತ್ತು 2015ರಲ್ಲೂ ದ್ರಾವಿಡ್ ಅವರು ರಾಜಸ್ಥಾನ ತಂಡದ ಭಾಗವಾಗಿದ್ದರು.

2015ರ ಬಳಿಕ ಬಿಸಿಸಿಐ ಜೊತೆ ಕೈಜೋಡಿಸಿದ್ದ ದ್ರಾವಿಡ್ ಅಂಡರ್ 19 ಹಾಗೂ ಇಂಡಿಯಾ ಎ ಟೀಂ ಕೋಚ್ ಆಗಿದ್ದರು. ಬಳಿಕ ನ್ಯಾಷನಲ್ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾದರು. 2021ರ ಅಕ್ಟೋಬರ್ ತಿಂಗಳಿನಿಂದ ಅವರು ಟೀಂ ಇಂಡಿಯಾ ಹೆಡ್ ಕೋಚ್ ಆಗಿದ್ದರು. ಇದನ್ನೂ ಓದಿ: Women’s Asia Cup: ರಿಚಾ ಸ್ಫೋಟಕ ಅರ್ಧಶಕ – ಭಾರತಕ್ಕೆ 78 ರನ್‌ಗಳ ಭರ್ಜರಿ ಜಯ; ಸೆಮಿಸ್‌ಗೆ ಇನ್ನೊಂದೇ ಹೆಜ್ಜೆ!

ರಾಹುಲ್ ದ್ರಾವಿಡ್ ಕೋಚ್ ಆದರೆ 2021ರಿಂದ ರಾಯಲ್ಸ್ ತಂಡದ ನಿರ್ದೇಶಕರಾಗಿರುವ ಕುಮಾರ ಸಂಗಕ್ಕಾರ ತಂಡದ ಜೊತೆಯಲ್ಲೇ ಉಳಿಯುತ್ತಾರಾ ಇಲ್ಲವೋ ಎಂಬ ಪ್ರಶ್ನೆಗೆ ಇನ್ನಷ್ಟೇ ಉತ್ತರ ಸಿಗಬೇಕಿದೆ.

Share This Article