ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದೆ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ಹಾಗೂ ಸನ್ ರೈಸರ್ಸ್ ಹೈದರಾಬಾದ್ (Sunrisers Hyderabad) ತಂಡದ ನಡುವಿನ ಐಪಿಎಲ್ ಪಂದ್ಯದಲ್ಲಿ ಹೈದರಾಬಾದ್ 67 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಸ್ಪೋಟಕ ಬ್ಯಾಟಿಂಗ್‌ನಿಂದ 6 ಓವರ್‌ಗಳಲ್ಲಿ 125 ರನ್‌ಗಳನ್ನು ಕಲೆಹಾಕಿ ಉತ್ತಮ ಆರಂಭ ಪಡೆದುಕೊಂಡಿತು. ತಂಡದ ಪರ ಟ್ರಾವಿಸ್ ಹೆಡ್ 32 ಎಸೆತಗಳಲ್ಲಿ 11 ಬೌಂಡರಿ ಹಾಗೂ 6 ಸಿಕ್ಸರ್ ನೆರವಿನಿಂದ 89 ರನ್ ಗಳಿಸಿದರೆ, ಶಹಬಾಜ್ 29 ಎಸೆತಗಳಲ್ಲಿ ಎರಡು ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 59 ರನ್ ಗಳಿಸಿ ಅಜೇಯರಾಗಿ ಉಳಿದರು. ಈ ಮೂಲಕ ನಿಗದಿತ ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ ಎದುರಾಳಿ ತಂಡದ ಗೆಲುವಿಗೆ 267 ರನ್‌ಗಳ ಗುರಿ ನೀಡಿತು. ಇದನ್ನೂ ಓದಿ: ರನ್ ಹೊಳೆಯಲ್ಲಿ ತೇಲಾಡಿದ ಸನ್ ರೈಸರ್ಸ್ – ಒಂದೇ ಇನ್ನಿಂಗ್ಸ್‌ನಲ್ಲಿ 4 ದಾಖಲೆ ಉಡೀಸ್!
ಈ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಕ್ಯಾಪಿಟಲ್ಸ್ 19.1 ಓವರ್‌ಗಳಲ್ಲಿ 199 ರನ್‌ಗಳನ್ನು ಕಲೆ ಹಾಕಿ ಹೈದರಾಬಾದ್ ತಂಡಕ್ಕೆ ಶರಣಾಯಿತು.
ಡೆಲ್ಲಿ ಕ್ಯಾಪಿಟಲ್ಸ್ ಪರ 18 ಎಸೆತಗಳಲ್ಲಿ ಜಾಕ್ ಫ್ರೇಸರ್ ಮೆಕ್‌ಗುರ್ಕ್ 7 ಸಿಕ್ಸರ್ ಹಾಗೂ 5 ಬೌಂಡರಿ ಸಿಡಿಸಿ 65 ರನ್ ಕಲೆ ಹಾಕಿ ವಿಕೆಟ್ ಒಪ್ಪಿಸಿದರು. ರಿಷಬ್ ಪಂತ್ 35 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಬೌಂಡರಿಗಳ ನೆರವಿನಿಂದ 44 ರನ್ ಕಲೆ ಹಾಕಿ ಪೆವಿಲಿಯನ್‌ಗೆ ಮರಳಿದರು. ಅಭಿಷೇಕ್ ಪೊರೆಲ್ 22 ಎಸೆತಗಳಲ್ಲಿ 7 ಬೌಂಡರಿ ಸಿಡಿಸಿ 1 ಸಿಕ್ಸರ್ ನೆರವಿನಿಂದ 42 ರನ್ ಗಳಿಸಿ ಔಟಾದರು. ಉಳಿದಂತೆ ಪೃಥ್ವಿ ಶಾ 16, ಟ್ರಿಸ್ಟಾನ್ ಸ್ಟಬ್ಸ್ 10 ರನ್ ಕಲೆ ಹಾಕಿ ಪೆವಿಲಿಯನ್‌ಗೆ ಮರಳಿದರು.
ಎಸ್‌ಆರ್‌ಹೆಚ್ ಪರ ಅಭಿಷೇಕ್ ಶರ್ಮಾ 12 ಎಸೆತಗಳಲ್ಲಿ 6 ಸಿಕ್ಸರ್ ಹಾಗೂ 2 ಬೌಂಡರಿ ನೆರವಿನಿಂದ 46 ರನ್ ಕಲೆಹಾಕಿ ಔಟಾದರು. ನಿತೀಶ್ ಕುಮಾರ್ ರೆಡ್ಡಿ 27 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 2 ಬೌಂಡರಿ ನೆರವಿನಿಂದ 37 ರನ್ ಗಳಿಸಿ ಔಟಾದರು. ಹೆನ್ರಿಚ್ ಕ್ಲಾಸೆನ್ 15, ಅಬ್ದುಲ್ ಸಮದ್ 13 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದರು.
ಡೆಲ್ಲಿ ಪರ ಕುಲ್‌ದೀಪ್ ಯಾದವ್ 4 ಓವರ್‌ಗಳಲ್ಲಿ 55 ರನ್ ನೀಡಿ 4 ವಿಕೆಟ್, ಮುಕೇಶ್ ಕುಮಾರ್ 4 ಓವರ್‌ಗಳಲ್ಲಿ 57 ರನ್ ನೀಡಿ 1 ವಿಕೆಟ್ ಹಾಗೂ ಅಕ್ಸರ್ ಪಟೇಲ್ 4 ಓವರ್‌ಗಳಲ್ಲಿ 29 ರನ್ ನೀಡಿ 1 ವಿಕೆಟ್ ಉರುಳಿಸಿದರು. ಇದನ್ನೂ ಓದಿ: IPL 2024: ರನ್ ಹೊಳೆ, ದಾಖಲೆಗಳ ಸುರಿಮಳೆ – ಐಪಿಎಲ್‌ನಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ಬರೆದ ಸನ್ ರೈಸರ್ಸ್