ಮುಂಬೈ: ವೃದ್ಧಿಮಾನ್ ಸಾಹಾ ಅವರ ಜವಾಬ್ದಾರಿ ಅರ್ಧಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವು ಚೆನ್ನೈ ವಿರುದ್ಧ 7 ವಿಕೆಟ್‌ಗಳ ಜಯ ದಾಖಲಿಸಿತು.
ಚೆನ್ನೈ ಸೂಪರ್‌ಕಿಂಗ್ಸ್ ತಂಡವು ನೀಡಿದ 134 ರನ್‌ಗಳ ಗುರಿ ಬೆನ್ನತ್ತಿದ ಬಲಿಷ್ಠ ಗುಜರಾತ್ ಟೈಟಾನ್ಸ್ ತಂಡವು 19.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 137 ರನ್‌ಗಳನ್ನು ಬಾರಿಸುವ ಮೂಲಕ ಹಾಲಿ ಚಾಂಪಿಯನ್ಸ್‌ಗೆ ಸೋಲುಣಿಸಿತು. ಇದನ್ನೂ ಓದಿ: ಕಪಿಲ್ ಕ್ರಿಕೆಟ್ ಕ್ಲಬ್‍ನಿಂದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರ – ವೃತ್ತಿಪರ ಕ್ರಿಕೆಟ್‍ಗೆ ಪೂರಕವಾಗಿ ಆಯೋಜನೆ
Advertisement
Advertisement
ಟಾಸ್‌ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 133 ಸಾಧಾರಣ ರನ್‌ಗಳ ಮೊತ್ತವನ್ನು ದಾಖಲಿಸಿತು. 134 ರನ್‌ಗಳ ಗುರಿ ಬೆನ್ನತ್ತಿದ ಟೈಟಾನ್ಸ್ ತಂಡವು 19.1 ಓವರ್‌ನಲ್ಲೇ 137 ರನ್‌ಗಳಿಸುವ ಮೂಲಕ ನಿರಾಯಾಸವಾಗಿ ಸೋಲುಣಿಸಿತು.
Advertisement
ಆರಂಭದಲ್ಲಿ ಉತ್ತಮ ಪ್ರದರ್ಶನ ನೀಡಿದ ವೃದ್ಧಿಮಾನ್ ಸಾಹಾ ಹಾಗೂ ಶುಭಮನ್‌ಗಿಲ್ ಚೆನ್ನೈ ಬೌಲರ್‌ಗಳನ್ನು ಬೆಂಡೆತ್ತಿದರು. ಈ ಇಬ್ಬರ ಜೊತೆಯಾಟ 43 ಎಸೆತಗಳಲ್ಲಿ 59 ರನ್‌ಗಳನ್ನು ಕಲೆಹಾಕಿತು. ಇದೇ ವೇಳೆ 17 ಎಸೆತಗಳಲ್ಲಿ 18 ರನ್‌ಗಳಿಸಿದ ಶುಭಮನ್‌ಗಿಲ್ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿದರು.
Advertisement
ಮಿಂಚಿದ ಸಾಹಾ: ಆರಂಭಿಕ ಆಟಗಾರನಾಗಿ ಕ್ರೀಸ್‌ಗಿಳಿದ ವೃದ್ಧಿಮಾನ್ ಸಾಹಾ 67 ರನ್‌ಗಳಿಸಿ ಅಜೇಯರಾಗುಳಿದರು. 57 ಎಸೆತಗಳಲ್ಲಿ 8 ಬೌಂಡರಿ ಹಾಗೂ 1 ಸಿಕ್ಸರ್‌ಗಳ ಸಹಾಯದಿಂದ 67 ರನ್‌ಗಳಿಸಿ ಟೈಟಾನ್ಸ್ ಗೆಲುವಿಗೆ ನೆರವಾದರು. ಮಧ್ಯಮ ಕ್ರಮಾಂಕದಲ್ಲಿ ಬಂದ ಕ್ರೀಸ್‌ಗಿಳಿದ ಡೇವಿಡ್ ಮಿಲ್ಲರ್ 20 ಎಸೆತಗಳಲ್ಲಿ 15 ರನ್‌ಗಳಿಸಿ ಅಜೇಯರಾಗುಳಿದರು. ಇದನ್ನೂ ಓದಿ: ಉದ್ದನೆ ಕೂದಲಿನ, ತುಟಿಗೆ ಬಣ್ಣ ಹಚ್ಚಿ ದೈತ ದಾಂಡಿಗನಾಗಿ ಗಮನಸೆಳೆದ ಸೈಮಂಡ್ಸ್ ಇನ್ನು ನೆನಪು ಮಾತ್ರ
ವೇಳೆ ಮ್ಯಾಥಿವ್ ಏಡ್ 15 ಎಸೆತಗಳಲ್ಲಿ 2 ಬೌಂಡರಿಗಳೊಂದಿಗೆ 20 ರನ್‌ಗಳಿಸುವ ಮೂಲಕ ಉತ್ತಮ ಸಾಥ್ ನೀಡಿದರು. ಹಾರ್ದಿಕ್ ಪಾಂಡ್ಯ 7 ರನ್‌ಗಳಿಸಿ ಪೆವಿಲಿಯನ್ ಸೇರಿದರು. ಗುಜರಾತ್ ತಂಡದ ಪರ ಮೊಹಮ್ಮದ್ ಶಮಿ 2 ವಿಕೆಟ್ ಗಳಿಸಿ ಮಿಂಚಿದರು.
ಋತುರಾಜ್ ಅರ್ಧಶತಕ: ಋತುರಾಜ್ ಗಾಯಕ್ವಾಡ್ ಸಮಯೋಚಿತ ಅರ್ಧಶತಕದ (53) ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಐಪಿಎಲ್-2022 ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ 5 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಿತು.
ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ಡಿವೋನ್ ಕಾನ್ವೆ 5 ರನ್‌ಗಳಿಸಿ ನಿರ್ಗಮಿಸಿದರು. 2ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಯಿನ್ ಅಲಿ ಮತ್ತೋರ್ವ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಅವರ ಜೊತೆ ಅರ್ಧಶತಕದ ಆಟಕ್ಕೆ ಜೊತೆಯಾದರು. ರಕ್ಷಣಾತ್ಮಕ ಇನ್ನಿಂಗ್ಸ್ ಕಟ್ಟಿದ ಋತುರಾಜ್ ಅರ್ಧಶತಕ ಗಳಿಸಿದರು. ಆದರೆ 53 ರನ್‌ಗಳ ಬೆನ್ನಲ್ಲೇ ಔಟ್ ಆದರು. 49 ಎಸೆತಗಳನ್ನು ಎದುರಿಸಿದ ಗಾಯಕ್ವಾಡ್ ಸಿಕ್ಸರ್ ನೆರವಿನಿಂದ 53 ರನ್ (1 ಸಿಕ್ಸರ್, 4 ಬೌಂಡರಿ) ಗಳಿಸಿದರು.
ಭರವಸೆ ಆಟಗಾರ ಶಿವಂ ದುಬೆ ಸಹ ಖಾತೆ ತೆರೆಯುವಲ್ಲಿ ವಿಫಲರಾದರು. ನಾಯಕ ಮಹೇಂದ್ರ ಸಿಂಗ್ ಧೋನಿ ಸಹ 7 ರನ್‌ಗಳಿಸಿ ಔಟಾದರು. ಮಧ್ಯಮ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದ ನಾರಾಯಣ್ ಜಗದೀಶನ್ 33 ಎಸೆತಗಳಲ್ಲಿ 39 ರನ್‌ಗಳಿಸಿ ಉತ್ತಮ ಇನ್ನಿಂಗ್ಸ್ ಕಟ್ಟಿದ್ದರು. ಇದು ತಂಡ 130 ರನ್‌ಗಳ ಗಡಿ ದಾಟಲು ಸಾಧ್ಯವಾಯಿತು.
ಆರಂಭದಿಂದಲೇ ನಿಧಾನಗತಿಯ ಬ್ಯಾಟಿಂಗ್ ಪ್ರದರ್ಶನದಿಂದ ಚೆನ್ನೈ ರನ್‌ಗಳ ಹಿನ್ನಡೆಗೆ ಕಾರಣವಾಯಿತು. ಅಂತಿಮವಾಗಿ 5 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಲಷ್ಟೇ ಸಾಧ್ಯವಾಯಿತು.