ಮುಲ್ಲನಪುರ: ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ಉತ್ತಮ ಪ್ರದರ್ಶನ ತೋರಿದ ಗುಜರಾತ್ ಟೈಟಾನ್ಸ್ (Gujarat Titans) ಪಂಜಾಬ್ ಕಿಂಗ್ಸ್(Punjab Kings) ವಿರುದ್ಧ 3 ವಿಕೆಟ್‌ಗಳ ಜಯ ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿ ಪಂಜಾಬ್ 20 ಓವರ್‌ಗಳಲ್ಲಿ 142 ರನ್‌ಗಳಿಗೆ ಆಲೌಟ್ ಆಯ್ತು. ಸುಲಭ ಸವಾಲನ್ನು ಬೆನ್ನಟ್ಟಿದ ಗುಜರಾತ್ 19.1 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 146 ರನ್ ಹೊಡೆದು ಜಯಗಳಿಸಿತು.
Advertisement
Rahul Tewatia the man again who is at the finishing line guiding them home 😎
Gujarat Titans have come up on 🔝 in Mullanpur with a clinical performance and have settled their scores with #PBKS 🙌
Scorecard ▶️ https://t.co/avVO2pCwJO#TATAIPL | #PBKSvGT | @gujarat_titans pic.twitter.com/h8BiuB7UVT
— IndianPremierLeague (@IPL) April 21, 2024
Advertisement
ಈ ಪಂದ್ಯವನ್ನು ಗೆಲ್ಲುವ ಮೂಲಕ 8ನೇ ಸ್ಥಾನದಲ್ಲಿದ್ದ ಗುಜರಾತ್ 6ನೇ ಸ್ಥಾನಕ್ಕೆ ಜಿಗಿದಿದೆ.
Advertisement
ಗುಜರಾತ್ ಪರ ನಾಯಕ ಶುಭಮನ್ ಗಿಲ್ 35 ರನ್ (29 ಎಸೆತ, 5 ಬೌಂಡರಿ), ಸಾಯಿ ಸುದರ್ಶನ್ 31 ರನ್(34 ಎಸೆತ, 3 ಬೌಂಡರಿ) ಕೊನೆಯಲ್ಲಿ ರಾಹುಲ್ ತೆವಾಟಿಯ ಔಟಾಗದೇ 36 ರನ್(18 ಎಸೆತ, 7 ಬೌಂಡರಿ) ಹೊಡೆದು ತಂಡಕ್ಕೆ ಜಯ ತಂದುಕೊಟ್ಟರು. ಪಂಜಾಬ್ ಪರ ಹರ್ಷಲ್ ಪಟೇಲ್ 3 ವಿಕೆಟ್, ಲಿವಿಂಗ್‌ಸ್ಟೋನ್ 2 ವಿಕೆಟ್ ಕಿತ್ತರು.
Advertisement
Chopped 🔛 ⚡️
Captain Curran gets the stumps & Mullanpur to light 🆙 with that big wicket ❤️
Watch the match LIVE on @StarSportsIndia and @JioCinema 💻📱#TATAIPL | #PBKSvGT pic.twitter.com/srsUcR2c02
— IndianPremierLeague (@IPL) April 21, 2024
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಪಂಜಾಬ್ ಉತ್ತಮ ಆರಂಭ ಪಡೆದಿತ್ತು. ಮೊದಲ ವಿಕೆಟಿಗೆ 52 ರನ್ ಜೊತೆಯಾಟ ಬಂದಿತ್ತು. ನಂತರ ನಿರಂತರ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಇದನ್ನೂ ಓದಿ: IPL 2024: ಹೆಚ್ಚುವರಿ 20 ರನ್ ಕೊಟ್ಟಿದ್ದೇ ಆರ್‌ಸಿಬಿಗೆ ಮುಳುವಾಯ್ತಾ? – ಗ್ರೀನ್ ಬಾಯ್ಸ್ ಎಡವಿದ್ದೆಲ್ಲಿ?
Shashank Singh falls to Sai Kishore, who continues to impress 👏👏
Watch the match LIVE on @JioCinema and @StarSportsIndia 💻📱#TATAIPL | #PBKSvGT pic.twitter.com/CbPk7axPPb
— IndianPremierLeague (@IPL) April 21, 2024
ಪಂಜಬ್ ಪರ ಪ್ರಭ್‌ಸಿಮ್ರಾನ್ ಸಿಂಗ್ 35 ರನ್ ( 21 ಎಸೆತ, 3 ಬೌಂಡರಿ, 3 ಸಿಕ್ಸರ್), ಹರ್‌ಪ್ರೀತ್ ಬ್ರಾರ್ 29 ರನ್ (12 ಎಸೆತ, 4 ಬೌಂಡರಿ, 1 ಸಿಕ್ಸರ್) ಸಿಡಿಸಿದ ಪರಿಣಾಮ ತಂಡದ ಮೊತ್ತ 140 ರನ್‌ಗಳ ಗಡಿ ದಾಟಿತು. ಗುಜರಾತಿನ ಸಾಯ್ ಕಿಶೋರ್ 4 ವಿಕೆಟ್ ಕಿತ್ತರೆ ನೂರ್ ಅಹ್ಮದ್ ಮತ್ತು ಮೋಹಿತ್ ಶರ್ಮಾ ತಲಾ 2 ವಿಕೆಟ್ ಪಡೆದರು.