ಕೈಯಲ್ಲಿ ಖಡ್ಗ ಹಿಡಿದು ರಾಣಿಯಂತೆ ಕಂಗೊಳಿಸಿ ಅಚ್ಚರಿ ಮೂಡಿಸಿದ IPS ರೂಪಾ

Public TV
1 Min Read
ROOPA

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ (IPS Officer Roopa) ಅವರು ಎಲ್ಲರಿಗೂ ಚಿರಪರಿಚಿತ. ಖಡಕ್ ಪೊಲೀಸ್ ಅಧಿಕಾರಿಯಾಗಿರುವ ರೂಪಾ ಅವರು ಒಂದು ಫೋಟೋಶೂಟ್ ಮೂಲಕ ಇದೀಗ ಭಾರೀ ಸುದ್ದಿಯಾಗಿದ್ದಾರೆ.

ಹೌದು. ನಾಡಿನೆಲ್ಲೆಡೆ ದಸರಾ ಹಬ್ಬದ ಸಂಭ್ರಮ ಮನೆ ಮಾಡಿದೆ. ಅಂತೆಯೇ ಹಬ್ಬದ ಪ್ರಯುಕ್ತ ಕೆಲವರು ಫೋಟೋಶೂಟ್ (D Roopa Photoshoot) ಮಾಡಿಸಿಕೊಳ್ಳುತ್ತಿದ್ದಾರೆ. ಅಂತೆಯೇ ಇಂದು ಖಡಕ್ ಅಧಿಕಾರಿ ಕೂಡ ಲಾಠಿ ಹಿಡಿಯುವ ಕೈಯಲ್ಲಿ ಖಡ್ಗ ಹಿಡಿದು ವಿಭಿನ್ನವಾಗಿ ಫೋಟೋಶೂಟ್ ಮಾಡಿಸಿಕೊಂಡಿದ್ದು, ಇದೀಗ ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಪೊಲೀಸ್ ಯೂನಿಫಾರ್ಮ್‍ನಲ್ಲಿ ಇರುತ್ತಿದ್ದ ರೂಪಾ ಅವರು ಇದೀಗ ಕೈಯಲ್ಲಿ ಖಡ್ಗ ಹಿಡಿದು, ಕೆಂಪು ಸೀರೆ, ಹಸಿರು ಬಣ್ಣ ಬ್ಲೌಸ್, ಮೈತುಂಬಾ ಆಭರಣ ತೊಟ್ಟು ಸಿಂಹಾಸನದಲ್ಲಿ ಥೇಟ್ ರಾಣಿಯಂತೆ ಕಂಗೊಳಿಸುತ್ತಿದ್ದಾರೆ. ಹೆಣ್ಣು ನಾಲ್ಕು ಗೋಡೆಯೊಳಗೆ ಬಂಧಿಯಲ್ಲ, ಆಕೆಯೊಳಗೊಂದು ಶಕ್ತಿ ಇದೆ. ಸಮಾಜದಲ್ಲಿ ಸವಾಲುಗಳನ್ನು ಎದುರಿಸಿ ನಿಲ್ಲುವುದರ ಜೊತೆಗೆ ಯಾವುದೇ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗುತ್ತಾಳೆ ಎಂಬುದಕ್ಕೆ ಡಿ ರೂಪಾ ಉತ್ತಮ ನಿದರ್ಶನ ಎಂದು ಫೋಟೋ ಅಪ್ಲೋಡ್ ಮಾಡಿರುವ ಭಾರ್ಗವಿ ಕೆ. ಆರ್ ಎಂಬವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದಸರಾ ಹಬ್ಬದ ಸಂಭ್ರಮದಲ್ಲಿ ಯಶ್- ರಾಧಿಕಾ ದಂಪತಿ

ರೂಪ ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಿದ್ದಂತೆಯೇ ಹಲವಾರು ಕಾಮೆಂಟ್‍ಗಳು ಬರತೊಡಗಿದವು. ಕೆಲವರು ಹ್ಯಾಟ್ಸಾಫ್ ತುಂಬಾ ಚೆನ್ನಾಗಿ ಕಾಣಿಸುತ್ತಿದ್ದೀರಿ ಅಂದ್ರೆ ಇನ್ನೂ ಕೆಲವರು ಕಿತ್ತೂರು ರಾಣಿ ಚೆನ್ನಮ್ಮ, ಅಬ್ಬಕ್ಕ ಹಾಗೂ ಜೈ ದುರ್ಗಿ ಅಂತೆಲ್ಲ ಕಾಮೆಂಟ್ ಮಾಡಿದ್ದಾರೆ. ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳಾ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ ಎಂದು ಫೋಟೋಗೆ ಶೀರ್ಷಿಕೆ ನೀಡಲಾಗಿದೆ.

Web Stories

Share This Article