ಬೆಂಗಳೂರು: ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ ಹೇಳಿದ್ದಾರೆ. ಪ್ರಸ್ತುತ ಇವರು ರೈಲ್ವೇ ಇಲಾಖೆಯ ಎಡಿಜಿಪಿಯಾಗಿದ್ದರು.
ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮಾಹಿತಿ ನೀಡಿ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ಸ್ವಯಂ ನಿವೃತ್ತಿ ಕೋರಿ 2021ರ ಸೆಪ್ಟೆಂಬರ್ 16ರಂದು ಅರ್ಜಿ ಸಲ್ಲಿಸಿದ್ದರು. ನಿರ್ಧಾರ ಪುನರ್ ಪರಿಶೀಲನೆಗೆ ಕೇಂದ್ರ ಗೃಹ ಸಚಿವಾಲಯ ಅವಕಾಶ ನೀಡಿತ್ತು.
Advertisement
Advertisement
3 ತಿಂಗಳೊಳಗೆ ಗೃಹ ಸಚಿವಾಲಯ ಸಂಬಂಧಿಸಿದ ಅಧಿಕಾರಿಯನ್ನ ಸಂಪರ್ಕಿಸಬೇಕು. 6 ತಿಂಗಳುಗಳೇ ಕಳೆದರೂ ಗೃಹ ಸಚಿವಾಲಯದ ಉತ್ತರ ಬಾರದ ಹಿನ್ನೆಲೆಯಲ್ಲಿ ಆಲ್ ಇಂಡಿಯಾ ಸರ್ವಿಸ್ ಆಕ್ಟ್ 16(2)ನಡಿ ಸೇವೆಗೆ ಗುಡ್ ಬೈ ಹೇಳಿದ್ದಾರೆ. ಇದನ್ನೂ ಓದಿ: ಅಪೌಷ್ಠಿಕತೆ, ಮಧುಮೇಹ ಖಾಯಿಲೆಯಿಂದ ಬಳಲುವವರಿಗೆ ಕ್ಷಯರೋಗದ ಸಾಧ್ಯತೆ ಹೆಚ್ಚು: ಡಾ. ಮಹೇಶ್ ಎಂ.ಜಿ
Advertisement
ಎಐಎಸ್ ಆಕ್ಟ್ 16(2) ಪ್ರಕಾರ ಸಂಬಂಧಿಸಿದ ಅಧಿಕಾರಿ 50 ವರ್ಷ ವಯಸ್ಸು ದಾಟಿರಬೇಕು. 20 ವರ್ಷ ಸೇವೆ ಪೂರ್ಣಗೊಳಿಸಿರಬೇಕು. ನಿವೃತ್ತಿಗೆ ಮನವಿ ಸಲ್ಲಿಸುವಾಗ ಅಮಾನತ್ತಿನಲ್ಲಿರಬಾರದು. ಎಐಎಸ್ ಆಕ್ಟ್ 16(2)ನಡಿ ನಿವೃತ್ತಿಗೆ ಅರ್ಹರಿರುವ ಕಾರಣ ಅಧಿಕೃತವಾಗಿ ಸೇವೆಗೆ ರಾಜೀನಾಮೆ ನಿಡಿದ್ದಾರೆ.