ಹೈದರಾಬಾದ್: ಕಾನೂನು ಸುವ್ಯವಸ್ಥೆ ಕಾಪಾಡಲು ಕೆಲವೊಮ್ಮೆ ಅಧಿಕಾರಿಗಳೇ ರಿಯಾಲಿಟಿ ಚೆಕ್‌ಗೆ ಇಳಿಯುತ್ತಾರೆ. ಅನೇಕ ಸಂದರ್ಭದಲ್ಲಿ ಖುದ್ದು ಅಧಿಕಾರಿಗಳೇ ಮಾರುವೇಷದಲ್ಲಿ ಹೋಗಿ ದೊಡ್ಡದೊಡ್ಡ ಪ್ರಕರಣಗಳನ್ನ ಬಯಲಿಗೆಳೆದಿರುವ ಉದಾಹರಣೆಗಳಿವೆ. ಹೈದರಾಬಾದ್‌ನಲ್ಲಿ ನಡೆದ ಘಟನೆ ಇದಕ್ಕೆ ತಾಜಾ ಉದಾಹರಣೆಯಾಗಿದೆ.
ಹೈದರಾಬಾದ್ (Hyderabad) ನಗರದ ಖಾಸಗಿ ಪಬ್‌ನಲ್ಲಿ ನಡೆಯುತ್ತಿದ್ದ ಸೆಕ್ಸ್ ದಂಧೆಯನ್ನ (sex rocket) ಬಯಲಿಗೆಳೆಯಲು ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ರಹಸ್ಯ ಕಾರ್ಯಾಚರಣೆ ನಡೆಸಿದ್ದಾರೆ. ಸಾಮಾನ್ಯ ಮಹಿಳೆಯಂತೆ ಪಬ್‌ಗೆ ತೆರಳಿ ರಹಸ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆಹಾಕಿದ್ದಾರೆ. ಬಳಿಕ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, 9 ಮಂದಿಯನ್ನ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ರಸಗೊಬ್ಬರ ಕೊರತೆ, ತೈಲ ಬೆಲೆ ಏರಿಕೆ; ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಕೇಂದ್ರದ ವಿರುದ್ಧ ರೈತರ ಪ್ರತಿಭಟನೆ
ಕಿಂಗ್ಸ್ & ಕ್ವೀನ್ಸ್ ಪಬ್‌ನಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಬಗ್ಗೆ ಆರೋಪ ಕೇಳಿಬಂದಿತ್ತು. ಪಬ್‌ಗೆ ಬರೋ ಯುವಕರನ್ನ ಸೆಳೆಯಲು ಯುವತಿಯರನ್ನು ಬಳಸಿಕೊಳ್ಳಲಾಗುತ್ತಿದೆ. ಈ ಮೂಲಕ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತದೆ ಅನ್ನೋ ಆರೋಪವೂ ಇತ್ತು. ಇದರ ವಿರುದ್ಧ ಡಿಸಿಪಿ ರಿತಿ ರಾಜ್ (Riti raj) ರಹಸ್ಯ ಕಾರ್ಯಾಚರಣೆ ನಡೆಸಿದ್ದರು. ಪಬ್‌ನಲ್ಲಿ ಅನೈತಿಕ ಚಟುವಟಿಕೆಗಳ ಬಗ್ಗೆ ಮಾಹಿತಿ ಕಲೆಹಾಕಿದ್ದರು. ಬಳಿಕ ಪೊಲೀಸ್ ತಂಡದೊಂದಿಗೆ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ʻದೀದಿʼಗೆ ದೊಡ್ಡ ಶಾಕ್ – ರಾಜ್ಯಸಭಾ ಸದಸ್ಯತ್ವಕ್ಕೆ ಸುಖೇಂದು ಶೇಖರ್, ಕೋಯೆಲ್ ಮಲ್ಲಿಕ್ ರಾಜೀನಾಮೆ
ದಾಳಿಯ ವೇಳೆ ಪಬ್‌ನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ದಾಳಿ ವೇಳೆ ನಾಲ್ವರು ಮಹಿಳೆಯರು ಮತ್ತು ಐವರು ಪುರುಷರು ಸೇರಿ ಒಟ್ಟು 9 ಸಿಬ್ಬಂದಿಯನ್ನು ವಶಕ್ಕೆ ಪಡೆಯಲಾಗಿದೆ. ಈ ಪಬ್ ವಿರುದ್ಧ ಈ ಹಿಂದೆಯೂ ಹಲವು ಪ್ರಕರಣಗಳು ದಾಖಲಾಗಿದ್ದವು. ಪ್ರಕರಣ ಸಂಬಂಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಹಾಗೂ ಅನೈತಿಕ ಮಾನವ ಸಾಗಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.
