– ಕರ್ನಾಟಕ ಕೇಡರ್‌ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದ ಹರ್ಷವರ್ಧನ್
– ವೃತ್ತಿ ಜೀವನದ ಆರಂಭದಲ್ಲೇ ವಿಧಿಯಾಟ
ಹಾಸನ: ಇಂದು ಟ್ರೈನಿಂಗ್ ಮುಗಿದಿತ್ತು. ನಾಳೆ ಡಿವೈಎಸ್‌ಪಿಯಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಇಂತಹ ಹೊತ್ತಿನಲ್ಲೇ ಅಧಿಕಾರಿ ಬಾಳಲ್ಲಿ ವಿಧಿಯಾಟವಾಡಿದೆ. ಡ್ಯೂಟಿ ರಿಪೋರ್ಟ್‌ಗೆ ಬಂದ ದಿನವೇ ಪ್ರೊಬೇಷನರಿ ಐಪಿಎಸ್ (IPS Probationer) ಅಧಿಕಾರಿ ಹರ್ಷವರ್ಧನ್, ಹಾಸನ ಬಳಿ (Hassan Accident) ಭೀಕರ ರಸ್ತೆ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.
Advertisement
Advertisement
ಹರ್ಷವರ್ಧನ್ ಅವರು ಮೈಸೂರಿನಲ್ಲಿರುವ ಕರ್ನಾಟಕದ ಪೊಲೀಸ್ ಅಕಾಡೆಮಿಯಲ್ಲಿ ಟ್ರೈನಿಂಗ್ ಮುಗಿಸಿದ್ದರು. ಬಳಿಕ ಐಜಿಪಿ ಬೋರಲಿಂಗಯ್ಯ ರಿಪೋರ್ಟ್ ಮಾಡಿಕೊಂಡಿದ್ದರು. ನಾಳೆ ಡಿವೈಎಸ್ಪಿ ಆಗಿ ಚಾರ್ಜ್ ತೆಗೆದುಕೊಳ್ಳಬೇಕಿತ್ತು. ಅದು ಸಾಧ್ಯವಾಗಲಿಲ್ಲ. ಇದನ್ನೂ ಓದಿ: ಹಾಸನದಲ್ಲಿ ಭೀಕರ ಅಪಘಾತ – ಐಪಿಎಸ್ ಅಧಿಕಾರಿ ದುರ್ಮರಣ
Advertisement
ಮೂಲತಃ ಬಿಹಾರ ಮೂಲದ ಹರ್ಷವರ್ಧನ್ ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ ವಾಸವಾಗಿದ್ದರು. ಮಧ್ಯಪ್ರದೇಶದ ಐಇಟಿಯಲ್ಲಿ ಡಿಎವಿಇ ಎಂಜಿನಿಯರಿಂಗ್ ಪದವಿ ಮಾಡಿದ್ದರು. 2022-23 ರ ಐಪಿಎಸ್ ಬ್ಯಾಚ್‌ನಲ್ಲಿ ತೇರ್ಗಡೆ ಹೊಂದಿ ಕರ್ನಾಟಕ ಕೇಡರ್‌ನಲ್ಲಿ ರಾಜ್ಯಕ್ಕೆ ಆಯ್ಕೆಯಾಗಿದ್ದರು.
Advertisement
2022 ರ ಯುಪಿಎಸ್‌ಸಿ ಪರೀಕ್ಷೆಯಲ್ಲಿ 153 ನೇ ರ‍್ಯಾಂಕ್‌ನಲ್ಲಿ ಪಾಸ್ ಆಗಿದ್ದರು. ಪ್ರತಿಭಾವಂತ ವಿದ್ಯಾರ್ಥಿಯಾಗಿ ಮೊದಲ ಪ್ರಯತ್ನದಲ್ಲೇ ಯುಪಿಎಸ್‌ಸಿ ಪಾಸ್ ಮಾಡಿದ್ದರು. ಇದನ್ನೂ ಓದಿ: ಪಶ್ಚಿಮ ಘಟ್ಟ ಭಾಗದಲ್ಲಿ ಭೂಕಂಪ ಅನುಭವ – ಜಿಲ್ಲಾಧಿಕಾರಿಗಳ ಸ್ಪಷ್ಟನೆ ಏನು?