ಬೆಂಗಳೂರು: ಖಡಕ್ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಇಂದು ತಮ್ಮ ಐಪಿಎಸ್ ಹುದ್ದೆಗೆ ರಾಜೀನಾಮೆ ಕೊಟ್ಟಿದ್ದಾರೆ. ಈ ಬಗ್ಗೆ ಎಲ್ಲೆಡೆ ಚರ್ಚೆ ನಡೆಯುತ್ತಿದ್ದು, ಇದೀಗ ಐಪಿಎಸ್ ಅಧಿಕಾರಿ ಡಿ. ರೂಪಾ ಅವರು ಪ್ರತಿಕ್ರಿಯಿಸಿದ್ದಾರೆ.
ರೂಪಾ ಅವರು ಟ್ವೀಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. “ನಾನು ಅಣ್ಣಾಮಲೈ ಜೊತೆ ಮಾತನಾಡಿದ್ದೇನೆ. ಇಂದು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ಈ ಮೂಲಕ ಅವರ ರಾಜಕೀಯಕ್ಕೆ ಹೋಗಲು ಸಿದ್ಧರಾಗಿದ್ದಾರೆ. ಐಪಿಎಸ್ ಅಧಿಕಾರಿಯಾಗಲೂ ಕಠಿಣ ಶ್ರಮ ಪಡಬೇಕಾಗುತ್ತದೆ. ಅದೇ ರೀತಿ ಆ ಕೆಲಸಕ್ಕೆ ರಾಜೀನಾಮೆ ನೀಡಲು ತುಂಬಾ ಧೈರ್ಯ ಬೇಕು. ಇಂತಹ ಸಾಧಕರು ರಾಜಕೀಯಕ್ಕೆ ಹೋಗುವುದನ್ನು ನೋಡಲು ಚೆನ್ನಾಗಿರುತ್ತದೆ” ಬರೆದು ಶುಭ ಕೋರಿದ್ದಾರೆ. ಇದನ್ನೂ ಓದಿ: ನಾನು ನನ್ನ ಖಾಕಿಯಲ್ಲಿ ಪ್ರತಿ ಕ್ಷಣವನ್ನು ಜೀವಿಸಿದ್ದೇನೆ: ಅಭಿಮಾನಿಗಳಿಗೆ ಅಣ್ಣಾಮಲೈ ಭಾವನಾತ್ಮಕ ಪತ್ರ
Advertisement
Advertisement
ಅಣ್ಣಾಮಲೈ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ನೀಲಮಣಿ ರಾಜು ಅವರು ರಾಜ್ಯ ಗೃಹ ಕಾರ್ಯದರ್ಶಿಗೆ ರಾಜೀನಾಮೆ ಪತ್ರ ರವಾನಿಸಿ, ಬಳಿಕ ಅದು ಗೃಹ ಕಾರ್ಯದರ್ಶಿ ಹೋಗುತ್ತದೆ. ಅಂತಿಮವಾಗಿ ಕೇಂದ್ರ ಯುಪಿಎಸ್ಸಿಗೆ ತಲುಪಿದ ಬಳಿಕ ರಾಜೀನಾಮೆ ಅಂಗಿಕಾರವಾಗುತ್ತದೆ. ಇದನ್ನೂ ಓದಿ: ರಾಜೀನಾಮೆಯ ವಿಚಾರಕ್ಕೆ ಸ್ಪಷ್ಟನೆ ನೀಡಿದ ಡಿಸಿಪಿ ಅಣ್ಣಾಮಲೈ
Advertisement
ಅಣ್ಣಾಮಲೈ ರಾಜೀನಾಮೆಗೆ ತಂದೆ- ತಾಯಿ, ವೈಯಕ್ತಿಕ ಜೀವನದ ಕಾರಣ ಕೊಟ್ಟಿದ್ದಾರೆ. ಕಳೆದ ಆರು ತಿಂಗಳ ಹಿಂದೆಯೇ ರಾಜೀನಾಮೆ ನೀಡಬೇಕೆಂದು ಪ್ಲಾನ್ ಮಾಡಿದ್ದೆ. ಚುನಾವಣೆ ಮುಗಿಸದೇ ಹೋದರೆ ಸರಿ ಹೋಗಲ್ಲ ಎಂದು ಎಲೆಕ್ಷನ್ ಬಂದೋಬಸ್ತ್ ಮುಗಿಸಿದ್ದೇನೆ. ಮಲೇಷ್ಯಾದಿಂದ ರಾತ್ರೋರಾತ್ರಿ ವಿಮಾನ ಹತ್ತಿ ಬಂದು ಯುಪಿಎಸ್‍ಸಿ ಪರೀಕ್ಷೆ ಬರೆದಿದ್ದೆ. ನನಗೆ ಇದೇ ಜೀವನ ಅಲ್ಲ, ಇನ್ನೂ ಬೇರೆ ಜೀವನ ಇದೆ. ಎಷ್ಟು ದಿನ ಕೊಲೆ, ಸುಲಿಗೆ, ದರೋಡೆ ಬಗ್ಗೆ ಕೆಲಸ ಮಾಡಲಿ. ಸದ್ಯ ನಾನು ಯಾವ ರಾಜಕೀಯಕ್ಕೂ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.
Advertisement
Spoke to Annamalai, IPS .@DCPSouthBCP. He has tendered resignation today. He is plunging into politics. It requires guts, boldness to leave cushy, secure , hard earned IPS job. Its heartening to see such achievers n youngsters diving into politics. Wishing him all the best.
— D Roopa IPS (@D_Roopa_IPS) May 28, 2019
ಮುಂದಿನ ಆರು ತಿಂಗಳು ವಿಶ್ರಾಂತಿ ಪಡೆಯುತ್ತೇನೆ. ರಾಜೀನಾಮೆ ಬಳಿಕ ಹಿಮಾಲಯಕ್ಕೆ ಟ್ರೆಕ್ಕಿಂಗ್ ಹೋಗುತ್ತೇನೆ. ಅಲ್ಲದೇ ನನ್ನ ಕುಟುಂಬಕ್ಕೆ ಟೈಂ ಸಹ ಕೋಡುತ್ತೇನೆ. ನನ್ನ ಮಗ ಓದುತ್ತಿದ್ದಾನೆ ಅವನ ಜೊತೆ ಇರುತ್ತೇನೆ. 33-34ನೇ ವಯಸ್ಸಿಗೆ ಯಾರು ಈ ನಿರ್ಧಾರ ತೆಗೆದುಕೊಳ್ಳಲ್ಲ. ಆದರೆ ನಾನು ತೆಗೆದುಕೊಂಡಿದ್ದೇನೆ. ಏಕೆಂದರೆ ನನಗೆ ಬೇರೆ ಜೀವನ ಇದೆ ಎಂದು ಅಣ್ಣಾಮಲೈ ತಿಳಿಸಿದ್ದಾರೆ.