ಕೊಪ್ಪಳ: 2019 ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಇಕ್ಬಾಲ್ ಅನ್ಸಾರಿ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಅನ್ಸಾರಿಗೆ ಅನ್ಯಾಯವಾಗಿದೆ. ಆದ್ದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅವರಿಗೆ ನ್ಯಾಯಮಾಡಿ. ಅನ್ಸಾರಿ ಅವರಿಗೆ ಮತ ನೀಡಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಿ. ಕಳೆದ 4 ವರ್ಷಗಳಿಂದ ಮೋದಿ ಏನೂ ಕೆಲಸ ಮಾಡಿಲ್ಲ ಎಂದು ದೂರಿದರು.
Advertisement
Advertisement
ಅನ್ಸಾರಿ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದು ಸಿದ್ದರಾಮಯ್ಯ ಅವರು ಕಾರ್ಯಕರ್ತರನ್ನು ಉದ್ದೇಶಿ ಮಾತನಾಡಿದ್ದರು. ಅನ್ಸಾರಿ ಅವರನ್ನು ಅಭ್ಯರ್ಥಿ ಎಂದು ಘೋಷಣೆ ಮಾಡುತ್ತಿದಂತೆ ನೆರೆದಿದ್ದ ಕಾರ್ಯಕರ್ತರಯ ಘೋಷಣೆ ಕೂಗಿ ಸಂತಸ ವ್ಯಕ್ತಪಡಿಸಿದರು. ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಆಪ್ತರಾದ ರಾಘವೇಂದ್ರ ಹಿಟ್ನಾಳ್ ಹಾಗೂ ಅವರ ಸಹೋದರ ರಾಜಶೇಖರ್ ಹಿಟ್ನಾಳ್ ಪ್ರಬಲ ಆಕಾಂಕ್ಷಿಯಾಗಿದ್ದರು. ಆದರೆ ಅನ್ಸಾರಿ ಅವರನ್ನೇ ಅಭ್ಯರ್ಥಿ ಎಂದು ಘೋಷಣೆ ಮಾಡಿ ಆಪ್ತರಿಗೆ ಶಾಕ್ ನೀಡಿದ್ದಾರೆ.
Advertisement
ಗಂಗಾವತಿಯಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಇಕ್ಬಾಲ್ ಅನ್ಸಾರಿ ಅವರು ಬಿಜೆಪಿಯ ಪರಣ್ಣ ಮುನವಳ್ಳಿ ಅವರ ವಿರುದ್ಧ ಸೋಲುಂಡಿದ್ದರು. ಪರಣ್ಣ ಅವರು 67,617 ಮತಗಳನ್ನು ಪಡೆದಿದ್ದರೆ, ಇಕ್ಬಾಲ್ ಅನ್ಸಾರಿ ಅವರು 59,644 ಮತ ಪಡೆದಿದ್ದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv