ರಾಮನಗರ: ರಾಮನಗರದ (Ramanagara) ಶಾಸಕ ಇಕ್ಬಾಲ್ ಹುಸೇನ್ (H. A. Iqbal Hussain) ಅವರು ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ಗೆ (Shri Ram Janmabhoomi Teerth Kshetra Trust) ಮನವಿಯೊಂದನ್ನು ಮಾಡಲು ಮುಂದಾಗಿದ್ದಾರೆ.
ಕನ್ನಡಿಗ ಗಣೇಶ್ ಭಟ್ (Ganesh Bhat) ಕೆತ್ತಿರುವ ಶ್ರೀರಾಮ ಮೂರ್ತಿಯನ್ನು ರಾಮದೇವರ ಬೆಟ್ಟದ ಅಭಿವೃದ್ಧಿಗೆ ನೀಡುವಂತೆ ಟ್ರಸ್ಟ್ಗೆ ಪತ್ರ ಬರೆಯಲು ಮುಂದಾಗಿದ್ದಾರೆ. ರಾಮನಗರವನ್ನು ದಕ್ಷಿಣ ಅಯೋಧ್ಯೆಯಾಗಿ ಅಭಿವೃದ್ಧಿ ಮಾಡಿ ವಿಗ್ರಹ ಪ್ರತಿಷ್ಠಾಪನೆ ಮಾಡಲು ಆ ವಿಗ್ರಹವನ್ನು ನೀಡುವಂತೆ ಮನವಿಯಲ್ಲಿ ತಿಳಿಸಲಿದ್ದಾರೆ. ಇದನ್ನೂ ಓದಿ: 2015ರಲ್ಲಿ ಕೆತ್ತಿದ್ದ ಜಯಚಾಮರಾಜೇಂದ್ರ ಪ್ರತಿಮೆಯ ಬಾಕಿ ಹಣ ಬಂದಿಲ್ಲ: ಅರುಣ್ ಯೋಗಿರಾಜ್
Advertisement
Advertisement
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಅಭಿವೃದ್ಧಿ ಸೂಕ್ಷ್ಮವಾದ ವಿಚಾರ. ಹೀಗಾಗಿ ಇಲ್ಲಿ ಪ್ರತಿಷ್ಠಾಪನೆ ಮಾಡಲು ಕನ್ನಡಿಗ ಕೆತ್ತಿರುವ ವಿಗ್ರಹ ಸೂಕ್ತ ಅಂತ ನಾವು ತೀರ್ಮಾನ ಮಾಡಿದ್ದೇವೆ. ಅದಕ್ಕಾಗಿ ಶ್ರೀರಾಮ ಜನ್ಮಭೂಮಿ ಕ್ಷೇತ್ರ ಟ್ರಸ್ಟ್ಗೆ ಪತ್ರ ಬರೆಯುತ್ತೇನೆ. ಜೊತೆಗೆ ಮೈಸೂರಿನ ಶಿಲ್ಪಿ ಅರುಣ್ ಯೋಗರಾಜ್ (Arun Yogiraj) ಜೊತೆಗೂ ಮಾತನಾಡಿ, ಅಭಿನಂದಿಸುತ್ತೇವೆ. ದೇವರಿಗಿಂತ ದೊಡ್ಡದು ಯಾವುದೂ ಇಲ್ಲ ಎಂದಿದ್ದಾರೆ. ಈ ಬಜೆಟ್‌ನಲ್ಲಿ ರಾಮನಗರದ ಶ್ರೀ ರಾಮಮಂದಿರ ನಿರ್ಮಾಣಕ್ಕೆ ಬೇಡಿಕೆಯಿಟ್ಟಿದ್ದೇನೆ. ಜೊತೆಗೆ ಪ್ರವಾಸೋದ್ಯಮ ಇಲಾಖೆಗೂ ಸಹ ಮನವಿ ಮಾಡಿದ್ದೇವೆ. ವಿಶೇಷವಾಗಿ ರಾಮೋತ್ಸವ ಹಾಗೂ ರಾಮಮಂದಿರ ಕಟ್ಟೋದಕ್ಕೆ ಸಿದ್ಧತೆ ಮಾಡಿದ್ದೇವೆ ಎಂದು ಶಾಸಕರು ಹೇಳಿದ್ದಾರೆ. ಇದನ್ನೂ ಓದಿ: ಕರ್ತವ್ಯ ಪಥದ ಪರೇಡ್‍ನಲ್ಲಿ ಮಿಂಚಿದ ಬಾಲಕರಾಮ!