ತೆಹ್ರಾನ್: ಹಿಜಬ್ (Hijab) ಧರಿಸದ್ದಕ್ಕೆ ನೈತಿಕ ಪೊಲೀಸ್‌ಗಿರಿಗೆ (Police) ಯುವತಿ ಬಲಿಯಾದ ಪ್ರಕರಣ ವಿರೋಧಿಸಿ ಇರಾನ್‌ನಲ್ಲಿ ಪ್ರತಿಭಟನೆ (Iran Protest) ಭುಗಿಲೆದ್ದಿದ್ದು, ಇಂಟರ್‌ನೆಟ್ (Internet) ಬಳಕೆಯೊಂದಿಗೆ ವಾಟ್ಸಪ್ (WhatsApp), ಇನ್‌ಸ್ಟಾಗ್ರಾಮ್ (Instagram) ಬಳಕೆಯನ್ನೂ ನಿಷೇಧಿಸಲಾಗಿದೆ.
ಇರಾನ್ ಮಹಿಳೆಯರ (Women) ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆಯುತ್ತಿದ್ದಂತೆ ಅದನ್ನು ಹತ್ತಿಕ್ಕಲು ಪೊಲೀಸರು (Police) ಪ್ರಯತ್ನಿಸುತ್ತಿದ್ದಾರೆ. ಈ ವೇಳೆ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
Advertisement
Advertisement
ಇತ್ತೀಚೆಗೆ ಇರಾನ್‌ನಲ್ಲಿ ಫೇಸ್‌ಬುಕ್ (FaceBook), ಟ್ವಿಟರ್ (Twitter), ಟೆಲಿಗ್ರಾಮ್, ಯೂಟ್ಯೂಬ್ (Youtube) ಮತ್ತು ಟಿಕ್‌ಟಾಕ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣದ (Social Media) ವೇದಿಕೆಗಳ ಮೇಲೆ ನಿರ್ಬಂಧ ವಿಧಿಸಿದ ನಂತರ ವಾಟ್ಸಪ್ ಹಾಗೂ ಇನ್‌ಸ್ಟಾಗ್ರಾಮ್ ವ್ಯಾಪಕವಾಗಿ ಬಳಕೆಯಾಗಿವೆ. ಹಾಗಾಗಿ ತುರ್ತು ಪರಿಸ್ಥಿತಿಯಲ್ಲಿ ಇಂಟರ್‌ನೆಟ್ (Internet) ಬಳಕೆಯನ್ನು ಹೊರತುಪಡಿಸಿ ಉಳಿದೆಲ್ಲ ಕಡೆಗಳಲ್ಲೂ ಇಂಟರ್‌ನೆಟ್ ಅನ್ನು ಸ್ಥಗಿತಗೊಳಿಸಲಾಗಿದೆ.
Advertisement
Advertisement
ಸತತ 7ನೇ ದಿನ ಇರಾನ್‌ನ ಬಹುತೇಕ ನಗರ, ಪಟ್ಟಣಗಳಲ್ಲಿ ಮಹಿಳೆಯರ ಪ್ರತಿಭಟನೆಗಳು ಮುಂದುವರಿದಿವೆ. ಸಾವಿರ ಸಾವಿರ ಮಂದಿ ಮಹಿಳೆಯರು ಹಗಲು ರಾತ್ರಿ ಎನ್ನದೇ ಕೆರ್ಮಾನ್‌ನ ಆಜಾದಿ ವೃತ್ತದಲ್ಲಿ, ಸರ್ವಾಧಿಕಾರ ನಶಿಸಲಿ. ಹಿಜಬ್ ಕಟ್ಟುಪಾಡು ನಶಿಸಲಿ ಎಂದು ಘೋಷಣೆ ಕೂಗುತ್ತಿದ್ದಾರೆ. ಕತ್ತರಿ ಹಿಡಿದು ಕೂದಲು ಕತ್ತರಿಸಿಕೊಳ್ಳುವ ಅಭಿಯಾನವನ್ನು ಮುಂದುವರಿಸಿದ್ದಾರೆ. ಹಿಜಬ್ ಸುಟ್ಟು ಆಕ್ರೋಶ ಹೊರಹಾಕುತ್ತಿದ್ದಾರೆ. ನಾವು ಯುದ್ಧ ಭೂಮಿಯಲ್ಲಿ ಹುಟ್ಟಿದವರು. ಬನ್ನಿ ನಮ್ಮನ್ನು ಎದುರಿಸಿ ಎಂದು ಸರ್ಕಾರಕ್ಕೆ ಸವಾಲು ಹಾಕುತ್ತಿದ್ದಾರೆ.
ಪ್ರತಿಭಟನೆ ದಮನಿಸಲು ರೈಸಿ ಸರ್ಕಾರ ಬಲಪ್ರಯೋಗ ಮಾಡುತ್ತಿದೆ. ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಿದೆ. ಈವರೆಗೂ ಪೊಲೀಸರ ಗುಂಡಿಗೆ ದೇಶದ ವಿವಿಧೆಡೆ 8 ಮಂದಿ ಬಲಿಯಾಗಿದ್ದಾರೆ. ಪ್ರತಿಭಟನಾಕಾರರು ಮಾತ್ರ ಹಿಂದೆ ಸರಿಯಲು ಸಿದ್ಧರಿಲ್ಲ. ಇದು ಇರಾನ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.