ಟೆಹ್ರಾನ್: ಇರಾನ್, ಅಮೆರಿಕ ಮತ್ತು ಇಸ್ರೇಲ್ ಸಂಘರ್ಷ (US-Iran War) ಮತ್ತೆ ಉಲ್ಬಣಗೊಂಡಿದೆ. ಯುಎಸ್ ದಾಳಿ ಬೆನ್ನಲ್ಲೇ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಇರಾನ್ ಮತ್ತೆ ಬಂದ್ ಮಾಡಿದೆ.
ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿರುವುದಾಗಿ ಇರಾನ್ ಘೋಷಿಸಿದ್ದು, ಈ ಜಲಸಂಧಿಯನ್ನು ದಾಟಲು ಪ್ರಯತ್ನಿಸುವ ಯಾವುದೇ ಹಡಗಿನ ಮೇಲೆ ದಾಳಿ ಮಾಡಲಾಗುವುದು ಎಂದು ಐಆರ್‌ಜಿಸಿಯಿಂದ ಅಧಿಕೃತ ಘೋಷಣೆ ಮಾಡಿದೆ. ಇದನ್ನೂ ಓದಿ: ಹಡಗು ಮುಳುಗುತ್ತಿದೆ.. ಸಹಾಯ ಮಾಡಿ: ಅಮೆರಿಕ ಕ್ಷಿಪಣಿ ದಾಳಿಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಭಾರತೀಯ ಸಿಬ್ಬಂದಿ ಕರೆ
ಎಲ್ಲ ದೇಶಗಳಿಗೂ ಐಆರ್‌ಜಿಸಿ ಎಚ್ಚರಿಕೆ ಸಂದೇಶ ರವಾನಿಸಿದೆ. ಹಾರ್ಮುಜ್ ಮೇಲಿನ ನಿರ್ಬಂಧದಿಂದ ಕಚ್ಚಾತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಸಾಧ್ಯತೆ ಇದೆ.
ದೇಶದ ಉನ್ನತ ಜಂಟಿ ಮಿಲಿಟರಿ ಕಮಾಂಡ್, ವಾಣಿಜ್ಯ ಹಡಗುಗಳು ಮತ್ತು ತೈಲ ಟ್ಯಾಂಕರ್‌ಗಳು ಸೇರಿದಂತೆ ಎಲ್ಲಾ ಸಂಚಾರಕ್ಕೂ ಹಾರ್ಮುಜ್ ಜಲಸಂಧಿಯನ್ನು ಸ್ಥಗಿತಗೊಳಿಸಲು ಆದೇಶಿಸಿದೆ.
ಬುಧವಾರ ಇರಾನ್ ವಿರುದ್ಧ ಅಮೆರಿಕ ಮತ್ತೊಂದು ಸರಣಿ ಮಿಲಿಟರಿ ಕಾರ್ಯಾಚರಣೆಗಳನ್ನು ಪ್ರಾರಂಭಿಸಿದ ನಂತರ ಈ ಬೆಳವಣಿಗೆ ನಡೆದಿದೆ. ಇದು ಮೂರು ತಿಂಗಳಿಗೂ ಹೆಚ್ಚು ಕಾಲ ಮುಂದುವರಿದಿರುವ ಸಂಘರ್ಷವನ್ನು ಮತ್ತಷ್ಟು ಹೆಚ್ಚಿಸಿದೆ. ಇದನ್ನೂ ಓದಿ: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧ; ಇರಾನ್ ಮೇಲೆ ಅಮೆರಿಕ ವೈಮಾನಿಕ ದಾಳಿ
