ಟೆಹರಾನ್: ಇರಾನಿನಾದ್ಯಂತ ಮಹಿಳೆಯರು ಹಿಜಬ್ (Hijab) ಧರಿಸದೇ ತಮ್ಮ ತಲೆ ಕೂದಲನ್ನು ಕತ್ತರಿಸಿಕೊಳ್ಳುವ ಮೂಲಕ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಈ ಪ್ರತಿಭಟನೆಗೆ ಟರ್ಕಿಯ (Turkey) ಪ್ರಸಿದ್ಧ ಗಾಯಕಿ (Singer) ವೇದಿಕೆಯಲ್ಲಿ ಕೂದಲನ್ನು ಕತ್ತರಿಸಿಕೊಳ್ಳುವ ಮೂಲಕ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.
ಟರ್ಕಿಶ್‌ನ ಪ್ರಸಿದ್ಧ ಗಾಯಕಿ ಮಾಲೆಕ್ ಮೊಸ್ಸೋ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದರು. ಪ್ರದರ್ಶನದ ಸಮಯದಲ್ಲಿ ಪ್ರೇಕ್ಷಕರು ಗಾಯಕಿಯನ್ನು ಶ್ಲಾಘಿಸಿದಾಗ ಮೆಲೆಕ್ ಮೊಸ್ಸೊ ತಮ್ಮ ಕೂದಲನ್ನು ಕತ್ತರಿಸಿಕೊಂಡು ಇರಾನ್ ಮಹಿಳೆಯರ ಪ್ರತಿಭಟನೆಗೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
Advertisement
Turkish singer @MelekMosso cuts off her hair on stage in solidarity with the Iranian women. Thank you Melek!#MahsaAmini #مهسا_امینی #IranProtests2022 pic.twitter.com/ZjISxjGkAL
— Omid Memarian (@Omid_M) September 27, 2022
Advertisement
ಮೊಸ್ಸೊ ಅವರು ಮಹಿಳಾ ಹಕ್ಕುಗಳ ಬೆಂಬಲಕ್ಕಾಗಿ ಈಗಾಗಲೇ ಅನೇಕ ಬಾರಿ ಹೋರಾಡಿದ್ದಾರೆ. 2020ರಲ್ಲಿ ಟರ್ಕಿಯಲ್ಲಿ ಅತ್ಯಾಚಾರಿ ಪೊಲೀಸ್ ಅಧಿಕಾರಿಯ ಬಿಡುಗಡೆ ಕುರಿತು ಟೀಕಿಸಿದ್ದರು. ಈ ಹಿನ್ನೆಲೆಯಲ್ಲಿ ಗಾಯಕಿಯನ್ನು ವೇದಿಕೆಯಿಂದ ಕೆಳಗಿಳಿಸಲಾಗಿತ್ತು. ಈ ಬಗ್ಗೆ ಮಾತನಾಡಿ, ಈ ಅತ್ಯಾಚಾರ ಮತ್ತು ಕೊಲೆಗಳ ವಿರುದ್ಧ ಮಾತನಾಡಿದ್ದಕ್ಕಾಗಿ ನನ್ನನ್ನು ವೇದಿಕೆಯಿಂದ ಕೆಳಗಿಳಿಸಲಾಗಿದೆ. ಇದು ಯಾವ ರೀತಿಯ ವ್ಯವಸ್ಥೆ ಎಂದು ಕಿಡಿಕಾರಿದ್ದರು.
Advertisement
For #MahsaAmini
Thanks to Bahador Hadizadeh for this beautiful footage from Azadi Tower
Music / Legend of Sea by Ernesto Cortazar pic.twitter.com/94L340YJh7
— Hamid Ebrahimnia (@ebrahimnia) September 25, 2022
Advertisement
ಹಿಜಬ್ ಧರಿಸಿಲ್ಲ ಎಂಬ ಕಾರಣಕ್ಕೆ 22 ವಯಸ್ಸಿನ ಯುವತಿ (Iranian Women) ಮಹ್ಸಾ ಆಮಿನಿ (Mahsa Amini), ನೈತಿಕ ಪೊಲೀಸ್‌ಗಿರಿಗೆ ಬಲಿಯಾಗಿದ್ದಳು. ಆಕೆಯನ್ನು ಹಿಜಬ್‌ಧಾರಿ ಮಹಿಳೆಯರೇ ಥಳಿಸಿದ್ದರು. ನಂತರ ಬಲವಂತವಾಗಿ ಪೊಲೀಸರು ಕಾರಿಗೆ ನೂಕಿ ದೌರ್ಜನ್ಯ ನಡೆಸಿದ್ದರು. ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಇದರಿಂದ ಗಂಭೀರ ಸ್ಥಿತಿಯಲ್ಲಿದ್ದ ಯುವತಿ ಸಾವನ್ನಪ್ಪಿದ್ದಳು. ಇದನ್ನೂ ಓದಿ: ಇರಾನ್‌ನಲ್ಲಿ ಹಿಜಬ್ ಹೋರಾಟ – 60 ಮಹಿಳೆಯರು ಸೇರಿ 700ಕ್ಕೂ ಹೆಚ್ಚು ಮಂದಿ ಅರೆಸ್ಟ್
ಇದನ್ನು ವಿರೋಧಿಸಿ ಇರಾನ್‌ನಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ಬುಧವಾರ ಹನ್ನೆರಡನೇ ದಿನಕ್ಕೆ ಕಾಲಿಟ್ಟಿದೆ. ಈ ಹಿಂಸಾತ್ಮಕ ಪ್ರತಿಭಟನೆಯಲ್ಲಿ (Protest), 700ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು (Police) ಬಂಧಿಸಿದ್ದಾರೆ. ಇದನ್ನೂ ಓದಿ: ಪತ್ರಕರ್ತೆ ಹಿಜಬ್ ಧರಿಸದ್ದಕ್ಕೆ ಸಂದರ್ಶನವನ್ನೇ ರದ್ದುಗೊಳಿಸಿದ ಇರಾನ್ ಅಧ್ಯಕ್ಷ