ಟೆಹ್ರಾನ್: ಕದನ ವಿರಾಮ (Ceasefire) ಜಾರಿಗೆ ಬಂದ ನಂತರ ಮೊದಲ ಬಾರಿಗೆ ಭಾನುವಾರ ಮಧ್ಯರಾತ್ರಿ ಇಸ್ರೇಲ್ (Israel) ಮೇಲೆ ಇರಾನ್ (Iran) ಕ್ಷಿಪಣಿ ದಾಳಿ ನಡೆಸಿದೆ. ಈ ಬೆನ್ನಲ್ಲೇ ಇಸ್ರೇಲಿ ಸೇನೆ ಕೂಡ ಇರಾನ್‌ನ 20 ಸ್ಥಳಗಳನ್ನು ಗುರಿಯಾಗಿಸಿ ಪ್ರತಿದಾಳಿ ನಡೆಸಿದೆ.
ಇಸ್ರೇಲ್ ಸೇನೆ ಬಿಡುಗಡೆ ಮಾಡಿದ ಪ್ರಕಟಣೆಯ ಪ್ರಕಾರ, ಇರಾನ್‌ನ ಪಶ್ಚಿಮ ಮತ್ತು ಮಧ್ಯ ಭಾಗದಲ್ಲಿರುವ ಸೇನಾ ಗುರಿಗಳನ್ನು ಗುರಿಯಾಗಿಸಿಕೊಂಡು ಬಾಂಬ್ ದಾಳಿ ನಡೆಸಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: 7 ಪ್ರಕರಣಗಳಲ್ಲಿ ವಾಂಟೆಡ್ – ತಲೆಮರೆಸಿಕೊಂಡಿದ್ದ ಟಿಎಂಸಿ ನಾಯಕ ನೇಪಾಳ ಗಡಿಯಲ್ಲಿ ಅರೆಸ್ಟ್
ಇರಾನ್ ಆಡಳಿತಕ್ಕೆ ಸೇರಿದ ಸೇನಾ ಮೂಲಸೌಕರ್ಯಗಳ ಮೇಲೆ ನಿಖರ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸೇನೆ ತಿಳಿಸಿದರೂ, ಯಾವ ಪ್ರದೇಶಗಳನ್ನು ಹೊಡೆದುರುಳಿಸಲಾಗಿದೆ ಎಂಬ ವಿವರಗಳನ್ನು ಇನ್ನೂ ಬಹಿರಂಗಪಡಿಸಿಲ್ಲ. ಇದನ್ನೂ ಓದಿ: ಚುರುಕುಗೊಂಡ ಮುಂಗಾರು – ಮುಂದಿನ ಐದು ದಿನ ರಾಜ್ಯದ ಹಲವೆಡೆ ಮಳೆ ಎಚ್ಚರಿಕೆ
ದಾಳಿಯ ಬಳಿಕ ಇರಾನ್‌ನ ಇಸ್ಫಹಾನ್, ಕರಾಜ್, ತಬ್ರೀಜ್ ಹಾಗೂ ರಾಜಧಾನಿ ಟೆಹ್ರಾನ್ ಸೇರಿದಂತೆ ಹಲವು ನಗರಗಳಲ್ಲಿ ಸ್ಫೋಟಗಳ ಶಬ್ದ ಕೇಳಿಬಂದಿರುವುದಾಗಿ ಸರ್ಕಾರಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ರಸಗೊಬ್ಬರ ಕೊರತೆ, ತೈಲ ಬೆಲೆ ಏರಿಕೆ; ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಕೇಂದ್ರದ ವಿರುದ್ಧ ರೈತರ ಪ್ರತಿಭಟನೆ
ಯಾವುದೇ ಎಚ್ಚರಿಕೆಯಿಲ್ಲದೆ ಇಸ್ರೇಲ್ ಬೈರುತ್‌ನ ದಕ್ಷಿಣ ಉಪನಗರಗಳ ಮೇಲೆ ದಾಳಿ ಮಾಡಿದ ನಂತರ ಟೆಹ್ರಾನ್ ಪ್ರತೀಕಾರದ ಎಚ್ಚರಿಕೆ ನೀಡಿತ್ತು. ಇರಾನಿನ ಬೆಂಬಲಿತ ಹಿಜ್ಬುಲ್ಲಾ ಉತ್ತರ ಇಸ್ರೇಲ್ ಮೇಲೆ ಮುಂಜಾನೆ ದಾಳಿ ನಡೆಸಿದೆ ಎಂದು ಇಸ್ರೇಲ್ ಹೇಳಿದೆ. ಇದನ್ನೂ ಓದಿ: ವದಂತಿಗೆ ಬ್ರೇಕ್ – ಡೈರೆಕ್ಟರ್ ಬರ್ತ್‌ಡೇ ದಿನವೇ ‘ಟಾಕ್ಸಿಕ್ ಮೇಕಿಂಗ್’ ವಿಡಿಯೋ ರಿಲೀಸ್
ಶಾಂತಿ ಒಪ್ಪಂದ ಅಂತಿಮ ಹಂತದಲ್ಲಿರುವಂತೆಯೇ ಪಶ್ಚಿಮ ಏಷ್ಯಾದಲ್ಲಿ ಮತ್ತೆ ಸಂಘರ್ಷ ಹೆಚ್ಚಾಗಿದೆ. ಇದರಿಂದಾಗಿ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಅನಿಶ್ಚಿತತೆ ಮುಂದುವರಿದಿದೆ. ಇರಾನ್ ಕ್ಷಿಪಣಿ ದಾಳಿ ನಡೆಸಿದ ಬೆನ್ನಲ್ಲೇ ಸಂಭವನೀಯ ಪ್ರತಿಕ್ರಿಯೆಗಾಗಿ ತನ್ನ ಪಶ್ಚಿಮ ವಾಯುಪ್ರದೇಶವನ್ನ ಇರಾನ್ ಮುಚ್ಚಿದೆ. ಸಂಭಾವ್ಯ ಇಸ್ರೇಲಿ ಆಕ್ರಮಣಕ್ಕೆ ಸಿದ್ಧವಾಗಲು ನೆರೆಯ ಇರಾಕ್ ಮತ್ತು ಸಿರಿಯಾ ಕೂಡ ತಮ್ಮ ವಾಯುಸೀಮೆಯನ್ನ ಬಂದ್ ಮಾಡಿವೆ. ಇದನ್ನೂ ಓದಿ: ಹಠಾತ್ ಬಿರುಗಾಳಿ ಸಹಿತ ಮಳೆ – ದೆಹಲಿ ಏರ್‌ಪೋರ್ಟ್‌ನಲ್ಲಿ 3 ಏರ್ ಇಂಡಿಯಾ ವಿಮಾನಗಳು ಜಖಂ
ನೆತನ್ಯಾಹುಗೆ ಟ್ರಂಪ್ ವಾರ್ನಿಂಗ್:
ಈ ಮಧ್ಯೆ ಇಸ್ರೇಲ್ ಮೇಲೆ ದಾಳಿ ನಡೆಸಿದ ಹೊರತಾಗಿಯೂ ಬೆಂಜಮಿನ್ ನೆತನ್ಯಾಹು ಅವರಿಗೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಾರ್ನಿಂಗ್ ಕೊಟ್ಟಿದ್ದಾರೆ. ಇರಾನ್‌ನ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಬೇಡಿ, ರಾಜತಾಂತ್ರಿಕತೆಗೆ ಹೆಚ್ಚಿನ ಸಮಯ ನೀಡಬೇಕೆಂದು ನೆತನ್ಯಾಹುಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಗ್ರಾಹಕರಿಗೆ ಮತ್ತೊಂದು ಶಾಕ್ – ಪೆಟ್ರೋಲ್, ಗ್ಯಾಸ್ ಬಳಿಕ ಅಕ್ಕಿ ಬೆಲೆ ಗಗನಕ್ಕೆ
ಆದ್ರೆ ತನ್ನ ಮೇಲೆ ದಾಳಿ ಮಾಡುವ ಮೂಲಕ ಇರಾನ್ ‘ಗಂಭೀರ ತಪ್ಪು’ ಮಾಡಿದೆ ಎಂದು ಇಸ್ರೇಲ್‌ನ ಮಿಲಿಟರಿ ಹೇಳಿದೆ. ಇರಾನ್‌ನ 11 ಕ್ಷಿಪಣಿಗಳನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿಸಿದೆ. ಇದನ್ನೂ ಓದಿ: KSRTC ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಹೆಜ್ಜುಲ್ಲಾ ಬಂಡುಕೋರರ ಗುಂಪು ಉತ್ತರ ಇಸ್ರೇಲ್ ಕಡೆಗೆ ಗುಂಡಿನ ದಾಳಿ ನಡೆಸಿದ್ದಕ್ಕೆ ಪ್ರತೀಕಾರವಾಗಿ ದಕ್ಷಿಣ ಬೈರೂತ್‌ನ ಉಪನಗರಗಳ ಮೇಲೆ ವೈಮಾನಿಕ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಇಂದು INDIA ಕೂಟದ ಹೈವೋಲ್ಟೇಜ್ ಸಭೆ – 23 ರಾಜಕೀಯ ಪಕ್ಷದ ಪ್ರತಿನಿಧಿಗಳು ಭಾಗಿ
ಇತ್ತ ಇರಾನ್ ಕ್ಷಿಪಣಿಗಳನ್ನ ಹೊಡೆದುರುಳಿಸಿರುವುದಾಗಿ ಹೇಳಿಕೊಂಡಿರುವ ಇಸ್ರೇಲ್ ಮಿಲಿಟರಿ ಪಡೆ, ಪ್ರತೀಕಾರಕ್ಕೆ ದಾಳಿಗೆ ಮುಂದಾಗುತ್ತಿದೆ. ಮತ್ತೊಂದು ಕಡೆ ಇರಾನ್ ದಾಳಿಗೆ ಪ್ರತಿಯಾಗಿ ಇಸ್ರೇಲ್ ಸಹ ದಾಳಿ ನಡೆಸುತ್ತಿದೆ. ಇದನ್ನೂ ಓದಿ: ಕದನ ವಿರಾಮದ ಬಳಿಕ ಫಸ್ಟ್ ಟೈಮ್ ಇಸ್ರೇಲ್ ಮೇಲೆ ಇರಾನ್ ಮಿಸೈಲ್ ದಾಳಿ
