ನವದೆಹಲಿ: ಇಸ್ರೇಲ್ (Israel) ಮೇಲೆ ಇರಾನ್ ಕ್ಷಿಪಣಿ ದಾಳಿ (Iran Missile Attack) ನಡೆಸಿದ ಬಳಿಕ ಮಧ್ಯಪ್ರಾಚ್ಯದಲ್ಲಿ ಯುದ್ಧ ಕಾರ್ಮೋಡ ಕವಿದಿದ್ದು,ಇರಾನ್‌ಗೆ ಪ್ರಯಾಣಿಸದಂತೆ ಸರ್ಕಾರವು ಭಾರತೀಯ ನಾಗರಿಕರಿಗೆ ಸಲಹೆ ನೀಡಿದೆ.
ಅಧಿಕಾರಿಗಳು ಇರಾನ್‌ನಲ್ಲಿರುವ ಭಾರತೀಯರಿಗೆ ಜಾಗರೂಕರಾಗಿರಲು ಮತ್ತು ಟೆಹ್ರಾನ್‌ನಲ್ಲಿರುವ ರಾಯಭಾರ ಕಚೇರಿಯೊಂದಿಗೆ (Embassy) ಸಂಪರ್ಕದಲ್ಲಿರಲು ಸೂಚಿಸಿದ್ದಾರೆ. ನಾವು ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿಯಲ್ಲಿ ಇತ್ತೀಚಿನ ಉಲ್ಬಣವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಇರಾನ್‌ಗೆ ಅನಿವಾರ್ಯವಲ್ಲದ ಪ್ರಯಾಣವನ್ನು ತಪ್ಪಿಸಲು ಭಾರತೀಯ ಪ್ರಜೆಗಳಿಗೆ ಸೂಚಿಸಲಾಗಿದೆ. ಪ್ರಸ್ತುತ ಇರಾನ್‌ನಲ್ಲಿ ನೆಲೆಸಿರುವವರು ಜಾಗರೂಕರಾಗಿರಲು ಮತ್ತು ಟೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ವಿನಂತಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆ ಮೂಲಕ ತಿಳಿಸಿದೆ. ಇದನ್ನೂ ಓದಿ: Iran Attacks Israel | ದೆಹಲಿಯ ಇಸ್ರೇಲ್ ರಾಯಭಾರ ಕಚೇರಿಯ ಭದ್ರತೆ ಹೆಚ್ಚಳ
Advertisement
Advertisement
ದಯವಿಟ್ಟು ಜಾಗರೂಕರಾಗಿರಿ, ದೇಶದೊಳಗೆ ಅನಗತ್ಯ ಪ್ರಯಾಣವನ್ನು ತಪ್ಪಿಸಿ ಮತ್ತು ಸುರಕ್ಷತಾ ಆಶ್ರಯಕ್ಕೆ ಹತ್ತಿರದಲ್ಲಿರಿ. ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ನಮ್ಮ ಎಲ್ಲಾ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಇಸ್ರೇಲಿ ಅಧಿಕಾರಿಗಳೊಂದಿಗೆ ನಿಯಮಿತ ಸಂಪರ್ಕದಲ್ಲಿದೆ ಎಂದು ಇಸ್ರೇಲ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮಾಹಿತಿ ನೀಡಿದೆ. ಇದನ್ನೂ ಓದಿ: ಪ್ರವಾಹ ಪೀಡಿತ ರಾಜ್ಯಗಳಿಗೆ ಗೃಹ ಇಲಾಖೆಯಿಂದ 5858.60 ಕೋಟಿ ಪರಿಹಾರ ಬಿಡುಗಡೆ
Advertisement