ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್(Emmanuel Macron) ಜೊತೆ ಮಾತನಾಡಿದ್ದಾರೆ.
Spoke with my dear friend, President Emmanuel Macron, on the situation in West Asia and the urgent need for de-escalation, as well as a return to dialogue and diplomacy.
We look forward to continuing our close coordination to advance peace and stability in the region and…
— Narendra Modi (@narendramodi) March 19, 2026
ಪಶ್ಚಿಮ ಏಷ್ಯಾದ ಪರಿಸ್ಥಿತಿ ಮತ್ತು ಉದ್ವಿಗ್ನತೆಯನ್ನು ಶಮನಗೊಳಿಸುವ ತುರ್ತು ಅಗತ್ಯತೆ ಹಾಗೂ ರಾಜತಾಂತ್ರಿಕತೆಗೆ ಮರಳುವ ಬಗ್ಗೆ ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತನಾಡಿದೆ ಎಂದು ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
Spoke with my friend, Prime Minister Anwar Ibrahim of Malaysia, and conveyed warm greetings to him and the people of Malaysia on the occasion of the upcoming festival of Hari Raya Aidilfitri.
We also discussed the deeply concerning situation in West Asia and reaffirmed our…
— Narendra Modi (@narendramodi) March 19, 2026
ಈ ಪ್ರದೇಶಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಮುನ್ನಡೆಸಲು ನಮ್ಮ ನಿಕಟ ಸಮನ್ವಯವನ್ನು ಮುಂದುವರಿಸಲು ನಾವು ಎದುರು ನೋಡುತ್ತಿದ್ದೇವೆ ಎಂದು ಬರೆದಿದ್ದಾರೆ.
Had a productive conversation with my brother Sultan Haitham bin Tariq and conveyed advance Eid greetings to the people of Oman.
We agreed on the need to prioritize dialogue and diplomacy for de-escalation and subsequent restoration of peace and stability.
Reiterated India’s…
— Narendra Modi (@narendramodi) March 19, 2026
ಮ್ಯಾಕ್ರನ್ ಅಲ್ಲದೇ ಉದ್ವಿಗ್ನತೆಯನ್ನು ಶಮನಗೊಳಿಸುವ ನಿಟ್ಟಿನಲ್ಲಿ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ, ಒಮಾನ್ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅಲ್ ಸೈದ್ ಅವರ ಜೊತೆ ಮೋದಿ ಮಾತನಾಡಿದ್ದಾರೆ.

