ಬೆಂಗಳೂರು: ಇರಾನ್ ಯುದ್ಧದ (Iran) ಬಿಸಿ ಈಗ ನಗರದ ಹೋಟೆಲ್‌ಗಳಿಗೆ ತಟ್ಟಿದೆ. ವಾಣಿಜ್ಯ ಸಿಲಿಂಡರ್‌ಗಳ(Commercial Cylinder) ಅಭಾವ ಉಂಟಾಗುತ್ತಿದೆ ಎಂದು ಹೋಟೆಲ್‌ಗಳ (Hotel) ಅಸೋಸಿಯೇಷನ್ ಹೇಳಿದೆ.
ಗೌರವಾಧ್ಯಕ್ಷ ಪಿಸಿ ರಾವ್ ಪ್ರತಿಕ್ರಿಯಿಸಿ, ವಾಣಿಜ್ಯ ಸಿಲಿಂಡರ್‌ಗಳು ಸರಿಯಾದ ಸಮಯಕ್ಕೆ ಸಿಗುತ್ತಿಲ್ಲ. ಇಂದಿನಿಂದ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಸರಬರಾಜು ನಿಲ್ಲಿಸಲಾಗಿದೆ ಎಂದು ಹೇಳಿದ್ದಾರೆ.
ಹೋಟೆಲ್ ಉದ್ಯಮ ಅಗತ್ಯ ಸೇವೆಯ ಅಡಿಯಲ್ಲಿ ಬರುವುದರಿಂದ ಇದನ್ನೇ ಅವಲಂಬಿಸಿರುವ ಜನಸಾಮಾನ್ಯರು, ಹಿರಿಯ ನಾಗರೀಕರು ವಿದ್ಯಾರ್ಥಿಗಳು, ವೈದ್ಯಕೀಯ ಹಾಗೂ ಇನ್ನಿತರ ಸೇವೆಯಲ್ಲಿರುವ ಹೆಚ್ಚಿನ ಜನರಿಗೆ ತಮ್ಮ ದಿನನಿತ್ಯದ ತಿಂಡಿ-ತಿನಿಸುಗಳಿಗೆ ತೊಂದರೆಯಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇರಾನ್ ಬೀದಿಯಲ್ಲಿ ಬೆಂಕಿಯ ಮಳೆ – ಇಸ್ರೇಲ್ ದಾಳಿಗೆ ಅಮೆರಿಕ ಅಸಮಾಧಾನ
ಗ್ಯಾಸ್ ಸರಬರಾಜು ಮತ್ತೆ ಸಾಮಾನ್ಯ ಸ್ಥಿತಿಗೆ ಬರುವವರೆಗೆ ನಮ್ಮ ಹೋಟೆಲ್ ಉದ್ಯಮವೂ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ. ತೈಲ ಕಂಪನಿಗಳು 70 ದಿನಗಳವರೆಗೆ ಗ್ಯಾಸ್ ಸರಬರಾಜಿನಲ್ಲಿ ಯಾವುದೇ ಅಡಚಣೆ ಉಂಟಾಗುವುದಿಲ್ಲವೆಂದು ತಿಳಿಸಿದ್ದರು. ಹೀಗಿದ್ದರೂ ಏಕಾಏಕಿ ಸರಬರಾಜು ನಿಲ್ಲಿಸಿರುವುದು ಹೊಟೇಲು ಉದ್ಯಮಕ್ಕೆ ದೊಡ್ಡ ಹೊಡೆತವಾಗಿದೆ. ಆದ್ದರಿಂದ ಸಂಬಂಧಪಟ್ಟ ಕೇಂದ್ರ ಸಚಿವರುಗಳು ಈ ವಿಚಾರದಲ್ಲಿ ತಕ್ಷಣವೇ ಸೂಕ್ತ ಕ್ರಮ ಕೈಗೊಂಡು ವಾಣಿಜ್ಯ ಗ್ಯಾಸ್ ಸರಬರಾಜನ್ನು ಪುನರಾರಂಭ ಮಾಡಿ ಹೊಟೇಲು ಉದ್ಯಮಕ್ಕೆ ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.

