ವಾಷಿಂಗ್ಟನ್: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 5 ದಿನ ಕದನ ವಿರಾಮ ಘೋಷಣೆ ಮಾಡಿದ್ದಾರೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 48 ಗಂಟೆಗಳಲ್ಲಿ ಹಾರ್ಮುಜ್ ಜಲಸಂಧಿ ತೆರೆಯದಿದ್ದರೆ ನಿಮ್ಮ ವಿದ್ಯುತ್ ಸ್ಥಾವರ ನಾಶ ಮಾಡುವುದಾಗಿ ಇರಾನಿಗೆ ಬೆದರಿಕೆ ಹಾಕಿದ್ದರು. ಈ ಡೆಡ್‌ಲೈನ್ ಒಳಗಡೆ ಇರಾನ್ ತೆರೆಯದೇ ಇದ್ದರೆ ದೊಡ್ಡ ಪ್ರಮಾಣದ ಯುದ್ಧ ನಡೆಯುವ ಸಾಧ್ಯತೆ ಇತ್ತು.

ಇರಾನ್ ಬೆದರಿಕೆಗೆ ಜಗ್ಗದ ಕಾರಣ ದೊಡ್ಡ ಪ್ರಮಾಣದ ದಾಳಿ ನಡೆಯಬಹುದು ಎಂದು ಊಹಿಸುತ್ತಿದ್ದಾಗಲೇ ಟ್ರಂಪ್ 5 ದಿನದ ಕದನ ವಿರಾಮ ಘೋಷಣೆ ಮಾಡಿದ್ದಾರೆ.
ತಮ್ಮ ಟ್ರೂಥ್ ಸಾಮಾಜಿಕ ಜಾಲತಾಣದಲ್ಲಿ ಇರಾನ್ ದೇಶದ ಜೊತೆ ಕಳೆದ ಎರಡು ದಿನಗಳಲ್ಲಿ ಉತ್ತಮ ಮಾತುಕತೆ ನಡೆದಿದೆ ಎಂದು ಟ್ರಂಪ್ ಹೇಳಿದ್ದಾರೆ.
ಫಲಪ್ರದವಾದ ಮಾತುಕತೆ ನಡೆದ ಹಿನ್ನೆಲೆಯಲ್ಲಿ ಇರಾನಿನ ವಿದ್ಯುತ್ ಸ್ಥಾವರಗಳು ಮತ್ತು ಇಂಧನ ಮೂಲಸೌಕರ್ಯಗಳ ಮೇಲಿನ ಎಲ್ಲಾ ಮಿಲಿಟರಿ ದಾಳಿಗಳನ್ನು ಐದು ದಿನಗಳ ಅವಧಿಗೆ ಮುಂದೂಡಲು ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ತಮ್ಮ ಪೋಸ್ಟ್‌ನಲ್ಲಿ ಕದನ ವಿರಾಮ ಈಗ ನಡೆಯುತ್ತಿರುವ ಸಭೆ ಮತ್ತು ಚರ್ಚೆಗಳ ಯಶಸ್ಸಿಗೆ ಒಳಪಟ್ಟಿರುತ್ತದೆ ಎಂದು ಅವರು ಹೇಳಿದ್ದಾರೆ.

