ಲಕ್ನೋ: ಫರಿದಾಬಾದ್ ಸ್ಫೋಟಕ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಮೌಲ್ವಿ ದಂಪತಿಯನ್ನು ಬಂಧಿಸಲಾಗಿದೆ.
ಜಂಟಿ ಭದ್ರತಾ ಪಡೆಗಳು ಮೌಲ್ವಿ ಇಮಾಮ್ ಇರ್ಫಾನ್ ಅಹ್ಮದ್ ವಾಗೆಯನ್ನು ಬಂಧಿಸಿವೆ. ಶ್ರೀನಗರ ಪೊಲೀಸ್ & ಕೌಂಟರ್ ಇಂಟಲಿಜೆನ್ಸ್ ಕಾಶ್ಮೀರ ಜಂಟಿ ಕಾರ್ಯಾಚರಣೆ ನಡೆಸಿದ್ದವು.
ಆರೋಪಿ ಮನೆಯಿಂದ ಐದು ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆತನ ಪತ್ನಿಯನ್ನು ಶಂಕಿತ ಮೂಲಭೂತವಾದ ಸಂಪರ್ಕದ ಮೇಲೆ ಬಂಧಿಸಲಾಗಿದೆ. ಮೌಲ್ವಿಯ ವಿಚಾರಣೆ ನಡೆಸಿದಾಗ ಮುಜಮ್ಮಿಲ್ ನಂಟು ಪತ್ತೆಯಾಗಿದೆ.
ಇರ್ಫಾನ್ ಅಹ್ಮದ್ ವಾಗೆ, ‘ವೈಟ್-ಕಾಲರ್’ ಭಯೋತ್ಪಾದಕ ಮಾಡ್ಯೂಲ್‌ನ ಹಿಂದಿನ ಮಾಸ್ಟರ್ ಮೈಂಡ್ ಎಂದು ಶಂಕಿಸಲಾಗಿದೆ. ಈತ ವೈದ್ಯಕೀಯ ವೃತ್ತಿಪರರು ಮತ್ತು ವಿದ್ಯಾರ್ಥಿಗಳನ್ನು ಮೂಲಭೂತವಾದಿಗಳನ್ನಾಗಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪುಗಳಾದ ಜೈಶ್-ಎ-ಮೊಹಮ್ಮದ್ (ಜೆಇಎಂ) ಮತ್ತು ಅನ್ಸರ್ ಘಜ್ವತ್-ಉಲ್-ಹಿಂದ್ (ಎಜಿಯುಎಚ್) ಜೊತೆ ಸಂಪರ್ಕ ಹೊಂದಿದೆ ಎಂದು ವರದಿಯಾಗಿದೆ.

