CrimeLatestLeading NewsMain PostNational

ಗಂಡನ ಮನೆಯಲ್ಲಿ ಶೌಚಾಲಯ ಇಲ್ಲದ್ದಕ್ಕೆ ಪತ್ನಿ ಆತ್ಮಹತ್ಯೆ

ಚೆನ್ನೈ: ತನ್ನ ಗಂಡನ ಮನೆಯಲ್ಲಿ ಶೌಚಾಲಯ ಇಲ್ಲದಿರುವುದಕ್ಕೆ ಮನನೊಂದ 27 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ.

ಕಡಲೂರು ಜಿಲ್ಲೆಯ ಅರಿಸಿಪೆರಿಯಂಕುಪ್ಪಂ ಗ್ರಾಮದ ರಮ್ಯಾ ಆತ್ಮಹತ್ಯೆ ಶರಣಾದ ಗೃಹಿಣಿ. ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ರಮ್ಯಾ ಏಪ್ರಿಲ್ 6 ರಂದು ಕಾರ್ತಿಕೇಯನ್ ಎಂಬವರನ್ನು ವಿವಾಹವಾಗಿದ್ದರು. ಇದನ್ನೂ ಓದಿ: ಕಾಲ್ಗೆಜ್ಜೆ ಕದ್ದಿದ್ದಕ್ಕೆ ಅಪ್ರಾಪ್ತ ಬಾಲಕಿ ತಲೆಗೆ ಕಲ್ಲಿನಿಂದ ಹೊಡೆದು ಹತ್ಯೆಗೈದ ಮಹಿಳೆ

CRIME 2

ಮೂಲಗಳ ಪ್ರಕಾರ, ರಮ್ಯಾ ತನ್ನ ಗಂಡನ ಮನೆಯಲ್ಲಿ ಶೌಚಾಲಯವಿಲ್ಲದ ಕಾರಣ ಮದುವೆಯ ನಂತರ ತನ್ನ ತಾಯಿಯೊಂದಿಗೆ ವಾಸಿಸಲು ಪ್ರಾರಂಭಿಸಿದ್ದಳು. ಇದೇ ವೇಳೆ ರಾಜ್ಯದ ರಾಜಧಾನಿಗೆ ದೂರವಿರುವ ಕಡಲೂರು ನಗರದಲ್ಲಿ ಶೌಚಾಲಯವಿರುವ ಮನೆಯನ್ನು ಹುಡುಕುವಂತೆ ಪತಿಯನ್ನು ಕೇಳಿಕೊಂಡಿದ್ದರು. ಇದು ಅವರ ನಡುವೆ ವಿವಾದಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಹೊರಗೆ ಹೋಗಿದ್ದ ರಮ್ಯಾಳ ತಾಯಿ ಮನೆಗೆ ಬಂದು ನೋಡಿದಾಗ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡಿದ್ದಾರೆ. ಕೂಡಲೇ ಆಕೆಯನ್ನು ಕಡಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮದುವೆ ಆಮಂತ್ರಣ ಪತ್ರಿಕೆಗಳನ್ನು ಹಂಚಲು ಹೋಗಿದ್ದ ಯುವತಿಯ ಮೇಲೆ ಗ್ಯಾಂಗ್‍ರೇಪ್

Crime-Scene

ನಂತರ ರಮ್ಯಾ ಅವರನ್ನು ಪಾಂಡಿಚೇರಿಯ ಜವಾಹರಲಾಲ್ ಇನ್‌ಸ್ಟಿಟ್ಯೂಟ್ ಆಫ್ ಪೋಸ್ಟ್ ಗ್ರಾಜುಯೇಟ್ ಮೆಡಿಕಲ್ ಎಜುಕೇಶನ್ ಅಂಡ್ ರಿಸರ್ಚ್ (JIPMER) ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಸಮಯದಲ್ಲಿ ಅವರು ಮೃತಪಟ್ಟಿದ್ದಾರೆ. ರಮ್ಯಾಳ ತಾಯಿ ಮಂಜುಳಾ ತಿರುಪತಿರುಪುಲಿಯೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published.

Back to top button