ದಾವಣಗೆರೆ: ಅಧಿಕಾರಿಗಳ ನಿರ್ಲಕ್ಷ್ಯದಿಂದ 22 ಕೆರೆ ಯೋಜನೆಯ ಪೈಪ್ ಒಡೆದು ಕಾರಂಜಿಯಂತೆ ನದಿಯ ನೀರು ಚಿಮ್ಮುತ್ತಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಡೆದಿದೆ.
ತುಂಗಾಭದ್ರ ನದಿಯಿಂದ ದಾವಣಗೆರೆಯ ಬರ ತಾಲೂಕುಗಳ 22 ಕೆರೆಗಳಿಗೆ ಏತ ನೀರಾವರಿ ಮೂಲಕ ನೀರು ಪೂರೈಸಲಾಗುತ್ತಿದೆ. ನೀರು ಪೂರೈಸುವ ಪೈಪ್ ಗಳು ಪದೇ ಪದೇ ಒಡೆದು ನೀರು ಪೋಲಾಗುತ್ತಿದ್ದರೂ ನೀರಾವರಿ ಇಲಾಖೆ ಅಧಿಕಾರಿಗಳು ಮಾತ್ರ ಜಾಣ ಕುರುಡು ಪ್ರದರ್ಶನ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.
Advertisement
Advertisement
ತಿಂಗಳಲ್ಲಿ ಐದಕ್ಕಿಂತ ಹೆಚ್ಚು ಬಾರಿ ಪೈಪ್ ಹಾಗೂ ಏರ್ ವಾಲ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲಾಗುತ್ತಿದೆ. ಅಲ್ಲದೆ ಇಂದು ಒಡೆದ ಪೈಪ್ ನಿಂದ ಪಕ್ಕದಲ್ಲೇ ಇರುವ ಡಾಬಾಗೆ ನೀರು ನುಗ್ಗಿದ್ದು, ಸಾಕಷ್ಟು ತೊಂದರೆ ಅನುಭವಿಸುವಂತಾಯಿತು.
Advertisement
ಪದೇ ಪದೇ ನೀರು ಪೋಲಾಗುತ್ತಿದ್ದು, ಇಂದು ಮೂವತ್ತು ಅಡಿಗಳಷ್ಟು ಎತ್ತರಕ್ಕೆ ನೀರು ಚಿಮ್ಮುತ್ತಿದೆ. ಇದರಿಂದ ಲಕ್ಷಾಂತರ ಲೀಟರ್ ನೀರು ಪೋಲಾಗಿದೆ. ಆದರೆ ನೀರಾವರಿ ಇಲಾಖೆ ಅಧಿಕಾರಿಗಳು ಇದಕ್ಕೆ ಯಾವುದೇ ಶಾಶ್ವತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv