ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) (MUDA) ಹಗರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಪಾತ್ರ ಈ ಕ್ಷಣಕ್ಕೆ ಕಂಡುಬಂದಿಲ್ಲ ಎಂದು ಸಚಿವ ಬೈರತಿ ಸುರೇಶ್ (Byrathi Suresh) ಹೇಳಿದ್ದಾರೆ.
Advertisement
ಮೈಸೂರಿನಲ್ಲಿ (Mysuru) ಮುಡಾ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, `ಮುಡಾ ಹಗರಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಪಾತ್ರ ಇದೆ’ ಎಂಬ ಮಾಜಿ ಸಚಿವ ಹೆಚ್. ವಿಶ್ವನಾಥ್ (H Vishwanath) ಅವರ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ಯತೀಂದ್ರ ಅವರ ಪಾತ್ರ ಈ ಕ್ಷಣಕ್ಕೆ ಕಂಡುಬಂದಿಲ್ಲ. ಯತೀಂದ್ರ (Yathindra Siddaramaiah) ಈಗ ಎಂಎಲ್‌ಸಿ ಆಗಿದ್ದಾರೆ. ಈ ಹಿಂದೆ ಶಾಸಕರಾಗಿದ್ದರು ಇದಕ್ಕೂ ಅವರಿಗೂ ಸಂಬಂಧವಿಲ್ಲ. ಹೆಚ್. ವಿಶ್ವನಾಥ್ ಅವರು ನಮಗಿಂತ ಹಿರಿಯರು. ಯತೀಂದ್ರ ಬಗ್ಗೆ ಹೇಳೋದಕ್ಕೆ ಏನು ಸಾಕ್ಷಿಯಿದೆ? ಅವರ ಹೇಳಿಕೆಯನ್ನ ಆ ದೇವರೇ ಮೆಚ್ಚಬೇಕು. ವಿಶ್ವನಾಥ್ ಅವರ ಬಳಿ ಸಾಕ್ಷಿ ಇದ್ದರೆ ತಂದು ಕೊಡಲಿ ಎಂದು ಸವಾಲು ಹಾಕಿದ್ದಾರೆ.
Advertisement
Advertisement
ಇನ್ನೂ ಮುಡಾ ದಾಖಲಾತಿಗಳನ್ನ ಪೆನ್‌ಡ್ರೈವ್‌ನಲ್ಲಿ ಹಾಕಿ ಕೊಡುವಂತೆ ಕೇಳಿದ್ದ ವಿಶ್ವನಾಥ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ನಮ್ಮಲ್ಲಿ ಪೆನ್‌ಡ್ರೈವ್ ಸಂಸ್ಕೃತಿ ಇಲ್ಲ. ಈ ಬಗ್ಗೆ ನನಗೆ ಗೊತ್ತಿಲ್ಲ, ವಿಶ್ವನಾಥ್ ಈಗ ಮಾತನಾಡುತ್ತಿದ್ದಾರೆ. ನನ್ನ ಬಳಿ ಸೈಟ್ ಕೊಡಿಸುವಂತೆ ವಿಶ್ವನಾಥ್ ಬಂದಿದ್ದರು. ಅದನ್ನ ನೆನಪು ಮಾಡಿಕೊಳ್ಳಲಿ. ಸುಮ್ಮನೆ ಆರೋಪಗಳನ್ನ ಮಾಡುವುದನ್ನ ನಿಲ್ಲಿಸಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮೋದಿ ಅಂದ್ರೆ ಪೂರ್ಣ ಹಿಂದೂ ಸಮಾಜ ಅಲ್ಲ, ಹಿಂದೂ ಅಂತ ಕರೆಸಿಕೊಳ್ಳೋರು ಹಿಂಸೆ, ದ್ವೇಷ ಹರಡುತ್ತಿದ್ದಾರೆ: ರಾಗಾ ವಾಗ್ದಾಳಿ
Advertisement
ಬಿಜೆಪಿ ಸರ್ಕಾರ ಅವಧಿಯ ಆದೇಶ ರದ್ದು:
ಮುಡಾ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿವೆ. 7 ತಿಂಗಳ ಹಿಂದೆ ನಾನೇ ಆದೇಶ ಮಾಡಿದ್ದೇನೆ. ತುಂಡು ಭೂಮಿ ಹಂಚಿಕೆ ಮಾಡದಂತೆ ಆದೇಶ ಮಾಡಿದ್ದೇನೆ. ಜೊತೆಗೆ ಬಿಜೆಪಿ ಸರ್ಕಾರ ಇದ್ದಾಗ ಮಾಡಿದ್ದ ಆದೇಶಗಳನ್ನ ರದ್ದು ಮಾಡಲು ಸೂಚನೆ ನೀಡಿದ್ದೇನೆ ಎಂದು ಸಚಿವ ಬೈರತಿ ಸುರೇಶ್ ಹೇಳಿದ್ದಾರೆ. ಇದನ್ನೂ ಓದಿ: ಮೈಸೂರು ಮುಡಾದಲ್ಲಿ ಹಗರಣ ಆರೋಪ – ಆಯುಕ್ತ ದಿನೇಶ್ ಕುಮಾರ್ ತಲೆದಂಡ!