ನವದೆಹಲಿ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ರುವಾರಿ, ಭೂಗತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಪಾಕಿಸ್ತಾನದಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾನೆ ಎನ್ನುವ ಸುದ್ದಿಯನ್ನು ಸಹಚರ ಚೋಟಾ ಶಕೀಲ್ ಅಲ್ಲಗೆಳೆದಿದ್ದಾನೆ.
61 ವರ್ಷದ ದಾವೂದ್ ಇಬ್ರಾಹಿಂಗೆ ಪಾಕಿಸ್ತಾನದ ಕರಾಚಿಯಲ್ಲಿ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಹೃದಯಾಘಾತವಾಗಿ ಗಂಭೀರ ಸ್ಥಿತಿಯಲ್ಲಿದ್ದು, ಆಗಾ ಖಾನ್ ಆಸ್ಪತ್ರೆಯಲ್ಲಿ ದಾಖಲಾಗಿ ಮೃತಪಟ್ಟಿದ್ದಾನೆ ಅಂತಾ ಶುಕ್ರವಾರ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ್ದವು.
ಈ ಬಗ್ಗೆ ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ದಾವೂದ್ ಸಹಚರ ಚೋಟಾ ಶಕೀಲ್, ದಾವೂದ್ ಇಬ್ರಾಹಿಂ ಮೃತಪಟ್ಟಿಲ್ಲ. ಆರೋಗ್ಯ ಚೆನ್ನಾಗಿದೆ. ಹೃದಯಘಾತವಾಗಿದೆ ಅನ್ನೋದು ವದಂತಿ ಅಂತಾ ಸ್ಪಷ್ಟಪಡಿಸಿದ್ದಾನೆ.
ಏಪ್ರಿಲ್ 19ರಂದು ಕರಾಚಿಯಲ್ಲಿರುವ ತನ್ನ ಅಳಿಯನ ಮನೆಯಲ್ಲಿ ಪಾತಕಿ ದಾವೂದ್ ಇಬ್ರಾಹಿಂ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದ ಎಂದು ಗುಪ್ತಚರ ಇಲಾಖೆ ತಿಳಿಸಿತ್ತು.