ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಬಗ್ಗೆ ಬೀದಿಯಲ್ಲಿ ಚರ್ಚೆ ಮಾಡಲು ಆಗುತ್ತಾ? ಎಂದು ಸಾರಿಗೆ ಸಚಿವ ಬೈರತಿ ಸುರೇಶ್ (Byrathi Suresh) ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ (HD Kumaraswamy) ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಹೆಬ್ಬಾಳ ಜಂಕ್ಷನ್‌ನಿಂದ ಪಶು ವೈದ್ಯಕೀಯ ಸಿಬ್ಬಂದಿ ವಸತಿ ಸಮುಚ್ಚಯದವರೆಗೆ ನಿರ್ಮಿಸಲು ಉದ್ದೇಶಿಸಿರುವ 3 ಪಥದ ಸುರಂಗ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಇದನ್ನೂ ಓದಿ: T20 World Cup | ಲಾರ್ಡ್‌ನಲ್ಲಿ ಆಸೀಸ್ ವನಿತೆಯರೇ ಲಾರ್ಡ್ – ಭಾರತದ ಸೆಮೀಸ್ ಕನಸು ಭಗ್ನ
ಬಿಡದಿ ಟೌನ್‌ಶಿಪ್ (Bidadi Township) ಕುರಿತಾದ ಚರ್ಚೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಬಂದಿಲ್ಲ ಎಂದು ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇದು ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾಗಿದೆ. ಇಂತಹ ಯೋಜನೆ ಬಗ್ಗೆ ಬೀದಿಯಲ್ಲಿ ಕುಳಿತು ಚರ್ಚಿಸಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಬಿಡದಿ ಬಿಕ್ಕಟ್ಟು | ಮುಖ್ಯಮಂತ್ರಿ ಜೊತೆ ಚರ್ಚೆಗೆ ನಾನು ಈಗಲೂ ಸಿದ್ಧ: ಹೆಚ್‌ಡಿಕೆ
ಪ್ರಜಾಪ್ರಭುತ್ವದಲ್ಲಿ ಇದೆಲ್ಲಾ ಅಸಾಧ್ಯವಾದ ಮಾತು. ಮುಖ್ಯಮಂತ್ರಿಗಳು ಗೌರವಯುತವಾಗಿ ವಿಧಾನಸೌಧದಲ್ಲಿ ಚರ್ಚೆಗೆ ಆಹ್ವಾನಿಸಿದ್ದರು. ಆದರೆ, ಕುಮಾರಸ್ವಾಮಿಯವರು ಬಂದಿಲ್ಲ ಎಂದು ಹೇಳಿದ ಅವರು, ಈ ಯೋಜನೆಗೆ ವಿರೋಧವಾಗಿರುವವರು ಬಹಳ ಕಮ್ಮಿ. ಪರ ಇರೋರು ಜಾಸ್ತಿ ಇದ್ದಾರೆ. ಶೇ.80 ರಷ್ಟು ರೈತರು ಸಮ್ಮತಿ ಸೂಚಿಸಿದರೆ ಮಾತ್ರ ಯೋಜನೆ ಜಾರಿಗೆ ತರಬೇಕು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ಅದರ ಪ್ರಕಾರವೇ ಬಿಡದಿ ಟೌನ್‌ಶಿಪ್‌ಗೆ ಶೇ.80ಕ್ಕಿಂತ ಹೆಚ್ಚು ರೈತರು ಸಮ್ಮತಿ ಸೂಚಿಸಿದ್ದಾರೆ. ಹೀಗಾಗಿಯೇ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಕ್ಯಾಪ್ಟನ್ ಬೆನ್‌ಸ್ಟೋಕ್ಸ್ ದಿಢೀರ್ ನಿವೃತ್ತಿ
ರಾಜಕೀಯದಲ್ಲಿ ಯುಗಾಂತ್ಯವೂ ಇಲ್ಲ, ಆರಂಭವೂ ಇಲ್ಲ:
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದವಿಯಿಂದ ಕೆಳಗಿಳಿದ ನಂತರ ಅವರ ಯುಗಾಂತ್ಯವಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಬೈರತಿ ಸುರೇಶ್, ರಾಜಕೀಯದಲ್ಲಿ ಯುಗಾಂತ್ಯವೆಂಬುದಾಗಲೀ, ಆರಂಭ ಎಂಬುದಾಗಲೀ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕರ್ಮಕಾಂಡದ ಬಗ್ಗೆ ಚಂಪತ್ ರಾಯ್‌ಗೆ ಮೊದಲೇ ಗೊತ್ತಿತ್ತು? – ದೂರು ದಾಖಲಾಗೋ ಮೊದಲೇ ತನಿಖೆ ಶುರುವಾಗಿತ್ತು!
ಸಿದ್ದರಾಮಯ್ಯನವರ ಆಶೀರ್ವಾದ ನಮಗಿದೆ ಎಂದು ಸ್ವತಃ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೇ ಹೇಳಿದ್ದಾರೆ. ನಾವು ಜೊತೆಯಲ್ಲೇ ರಾಜಕೀಯ ಮಾಡುತ್ತೇವೆ ಎಂದೂ ಹೇಳಿದ್ದಾರೆ. ಹೀಗಾಗಿ ಇವರಿಬ್ಬರೂ ಕಾಂಗ್ರೆಸ್ ಪಕ್ಷದಲ್ಲಿ ಜೋಡೆತ್ತುಗಳಿದ್ದಂತೆ ಎಂದರು. ಇದನ್ನೂ ಓದಿ: ಜೂ.30ರಿಂದ ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ – ಈ ದಾಖಲೆಗಳು ಕಡ್ಡಾಯ
ಈ ಜೋಡೆತ್ತುಗಳು ಕಳೆದ ಹಲವಾರು ವರ್ಷಗಳಿಂದ ದುಡಿದು ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಇವರಿಬ್ಬರು ದುಡಿಯುತ್ತಾ 2028 ಕ್ಕೂ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಶತಃಸಿದ್ಧ ಎಂದು ಹೇಳಿದರು. ಇದನ್ನೂ ಓದಿ: ತ್ರಿಬಲ್ ಮರ್ಡರ್ ಕೇಸ್| ನಾನಲ್ಲ, ಅವನೇ ರಕ್ಕಸನಂತೆ ಕೊಂದಿದ್ದು – ಪ್ರೇಮಿಗಾಗಿ ಕೊಲೆ ಹೊಣೆ ಹೊತ್ತಿದ್ದ ಶ್ವೇತಾ ಈಗ ಉಲ್ಟಾ
ರಾಷ್ಟ್ರಮಟ್ಟದಲ್ಲಿ ಪ್ರತಿಷ್ಠಿತ ಸ್ಥಾನ:
ಮುಖ್ಯಮಂತ್ರಿ ಪದವಿಯಿಂದ ಇಳಿದ ತಕ್ಷಣ ಸಿದ್ದರಾಮಯ್ಯ ಅವರಿಗೆ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ವೇಣುಗೋಪಾಲ್ ಅವರು ಇರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮಹತ್ವದ ಸ್ಥಾನ ನೀಡಲಾಗಿದೆ. ಈ ಮೂಲಕ ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷದ ಶ್ರೇಯಸ್ಸಿಗೆ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಧಾರವಾಡ ನಗರಕ್ಕೆ ತಂಪೆರೆದ ಮಳೆರಾಯ; 2 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಬಿತ್ತನೆ ಪೂರ್ಣ
ಅಹಿಂದ ಮತಗಳಿಗೆ ಚ್ಯುತಿ ಇಲ್ಲ:
ಸಿದ್ದರಾಮಯ್ಯನವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮಾರ್ಗದರ್ಶಕರಾಗಿದ್ದಾರೆ. ಅವರು ಮುಖ್ಯಮಂತ್ರಿ ಪದವಿಯಿಂದ ಇಳಿದ ತಕ್ಷಣ ಅಹಿಂದ ಮತಗಳು ಚದುರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ ಬೈರತಿ ಸುರೇಶ್, ದಾಖಲೆ ಅವಧಿಯ ಮುಖ್ಯಮಂತ್ರಿಯಾದ ಹೆಗ್ಗಳಿಕೆ ಅವರಿಗಿದೆ. ಅವರು ಸಂತಸದಿಂದ ಇದ್ದಾರೆ ಎಂದರು. ಇದನ್ನೂ ಓದಿ: ಬೆಂಗಳೂರಿನ ವೈಜ್ಞಾನಿಕ ನಗರ ಯೋಜನೆಗೆ ಸಮಾಧಿ ಶಿಲೆ ಹಾಕಿದ್ದೀರಿ – ತೇಜಸ್ವಿ ಸೂರ್ಯ ಕಿಡಿ
