ಬಾಲಿವುಡ್ ನಟಿ ಮಲೈಕಾ ಅರೋರಾ(Malaika Arora) ತಮ್ಮ ಫ್ಯಾನ್ಸ್‌ಗೆ ಡಬಲ್ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಅರ್ಜುನ್ ಕಪೂರ್ (Arjun Kapoor) ಮತ್ತು ಮಲೈಕಾ ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿಯ ಬೆನ್ನಲ್ಲೇ ಮಲೈಕಾ ಪ್ರೆಗ್ನೆನ್ಸಿ (Pregnant) ಸುದ್ದಿಯೊಂದು ಸಖತ್ ಚರ್ಚೆಯಾಗುತ್ತಿದೆ.
ಅರ್ಜುನ್ ಕಪೂರ್ ಮತ್ತು ಮಲೈಕಾ ಸಾಕಷ್ಟು ವರ್ಷಗಳಿಂದ ಡೇಟಿಂಗ್ ಮಾಡ್ತಿದ್ದಾರೆ. ಅದರ ಪ್ರತಿಫಲವಾಗಿಯೇ ಇದೀಗ ನಟಿ ಪ್ರಗ್ನೆಂಟ್ ಆಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ಇತ್ತೀಚೆಗಷ್ಟೇ ಈ ಜೋಡಿ ಲಂಡನ್‌ಗೆ ಹೋಗಿದ್ದರು. ಈ ವೇಳೆ ತಮ್ಮ ಆಪ್ತರಿಗೆ ತಮ್ಮ ಪ್ರೆಗ್ನೆನ್ಸಿ ವಿಚಾರವನ್ನ ಬಿಚ್ಚಿಟ್ಟಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಬ್ಯಾನ್ ಆಕ್ರೋಶದ ಬೆನ್ನಲ್ಲೇ ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ
ಇನ್ನೊಂದು ಕಡೆ ನಟಿ ಮಲೈಕಾ ಹೊಸ ರಿಯಾಲಿಟಿ ಶೋನ ನಿರೂಪಣೆಯ ಜವಬ್ದಾರಿ ಹೊತ್ತಿದ್ದಾರೆ. `ಮೂವಿಂಗ್ ಇನ್ ವಿತ್ ಮಲೈಕಾ’ ಶೋ ಮೂಲಕ ಕಮಾಲ್ ಮಾಡಲು ರೆಡಿಯಾಗಿದ್ದಾರೆ. ಇದರ ಜೊತೆ ಮಲೈಕಾ ಅವರ ಮಗ ಅರ್ಹಾನ್ ಖಾನ್ ಕೂಡ ಚಿತ್ರರಂಗಕ್ಕೆ ಲಗ್ಗೆ ಇಡಲು ಸಕಲ ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಬ್ಯಾನ್ ಆಕ್ರೋಶದ ಬೆನ್ನಲ್ಲೇ ವಿದೇಶಕ್ಕೆ ಹಾರಿದ ರಶ್ಮಿಕಾ ಮಂದಣ್ಣ
ಅಷ್ಟಕ್ಕೂ ಈ ಪ್ರೆಗ್ನೆನ್ಸಿ ಸುದ್ದಿ ನಿಜಾನಾ ಅಥವಾ ಗಾಸಿಪ್ ಎಂಬುದಕ್ಕೆ ಮಲೈಕಾ ಅವರು ಅಧಿಕೃತ ಮಾಹಿತಿ ತಿಳಿಸುವವರೆಗೂ ಕಾದುನೋಡಬೇಕಿದೆ.