ಚಿಕ್ಕಬಳ್ಳಾಪುರ: ನಗರ ಹೊರವಲಯದ ಕೆವಿ ಕ್ಯಾಂಪಸ್ ಗೆ ಆಗಮಿಸಿದ ನಟ ಪವನ್‍ಕಲ್ಯಾಣ್ ಅವರಿಗೆ ಅಭಿಮಾನಿಗಳು ಹೂ ಮಳೆಯನ್ನು ಸುರಿಸಿದ್ದಾರೆ.
ನಟ ಪವನ್ ರಾಜ್ಯಕ್ಕೆ ಆಗಮಿಸಿದ್ದರಿಂದ ರಾಜ್ಯದ ತೆಲುಗು ಪ್ರಭಾವ ಹೊಂದಿರುವ ಕ್ಷೇತ್ರಗಳಲ್ಲಿ ಜನಸೇನಾ ಪಕ್ಷದ ಅಭ್ಯರ್ಥಿಗಳನ್ನು ಚುನಾವಣೆಗೆ ನಿಲ್ಲಿಸುತ್ತಾರೆ ಎನ್ನಲಾಗಿದೆ. ಪ್ರಮುಖವಾಗಿ ಬಳ್ಳಾರಿ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರಿನ ಪಾವಗಡ, ರಾಯಚೂರು, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕ್ಷೇತ್ರಗಳ್ಲಿ ಪವನ್ ಪಾಲಿಟಿಕ್ಸ್ ಆರಂಭವಾಲಿದೆ ಎನ್ನಲಾಗುತ್ತಿದೆ. ಈ ಕ್ಷೇತ್ರಗಳಲ್ಲಿ ಸುಮಾರು 20ಕ್ಕೂ ಹೆಚ್ಚು ಜನಸೇನಾ ಅಭ್ಯರ್ಥಿಗಳನ್ನು ನಿಲ್ಲಿಸಲು ಚಿಂತನೆ ನಡೆಸಲಾಗುತ್ತದೆ ಎನ್ನಲಾಗಿದ್ದು ಪವನ್ ಕಲ್ಯಾಣ್ ನಡೆಯಿಂದ ರಾಷ್ಟ್ರೀಯ ಪಕ್ಷಗಳಲ್ಲಿ ತಳಮಳ ಶುರುವಾಗಿದೆ.
Advertisement
Advertisement
ಇಂದು ಸಂಜೆ ಚಿಕ್ಕಬಳ್ಳಾಪುರದ ಕೆವಿ ಕ್ಯಾಂಪಸ್ ನ ಆವರಣಕ್ಕೆ ಆಗಮಿಸಿದ್ದರು. ಇದಕ್ಕೂ ಮುನ್ನ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಚುನಾವಣೆ ಸ್ಪರ್ಧಿಸಲು ತೀರ್ಮಾನಿಸಿರುವ ಕೆವಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ನವೀನ್ ಕಿರಣ್ ಅವರ ಮನೆಗೆ ಭೇಟಿ ನೀಡಿದರು. ಈ ವೇಳೆ ಕೆಲ ಕಾಲ ಮಾತುಕತೆ ನಡೆಸಿದರು.
Advertisement
ಪ್ರಸ್ತುತ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕರಾಗಿರುವ ಸುಧಾಕರ್ ಅವರನ್ನು ಸೋಲಿಸುವ ತಂತ್ರ ಎಂದೇ ಪವನ್ ಭೇಟಿಯನ್ನು ವಿಶ್ಲೇಷಿಸಲಾಗುತ್ತಿದೆ. ನವೀನ್ ಕಿರಣ್ ಅವರ ರಾಜಕೀಯ ಮಹತ್ವಕಾಂಕ್ಷಿಗೆ ಪವನ್ ಕಲ್ಯಾಣ್ ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದ್ದು, ಮುಂದಿನ ಚುನಾವಣೆಯಲ್ಲಿ ಜನಸೇನಾ ಪಕ್ಷದಿಂದ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸುವ ಮುನ್ಸೂಚನೆಯಾಗಿದೆ.
Advertisement
ಪ್ರಸ್ತುತ ಪವನ್ ಕಲ್ಯಾಣ್ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಂತೆ ಕಾಣುತ್ತಿದ್ದು, ರಾಜಕೀಯದಲ್ಲಿ ಸಕ್ರೀಯವಾಗಿ ಭಾಗವಹಿಸುತ್ತಿದ್ದಾರೆ. 2014 ಮಾರ್ಚ್ ನಲ್ಲಿ ತಮ್ಮದೇ `ಜನ ಸೇನಾ’ ಎಂಬ ಪ್ರಾದೇಶಿಕ ಪಕ್ಷವನ್ನು ಸ್ಥಾಪಿಸಿದ್ದ ಪವನ್ ಕಲ್ಯಾಣ್ ಪಕ್ಷದ ಮೂರನೇ ವರ್ಷದ ವಾರ್ಷಿಕೋತ್ಸವದಲ್ಲಿ ಜನಸೇನಾ 2019ರ ವಿಧಾನಸಭಾ ಚುನವಾಣೆಯಲ್ಲಿ ಆಂಧ್ರ ಮತ್ತು ತೆಲಂಗಾಣ ಎರಡೂ ರಾಜ್ಯಗಳಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಸಹೋದರ ಚಿರಂಜೀವಿ ಜನಸೇನಾ ಪಕ್ಷಕ್ಕೆ ಸೇರ್ಪಡೆಯಾಗಲ್ಲ. ರಾಜಕೀಯವಾಗಿ ನನ್ನ ಆಲೋಚನೆಗಳು ಅವರೊಂದಿಗೆ ಹೊಂದಾಣಿಕೆ ಆಗುವುದಿಲ್ಲ. 2019ರ ಚುನಾವಣೆಯಲ್ಲಿ ನಮ್ಮ ಪಕ್ಷದಿಂದ ಶೇ.60ರಷ್ಟು ಕ್ಷೇತ್ರಗಳಲ್ಲಿ ಯುವಕರು ಸ್ಪರ್ಧಿಸಲಿದ್ದು, ನಾನು ಅನಂತಪುರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದೇನೆ ಎಂದು ತಿಳಿಸಿದ್ದರು.
https://www.youtube.com/watch?v=dxqHOQ9lLic