ರಾಯಚೂರು: ಗ್ರಾಮೀಣಾಭಿವೃದ್ಧಿ ಇಲಾಖೆಯ (PDO) ಕಲ್ಯಾಣ ಕರ್ನಾಟಕ ವೃಂದದ 97 ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಸಿದ್ದಪಡಿಸಲಾಗಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ಯಾ ಎಂಬ ಗಂಭೀರ ಪ್ರಶ್ನೆ ಎದ್ದಿದೆ.
(ಪಿಡಿಒ) ಹುದ್ದೆಗಳ ನೇಮಕಾತಿಗೆ ಕಲ್ಯಾಣ ಕರ್ನಾಟಕ ಭಾಗದ 298 ಪರೀಕ್ಷಾ ಉಪ ಕೇಂದ್ರಗಳಲ್ಲಿ ಇಂದು (ನ.17) ‘ಸ್ಪರ್ಧಾತ್ಮಕ ಪರೀಕ್ಷೆ’ ಆಯೋಜನೆಗೊಂಡಿತ್ತು. ಈ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿ ಅಭ್ಯರ್ಥಿಗಳು ಸಿಂಧನೂರು ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ಮುಂದೆ ಪ್ರತಿಭಟಿಸುತ್ತಿದ್ದಾರೆ.ಇದನ್ನೂ ಓದಿ: ಈರುಳ್ಳಿ ಬೆಲೆ ದಿಢೀರ್ ಏರಿಕೆಯಾಗಿದ್ದೇಕೆ?
Advertisement
Advertisement
ವಿದ್ಯಾರ್ಥಿಗಳು ಹೇಳೋದು ಏನು?
ಒಂದು ಕೋಣೆಯಲ್ಲಿ 24 ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಆದರೆ ಕೊಠಡಿಗೆ 24 ಪ್ರಶ್ನೆಪತ್ರಿಕೆ ಬದಲು ಕೇವಲ 12 ಪ್ರಶ್ನೆಪ್ರತಿಕೆಯನ್ನು ಕೆಪಿಎಸ್‌ಸಿ ಕಳುಹಿಸಿದೆ. ಈ ಹಿನ್ನೆಲೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದ್ದು ಮಾತ್ರವಲ್ಲದೇ ಕೊಠಡಿಗೆ ತರುವಾಗಲೇ ಬಂಡಲ್‌ಗಳು ತೆರೆದಿದ್ದವು. ಅಷ್ಟೇ ಅಲ್ಲದೇ ಪರೀಕ್ಷೆ ನಿಗದಿಯಾದ ಸಮಯಕ್ಕಿಂತಲೂ ತಡವಾಗಿ ಆರಂಭವಾಗಿತ್ತು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
Advertisement
ಸರ್ಕಾರಿ ಪದವಿ ಕಾಲೇಜಿನ ಎದುರಿನ ಕುಷ್ಟಗಿ – ಸಿಂಧನೂರು ರಸ್ತೆ ಬಂದ್ ಮಾಡಿ ಪ್ರತಿಭಟಿಸುತ್ತಿದ್ದು, ಬೀದರ್, ಕಲಬುರಗಿ ಹಾಗೂ ಯಾದಗಿರಿಯಿಂದ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ನೂರಾರು ಅಭ್ಯರ್ಥಿಗಳು ಕೆಪಿಎಸ್‌ಸಿ ವಿರುದ್ಧ ಪ್ರತಿಭಟಿಸುತ್ತಿದ್ದು, ಸ್ಥಳಕ್ಕೆ ಸಿಂಧನೂರು ನಗರ ಠಾಣೆ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.
Advertisement
ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯನಗರ, ಬಳ್ಳಾರಿ, ಕೊಪ್ಪಳ ಜಿಲ್ಲಾ ಕೇಂದ್ರಗಳು ಹಾಗೂ ಭಾಲ್ಕಿ, ಜೇವರ್ಗಿ, ಶಹಾಪುರ, ಸಿಂಧನೂರು, ಹಗರಿ ಬೊಮ್ಮನಹಳ್ಳಿ, ಕೂಡ್ಲಿಗಿ, ಗಂಗಾವತಿ ಮತ್ತು ಕುಷ್ಟಗಿ ತಾಲೂಕು ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯುತ್ತಿದೆ. ಭಾನುವಾರದ ಪರೀಕ್ಷೆಗೆ 99,107 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಕೆಪಿಎಸ್‌ಸಿ ತಿಳಿಸಿತ್ತು.ಇದನ್ನೂ ಓದಿ: ಬಾಲನಟ ರೋಹಿತ್ ಆರೋಗ್ಯ ಸ್ಥಿರ – ದವಡೆಗೆ ಶಸ್ತ್ರಚಿಕಿತ್ಸೆ, ಪ್ಲೇಟ್ ಅಳವಡಿಕೆ