ಬೆಂಗಳೂರು: ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಜಿ.ಟಿ.ದೇವೇಗೌಡರ ಎದರು ಸೋಲು ಕಂಡಿದ್ದರು. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ತಮ್ಮ ವಿರುದ್ಧ ಗೆಲುವು ಕಂಡಿದ್ದ ಜಿ.ಟೆ.ದೇವೇಗೌಡರಿಗೆ ಮೈಸೂರು ಜಿಲ್ಲಾ ಉಸ್ತುವಾರಿ ಪಟ್ಟ ನೀಡದಂತೆ ತೆರೆಮರೆಯಲ್ಲಿ ಕಸರತ್ತು ಆರಂಭಿಸಿದ್ರಾ ಎಂಬ ಪ್ರಶ್ನೆಯೊಂದು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.
ಸಚಿವ ಜಿ.ಟಿ.ದೇವೇಗೌಡರಿಗೆ ಮೈಸೂರು ಜಿಲ್ಲಾ ಉಸ್ತುವಾರಿಯನ್ನು ನೀಡಬೇಕೆಂದು ಬೆಂಬಲಿಗರು ಸಿಎಂ ಕುಮಾರಸ್ವಾಮಿ ಬಳಿ ಮನವಿ ಮಾಡಿಕೊಳ್ಳುತ್ತಿದ್ದಾರೆ. ಇತ್ತ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿಯನ್ನ ಜಿ.ಟಿ.ದೇವೇಗೌಡರಿಗೆ ಬಿಟ್ಟು ಯಾರಿಗಾದ್ರೂ ನೀಡಿ ನನ್ನ ಅಭ್ಯಂತರವಿಲ್ಲ ಎಂದು ಡಿಸಿಎಂ ಪರಮೇಶ್ವರ್ ಅವರ ಮೂಲಕ ಸಿಎಂಗೆ ಸಂದೇಶ ರವಾನಿಸಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್‍ನ ಪವರ್ ಲೆಸ್, ಪವರ್ ಫುಲ್ ನಾಯಕರಿಬ್ಬರ ನಡುವೆ ಮುಸುಕಿನ ಗುದ್ದಾಟ!
ಚುನಾವಣೆ ಬಳಿಕ ಮೈತ್ರಿ ಸರ್ಕಾರ ರಚನೆಯಾಗಿದ್ದು, ಸಿದ್ದರಾಮಯ್ಯ ಮತ್ತು ಜಿ.ಟಿ.ದೇವೇಗೌಡರು ಮುಖಾಮುಖಿಯಾದ್ರೂ ಒಬ್ಬರಿಗೊಬ್ಬರು ಮಾತಾಡಿಲ್ಲ. ಈ ಎಲ್ಲ ಬೆಳವಣಿಗೆಗಳನ್ನು ಗಮನಿಸಿದರೆ ಸಿದ್ದರಾಮಯ್ಯ ಅವರು ತಮ್ಮ ಸೋಲಿಗೆ ಜಿ.ಟಿ ದೇವೇಗೌಡರ ವಿರುದ್ಧ ಸೇಡು ತೀರಿಸಿಕೊಳ್ಳಲು ಮುಂದಾದ್ರ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಇತ್ತ ಮಾಜಿ ಸಿಎಂ ರವಾನಿಸಿರುವ ಸಂದೇಶಕ್ಕೆ ಕುಮಾರಸ್ವಾಮಿ ಮಣಿಯುತ್ತಾರಾ ಅಥವಾ ಜಿಟಿಡಿ ಅವರನ್ನೇ ಮೈಸೂರು ಜಿಲ್ಲಾ ಉಸ್ತುವಾರಿ ನಾಯಕರನ್ನಾಗಿ ಮಾಡ್ತಾರಾ ಎಂಬುದು ಕೆಲವೇ ದಿನಗಳಲ್ಲಿ ಸ್ಪಷ್ಟವಾಗಲಿದೆ.