ಮಂಗಳೂರು: ಇಲ್ಲಿನ ಉತ್ತರ ಕ್ಷೇತ್ರದ ಮಾಜಿ ಕಾಂಗ್ರೆಸ್ (Congress) ಶಾಸಕ ಮೊಯಿದ್ದೀನ್ ಬಾವ (Moideen Bava) ಅವರ ಸಹೋದರ ನಾಪತ್ತೆಯಾಗಿದ್ದಾರೆ. ಬಾವಾ ತಮ್ಮ 52 ವರ್ಷದ ಮುಮ್ತಾಜ್ ಅಲಿ ಭಾನುವಾರ (ಅ.6) ಬೆಳಗ್ಗೆ ದಿಢೀರ್ ನಾಪತ್ತೆಯಾಗಿದ್ದಾರೆ. ಕೂಳೂರಿನ ಸೇತುವೆ ಬಳಿ ಅಪಘಾತ ನಡೆದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದೆ. ಇದು ಹಲವು ಅನುಮಾಗಳನ್ನು ಹುಟ್ಟುಹಾಕಿದೆ.
Advertisement
ಮುಮ್ತಾಜ್ ಅಲಿ ಫಿಶ್‌ಮಿಲ್ (Mumtaz Ali), ಕಾಲೇಜು ಸೇರಿದಂತೆ ಹಲವು ಉದ್ಯಮ ನಡೆಸಿಕೊಂಡಿದ್ದರು. ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದ ಮುಮ್ತಾಜ್ ಅಲಿ ನಿನ್ನೆ ರಾತ್ರಿ ಮನೆಯವರೊಂದಿಗೆ ಮುನಿಸಿಕೊಂಡು ಮಾತುಕತೆ ನಡೆಸಿದ್ರು. ಭಾನುವಾರ ಬೆಳಗ್ಗಿನ ಜಾವ 3 ಗಂಟೆಗೆ ಯಾರಿಗೂ ತಿಳಿಯದಂತೆ ತನ್ನ ಬಿಎಂಡಬ್ಲ್ಯೂ ಕಾರನ್ನು (BMW Car) ಚಲಾಯಿಸಿಕೊಂಡು ಕದ್ರಿಯ ತನ್ನ ಮನೆಯಿಂದ ಪಣಂಬೂರು ಬಳಿ ಬಂದಿದ್ದಾರೆ. ಅಲ್ಲಿಂದ ವೇಗವಾಗಿ ಕೂಳೂರು ಹೈವೆಯಲ್ಲಿ ಬರುತ್ತಿದ್ದು ಖಾಸಗಿ ಬಸ್ಸೊಂದಕ್ಕೆ ಡಿಕ್ಕಿ ಹೊಡೆದುಕೊಂಡು ಬಂದಿದ್ದಾರೆ.
Advertisement
Advertisement
ಬಳಿಕ ಕೂಳೂರು ಸೇತುವೆಯ ಮಧ್ಯದಲ್ಲಿ ಕಾರನ್ನು ನಿಲ್ಲಿಸಿ ನಾಪತ್ತೆಯಾಗಿದ್ದಾರೆ. ಹೀಗಾಗಿ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ಶಂಕಿಸಲಾಗಿದೆ.
Advertisement
ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ನಿಂದ ಶೋಧ:
ಮುಮ್ತಾಜ್ ಅಲಿಗಾಗಿ ಫಲ್ಗುಣಿ ನದಿಯಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡ ಸೇರಿದಂತೆ ಈಜುತಜ್ಞ ಈಶ್ವರ್ ಮಲ್ಪೆ ತಂಡ ಪತ್ತೆ ಕಾರ್ಯ ಮುಂದುವರಿಸಿದ್ದಾರೆ. ಘಟನೆ ಬಳಿಕ ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ರು. ಮೊಯಿದ್ದೀನ್ ಬಾವ ನಾಪತ್ತೆಯಾದ ಸಹೋದರನ ನೆನದು ಕಣ್ಣೀರು ಹಾಕಿದರು.
ನದಿಯ ಆಳ ಹೆಚ್ಚಾಗಿರೋದ್ರಿಂದ ನೀರಿನಡಿಲ್ಲಿ ಕತ್ತಲು ಆವರಿಸಿ ಕಾರ್ಯಾಚರಣೆಗೆ ತೊಡಕಾಗಿದೆ. ಇತ್ತ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಾಪತ್ತೆ ಹಿಂದೆ ಮಹಿಳೆಯ ಕೈವಾಡ ಶಂಕೆ? ಬ್ಲ್ಯಾಕ್‌ಮೇಲ್‌ಗೆ ಬಲಿಯಾದ್ರಾ..?
ಮುಮ್ತಾಜ್ ಅಲಿ ನಾಪತ್ತೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮುಮ್ತಾಜ್ ಅಲಿ ನಾಪತ್ತೆ ಹಿಂದೆ ಮಹಿಳೆಯ ಕೈವಾಡ ಇದ್ಯಾ ಅನ್ನೋ ಅನುಮಾನವೂ ವ್ಯಕ್ತವಾಗಿದೆ. ಮಹಿಳೆಯ ಬ್ಲ್ಯಾಕ್‌ಮೇಲ್‌ಗೆ ಬಲಿಯಾದ್ರಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಆ ಮಹಿಳೆಗೆ ಇನ್ನು ಕೆಲ ಪುರುಷರು ಸಹಾಯ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮರ್ಯಾದೆಗೆ ಅಂಜಿ ನಾಪತ್ತೆಯಾದ್ರಾ ಮುಮ್ತಾಜ್ ಅಲಿ ಅನ್ನೊ ಅನುಮಾನ ಮೂಡಿದೆ. ಪೊಲೀಸರಿಂದ ತನಿಖೆ ಮುಂದುವರಿದಿದೆ.