– ಪೊಲೀಸರ ತನಿಖೆ ಮತ್ತಷ್ಟು ಚುರುಕು
ರಾಮನಗರ: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಫೈರಿಂಗ್ (Ricky Rai Shootout), ಸಾವಿನಿಂದ ಜಸ್ಟ್ ಮಿಸ್ ಆಗಿದ್ದಾರೆ.. ರಿಕ್ಕಿ ರೈ ಹತ್ಯೆಗೆ ಯತ್ನ ಪ್ರಕರಣ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದು, ಯಾವ ಕಾರಣಕ್ಕೆ ಗುಂಡು ಹಾರಿಸಲಾಯ್ತು ಅನ್ನೋದು ಇನ್ನೂ ನಿಗೂಢವಾಗಿದೆ. ಮೇಲ್ನೊಟಕ್ಕೆ ಕುಟುಂಬದ ಆಸ್ತಿ ವಿಚಾರಕ್ಕೆ ಕೊಲೆ ಯತ್ನ ನಡೆದಿದೆ ಎಂಬ ಬಗ್ಗೆ ಚರ್ಚೆ ಆಗ್ತಿದೆ. ಅಲ್ಲದೇ, ಹತ್ಯೆ ಯತ್ನದ ಹಿಂದೆ ಭೂಗತ ಲೋಕದ ಕೈವಾಡದ ಶಂಕೆ ಕೂಡ ವ್ಯಕ್ತವಾಗ್ತಿದೆ.
ರಿಕ್ಕಿ ರೈ ಮೇಲಿನ ಅಟ್ಯಾಕ್ ಸಾಕಷ್ಟು ಸಂಚಲನ ಮೂಡಿಸಿದೆ. ಭೂಗತ ಲೋಕದ ಡಾನ್ ಆಗಿ ಮೆರೆದಿದ್ದ ಮುತ್ತಪ್ಪ ರೈ ಪುತ್ರನಿಗೆ ಸ್ಕೆಚ್ ಹಾಕಿದ್ದು ಯಾರು? ಯಾವ ಕಾರಣಕ್ಕಾಗಿ ಈ ಕೊಲೆ ಯತ್ನ ನಡೆದಿದೆ? ಎಂಬುದರ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ಯವಾಗ್ತಿವೆ. ಒಂದು ಕಾಲದಲ್ಲಿ ಮುತ್ತಪ್ಪ ರೈ ಆಪ್ತನಾಗಿದ್ದ ದಕ್ಷಿಣ ಕನ್ನಡ ಮೂಲದ ರಾಕೇಶ್ ಮಲ್ಲಿ, ಮುತ್ತಪ್ಪ ರೈ 2ನೇ ಪತ್ನಿ ಅನುರಾಧ, ನಿತೇಶ್ ಎಸ್ಟೇಟ್‌ನ ಮಾಲೀಕ ನಿತೇಶ್ ಶೆಟ್ಟಿ ಹಾಗೂ ವೈದ್ಯನಾಥನ್ ಎಂಬುವವರ ವಿರುದ್ಧ ಬಿಡದಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಡಾನ್ ಮುತ್ತಪ್ಪ ರೈ ಆಸ್ತಿ ಎಷ್ಟಿದೆ? – ವಿವಾದ ಹುಟ್ಟಿಕೊಂಡಿದ್ದು ಯಾವಾಗ?
ತಂದೆ ಮುತ್ತಪ್ಪ ರೈ ಗಳಿಸಿದ್ದ ಆಸ್ತಿಗಳ ಜೊತೆಗೆ ರಿಯಲ್ ಎಸ್ಟೇಟ್ ವ್ಯವಹಾರವನ್ನು ರಿಕ್ಕಿ ನೋಡಿಕೊಳ್ತಿದ್ರು. ಪ್ರಕರಣವೊಂದರ ವ್ಯಾಜ್ಯ ಹಿನ್ನೆಲೆ ಕೋರ್ಟ್‌ಗೆ ಹಾಜರಾಗುವ ಸಲುವಾಗಿ ಕಳೆದೆರಡು ದಿನಗಳ ಹಿಂದೆ ರಿಕ್ಕಿ ರಷ್ಯಾದಿಂದ ವಾಪಸ್ ಬಂದಿದ್ದ, ಬಿಡದಿ ನಿವಾಸಕ್ಕೆ ಬಂದಿದ್ದ ರಿಕ್ಕಿ, ಬೆಂಗಳೂರಿಗೆ ಹೋಗುವಾಗ ಗುಂಡಿನ ದಾಳಿ ನಡೆದಿದೆ. ತಂದೆ ಸಾವಿನ ಬಳಿಕ ಮಲತಾಯಿ ಅನುರಾಧ ಜೊತೆ ಆಸ್ತಿ ವ್ಯಾಜ್ಯ ಹಾಗೂ ತಂದೆಯ ವ್ಯವಹಾರ ಪಾಲುದಾರರಾಗಿದ್ದವರ ಜೊತೆ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಬಂಧಿಸಿದಂತೆ ರಿಕ್ಕಿ ಕೋರ್ಟ್‌ನಲ್ಲಿ ವ್ಯಾಜ್ಯ ನಡೆಸುತ್ತಿದ್ದಾರೆ. ಈ ವಿಚಾರದಲ್ಲಿನ ದ್ವೇಷಕ್ಕೆ ಸುಫಾರಿ ಕಿಲ್ಲರ್ ಮೂಲಕ ರಿಕ್ಕಿ ಹತ್ಯೆಗೆ ಸ್ಕೆಚ್ ಹಾಕಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಮೈಸೂರು | ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್‌ನಿಂದ ಮಹಿಳೆಗೆ 1.41 ಕೋಟಿ ವಂಚನೆ ಆರೋಪ
ಅಲ್ಲದೇ ರಿಕ್ಕಿ ಕೊಲೆ ಯತ್ನದ ಹಿಂದೆ ಅಂಡರ್ ವರ್ಲ್ಡ್ ಕೈವಾಡ ಇದ್ಯಾ ಎಂಬುದರ ಬಗ್ಗೆಯೂ ಪೊಲೀಸರಿಗೆ ಅನುಮಾನ ಹುಟ್ಟಿಸಿದೆ. ಮುತ್ತಪ್ಪ ರೈ ಮೇಲಿನ ಸೇಡಿಗೆ ರಿಕ್ಕಿ ಮೇಲೆ ಅಟ್ಯಾಕ್ ಮಾಡಿಸಲಾಯ್ತಾ ಎನ್ನುವ ಆಯಾಮದಲ್ಲೂ ತನಿಖೆ ನಡೆಯುತ್ತಿದೆ. ಅದರಲ್ಲೂ ಸಿಸಿಬಿ ಪೊಲೀಸರು ಈ ಪ್ರಕರಣದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಉನ್ನತ ತನಿಖಾ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರನ ಮೇಲೆ ಫೈರಿಂಗ್ – ಕೂದಲೆಳೆ ಅಂತರದಲ್ಲಿ ಪಾರು
ಇನ್ನೂ ಪ್ರಕರಣದ ತನಿಖೆ ಚುರುಕುಗೊಳಿಸಿರೋ ಪೊಲೀಸರು, ಕೃತ್ಯ ನಡೆದ ಸ್ಥಳದಲ್ಲಿ ಶ್ವಾನದಳ ಹಾಗೂ ಎಫ್‌ಎಸ್‌ಎಲ್ ಟೀಂ ಪರಿಶೀಲನೆ ನಡೆಸಿದ್ದಾರೆ. ಹಂತಕರು ಗುಂಡು ಹಾರಿಸಿರುವ ಕಾಂಪೌಂಡ್ ಬಳಿ ಬಂದೂಕಿನ ಎಂಟಿ ಸ್ಟಾಕ್ಸ್ ಹಾಗೂ ಸಿಮ್ ಕಾರ್ಡ್ ಇಲ್ಲದ ಬೇಸಿಕ್ ಮೊಬೈಲ್ ಸಿಕ್ಕಿದೆ. ಕಾರಿನೊಳಗೆ ಇದ್ದ ಗುಂಡನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.