ಕ್ರೈಸ್ಟ್ಚರ್ಚ್: ನ್ಯೂಜಿಲೆಂಡ್ (New Zealand) ವಿರುದ್ಧ ನಡೆಯುತ್ತಿರುವ ಟಿ20 ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಗಾಯಗೊಂಡಿದ್ದ ಭಾರತದ ಸ್ಟಾರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ (Ishan Kishan) ಎರಡನೇ ಟಿ20 ಪಂದ್ಯದಿಂದ ಹೊರಬಿದ್ದಿದ್ದಾರೆ.
ಕ್ರೈಸ್ಟ್ಚರ್ಚ್ನಲ್ಲಿ ನಡೆದ ಮೊದಲ ಪಂದ್ಯದ ವೇಳೆ ಇಶಾನ್ ಕಿಶನ್ ಬಲ ತೊಡೆಯ ಸ್ನಾಯುವಿನಲ್ಲಿ ಸೆಳೆತ ಉಂಟಾಗಿತ್ತು. ಇದು ಭಾರತ ತಂಡಕ್ಕೆ ದೊಡ್ಡ ಆಘಾತ ತಂದಿದೆ.ಇದನ್ನೂ ಓದಿ: ಟೀಂ ಇಂಡಿಯಾಕ್ಕೆ ದಾಖಲೆಯ ಜಯ – ಕಿವೀಸ್ ನೆಲದಲ್ಲಿ ಇತಿಹಾಸ ಸೃಷ್ಟಿ
ಈ ಸಂಬಂಧ ಬಿಸಿಸಿಐ ತನ್ನ ಅಧಿಕೃತ ಖಾತೆಯ ಮೂಲಕ ಹಂಚಿಕೊಂಡಿದ್ದು, ಇಶಾನ್ ಕಿಶನ್ ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಟಿ20 ಕ್ರಿಕೆಟ್ ಸರಣಿಯ ಎರಡನೇ ಪಂದ್ಯದಿಂದ ಹೊರಗುಳಿದಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡವು ಅವರ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದೆ ಎಂದು ತಿಳಿಸಿದೆ. ಆದರೆ ಇಶಾನ್ ಕಿಶನ್ ಗಾಯದಿಂದ ಚೇತರಿಕೊಂಡು ಮತ್ತೆ ಯಾವಾಗ ತಂಡಕ್ಕೆ ಸೇರಿಕೊಳ್ಳುತ್ತಾರೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ.
𝗨𝗽𝗱𝗮𝘁𝗲:
Ishan Kishan is ruled out of the second T20I against New Zealand due to a low grade right adductor strain, which he sustained during the first T20I of the series.
The BCCI Medical Team is monitoring his progress.
#TeamIndia | #NZvIND https://t.co/QbZpuVh1hQ
— BCCI (@BCCI) October 23, 2026
ಇನ್ನೂ ಅಕ್ಟೋಬರ್ 22ರಂದು ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಭಾರತ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ನ್ಯೂಜಿಲೆಂಡ್ ತಂಡವು ನಿಗದಿತ ಓವರ್ಗಳಲ್ಲಿ 225 ರನ್ಗಳ ಬೃಹತ್ ಮೊತ್ತೆವನ್ನು ಕಲೆಹಾಕಿತು. 226 ರನ್ಗಳ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ಸಂಜು ಸ್ಯಾಮ್ಸನ್ ನೆರವಾಗಿ ನಿಂತು 67 ರನ್ ಗಳಿಸಿದರು. ಕೊನೆಗೆ ಭಾರತ ತಂಡವು 19.4 ಓವರ್ಗಳಲ್ಲಿ ಗುರಿಯನ್ನು ತಲುಪುವ ಮೂಲಕ 4 ವಿಕೆಟ್ಗಳ ರೋಚಕ ಜಯ ಸಾಧಿಸಿ, ಸರಣಿಯಲ್ಲಿ ಮುನ್ನಡೆ ಕಾಯ್ದುಕೊಂಡಿತು.ಇದನ್ನೂ ಓದಿ: 29 ರನ್ ಹೊಡೆದ್ರೂ ಹಿಟ್ಮ್ಯಾನ್ ವಿಶ್ವದಾಖಲೆ ಮುರಿದ ಅಭಿಷೇಕ್ ಶರ್ಮಾ
