ಬೀದರ್: ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು. ಇದನ್ನು ನಿನ್ನೆ ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯುವ ಮೂಲಕ ಬಿಜೆಪಿ ಸರ್ಕಾರವೇ ಸಾಬೀತು ಮಾಡಿದೆ ಎಂದು ಆರೋಪಿಸಿದರು.
Advertisement
Advertisement
ನಾವು ರಾಜಕೀಯ ಉದ್ದೇಶದಿಂದಲೇ ವೀಕೆಂಡ್ ಕರ್ಫ್ಯೂ ಹಾಕಿದ್ದು ಎಂದು ಜನರ ಮುಂದೆ ಸರ್ಕಾರವೇ ಸಾಬೀತು ಮಾಡಿದ್ದಾರೆ. ಬಿಜೆಪಿ ಸರ್ಕಾರ ಪಕ್ಷಪಾತ ಮಾಡುತ್ತಿದೆ ಎಂದು ಕಿಡಿಕಾರಿದ ಅವರು, ಸಾವಿರಾರು ಜನರನ್ನು ಸೇರಿಸಿ ಕೇಂದ್ರ ಸಚಿವ ಭಗವಂತ್ ಖೂಬಾ ಜನಾಶೀರ್ವಾದ ಯಾತ್ರೆಯಲ್ಲಿ ಮಾಡಿದ್ದರು. ಅಲ್ಲಿ ಅವರನ್ನು ಅಕ್ರಮ ಬಂದೂಕಿನಿಂದ ಸ್ವಾಗತ ಮಾಡಿದರು. ಈವರೆಗೂ ಪೊಲೀಸರು ಖೂಬಾ ಮೇಲೆ ಎಫ್‌ಐಆರ್ ದಾಖಲೆ ಮಾಡಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ ಯಾತ್ರೆ: ಎಸ್.ಆರ್.ಹಿರೇಮಠ
Advertisement
Advertisement
ಮೇಕೆದಾಟು ಪಾದಯಾತ್ರೆ ವಿಚಾರಕ್ಕೆ ನನ್ನ ಮೇಲೆ ಹಾಗೂ ನಮ್ಮ ನಾಯಕರಾದ ಡಿಕೆಶಿ, ಸಿದ್ದರಾಮಯ್ಯ ಮೇಲೆ ಮೂರು ಕೇಸ್‌ಗಳನ್ನು ದಾಖಲಿಸಿದ್ದಾರೆ ಎಂದ ಅವರು, ಕೊರೊನಾ ಕೇಸ್ ಕಡಿಮೆಯಾದ ಮೇಲೆ ಮತ್ತೆ ರಾಮನಗರದಿಂದ ನಮ್ಮ ಪಾದಯಾತ್ರೆ ಮುಂದುವರೆಸುತ್ತೆವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಚಾಮುಂಡೇಶ್ವರಿಯಿಂದ ಓಡಿಸಲಾಗಿದೆ, ಬಾದಾಮಿಯಿಂದ ಓಡಿಸುವುದು ಬಾಕಿ ಇದೆ: ಸಿದ್ದು ವಿರುದ್ಧ ಹೆಚ್‌ಡಿಕೆ ವಾಗ್ದಾಳಿ
ಪಂಚ ರಾಜ್ಯ ಚುನಾವಣೆಯ ಸಮೀಕ್ಷೆಗಳೆಲ್ಲಾ ಸುಳ್ಳಾಗಲಿದ್ದು, ಬಿಜೆಪಿ ಪಂಚರಾಜ್ಯ ಚುನಾವಣೆಯಲ್ಲಿ ಧೂಳಿ ಪಟವಾಗುತ್ತದೆ ಎಂದ ಅವರು ಬಿಜೆಪಿ ನಾಯಕರು ಹಾಗೂ ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.