ಸಂಧಾನ ಯಶಸ್ವಿ ಎಂದ ಈಶ್ವರ ಖಂಡ್ರೆ

Public TV
1 Min Read
ishwara kandre

ಬೆಳಗಾವಿ: ಪಿಎಲ್‍ಡಿ ಬ್ಯಾಂಕ್ ಚುನಾವಣೆಯ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಸ್ಥಳೀಯ ನಾಯಕರ ನಡುವಿನ ಗೊಂದಲಕ್ಕೆ ವರಷ್ಠರ ಸಲಹೆ ಮೇರೆಗೆ ತೆರೆ ಎಳೆಯಲಾಗಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಈಶ್ವರ ಖಂಡ್ರೆ ಹೇಳಿದರು.

vlcsnap 2018 09 07 15h51m56s240

ಪ್ರವಾಸಿ ಮಂದಿರದಲ್ಲಿ ಪಿಎಲ್‍ಡಿ ಬ್ಯಾಂಕಿನ ಚುನಾವಣಾ ಫಲಿತಾಂಶಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ, ಶಾಸಕರಾದ ಸತೀಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಜತೆಗೆ ಚರ್ಚಿಸಿ ಒಮ್ಮತ ನಿರ್ಣಯ ಕೈಗೊಳ್ಳಲಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಮಹಾದೇವ ಪಾಟೀಲ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಾಪುಸಾಹೇಬ ನಾಮಪತ್ರ ಸಲ್ಲಿಸಿದ್ದು, ಇವರೇ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ಈ ಇಬ್ಬರ ಆಯ್ಕೆಗೆ ಸ್ಥಳೀಯ ನಾಯಕರ ಸಹಮತ ಇದೆ. ವರಿಷ್ಠರ ಸೂಚನೆ ಮೇರೆಗೆ ಈ ಆಯ್ಕೆ ನಡೆದಿದೆ. ಶಾಸಕರಾದ ಸತೀಶ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಜತೆಗೆ ಸೌಹಾರ್ದಯುತವಾಗಿ ಚರ್ಚಿಸಿ ಸಮಸ್ಯೆ ಬಗೆಹರಿಸಿದ್ದೇನೆ. ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆ ಶಾಂತಿಯುತವಾಗಿ ಬಗೆಹರಿದಿದೆ. ಇದರಿಂದ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ಸಮ್ಮಿಶ್ರ ಸರ್ಕಾರ ಸುಭದ್ರವಾಗಿ ಇರಲಿದೆ ಎಂದರು.

vlcsnap 2018 09 07 15h49m28s113

ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ಬೆಳಗಾವಿಯ ಪಿಎಲ್‍ಡಿ ಬ್ಯಾಂಕ್ ಚುನಾವಣೆಯಲ್ಲಿ ಆದ ಬೆಳವಣಿಗೆಗೆ ಸಂವಹನ ಕೊರತೆಯೇ ಮುಖ್ಯ ಕಾರಣ. ನಮ್ಮ ಹಾಗೂ ಗ್ರಾಮೀಣ ಕ್ಷೇತ್ರದ ಶಾಸಕರ ನಡುವೆ ಸಂವಹನ ಕೊರತೆ ಉಂಟಾಗಿತ್ತು. ಇದೀಗ ಕೆಪಿಸಿಸಿ ಕಾರ್ಯದರ್ಶಿ ಅವರು ನಮ್ಮ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಿದ್ದಾರೆ. ನಮ್ಮ ವಾದ ಕೂಡ ಅವಿರೋಧ ಆಯ್ಕೆ ನಡೆಯಲಿ, ಚುನಾವಣೆ ಬೇಡ ಎಂದಾಗಿತ್ತು. ಹೀಗಾಗಿ ಒಮ್ಮತದ ಅಭಿಪ್ರಾಯದ ಮೇರೆಗೆ ಅವಿರೋಧ ಆಯ್ಕೆ ನಡೆದಿದೆ. ನಮ್ಮ ಭಾವನೆ, ವರ್ಚಸ್ಸಿಗೆ ಧಕ್ಕೆ ಆಗಿಲ್ಲ ಎಂದು ಹೇಳಿದರು.

vlcsnap 2018 09 07 15h57m18s589

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾತನಾಡಿ, ನಾನು ವೈಯಕ್ತಿಕವಾಗಿ ಯಾವುದೇ ಹೇಳಿಕೆ ನೀಡುವುದಿಲ್ಲ. ಒಮ್ಮತದ ಆಯ್ಕೆಗೆ ನಮ್ಮ ಸಹಮತ ಇದೆ. ನಾನು ತಪ್ಪು ಮಾಡಿದ್ದರೆ ಭಗವಂತ ನೋಡಿಕೊಳ್ಳುತ್ತಾನೆ ಎಂದು ಪರೋಕ್ಷವಾಗಿ ಜಾರಕಿಹೊಳಿ ಕುಟುಂಬಕ್ಕೆ ತಿರುಗೇಟು ನೀಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *