ಹಾಸನ: ಕೋಮುವಾದಿಗಳನ್ನು ದೂರವಿಡಲು ಅನಿವಾರ್ಯವಾಗಿ ಪಕ್ಷದ ವರಿಷ್ಠರು ಮೈತ್ರಿ ಸರ್ಕಾರ ರಚನೆಗೆ ಒಪ್ಪಿಕೊಂಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಶೇಕಡ 70 ರಷ್ಟು ನಮ್ಮ ಪಾಲುದಾರಿಕೆ ಇದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಯಲು ಶೌಚ ಮುಕ್ತ ಯೋಜನೆಯನ್ನು ಜಾರಿಗೆ ತಂದು, ಅದನ್ನು ಯಶಸ್ವಿಗೊಳಿಸಲು ಕೇಂದ್ರ ಯುಪಿಎ ಸರ್ಕಾರ ಶ್ರಮಿಸಿತ್ತು. ಆದರೆ ಈಗ ಬಿಜೆಪಿಯವರು ಸ್ವಚ್ಛ ಭಾರತವೆಂದು ಹೇಳಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವ್ಯಂಗ್ಯವಾಡಿದರು.
Advertisement
ಕಾಂಗ್ರೆಸ್ಸಿಗೆ ಬಹುಮತ ನೀಡಲಿಲ್ಲ ಅಂತಾ ರಾಜ್ಯದ ಜನರು ಪರಿತಪಿಸುತ್ತಿದ್ದಾರೆ. ನಮ್ಮ ಕಾರ್ಯಕರ್ತರು ಹೆದರುವ ಅಗತ್ಯವಿಲ್ಲ. ಮುಂದೆ ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ರಾಜಕೀಯ ದಿಕ್ಸೂಚಿ ಆಗಲಿದೆ. ಕಳೆದ ಬಾರಿ ನಮ್ಮ ಪಕ್ಷಕ್ಕೆ ಬಹುಮತ ಸಿಕ್ಕಿತ್ತು. ಆದರೆ ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷಗಳು ಅಪಪ್ರಚಾರ ಮಾಡಿ, ಜನತೆಯ ದಾರಿ ತಪ್ಪಿಸಿದ್ದವು. ಹೀಗಾಗಿ ನಮ್ಮ ಫಲಿತಾಂಶದಲ್ಲಿ ಕೊಂಚ ಏರುಪೇರಾಗಿದೆ ಎಂದು ದೂರಿದರು.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv