ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿಯಂದು ಇಸ್ಕಾನ್ ದೇವಾಸ್ಥಾನಕ್ಕೆ ಸಾರ್ವಜನಕರಿಗೆ ಪ್ರವೇಶ ಇರುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ.
Advertisement
ಪ್ರಕಟಣೆಯಲ್ಲಿ ಏನಿದೆ?
Advertisement
ಇಸ್ಕಾನ್ ದೇವಾಸ್ಥಾನವು ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಬಹಳ ಜನ ಭಕ್ತರನ್ನು ಆಕರ್ಷಿಸುತ್ತದೆ. ಈ ವರ್ಷ ಇಸ್ಕಾನ್ ಬೆಂಗಳೂರು ದೇವಸ್ಥಾನವು ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಗಸ್ಟ್ 29 ಮತ್ತು 30, 2021 ರಂದು ಆಚರಿಸುತ್ತಿದೆ. ಸಾರ್ವಜನಿಕರ ಸುರಕ್ಷತೆಯನ್ನು ಮತ್ತು ಸರ್ಕಾರಿ ನಿಯಮಗಳನ್ನು ಪರಿಗಣಿಸಿ ಮತ್ತು ಜವಾಬ್ದಾರಿಯುತ ಸಂಸ್ಥೆಯಾಗಿ, ಇಸ್ಕಾನ್ ಆಡಳಿತ ಮಂದಿರವನ್ನು ಈ ಎರಡೂ ದಿನ ಸಾರ್ವಜನಿಕರಿಗಾಗಿ ಮುಚ್ಚಿರುತ್ತದೆ ಎಂದು ನಿರ್ಧರಿಸಿದೆ. ಇದನ್ನೂ ಓದಿ: ಡೆಹ್ರಾಡೂನ್-ಹೃಷಿಕೇಶ್ ಹೆದ್ದಾರಿಯಲ್ಲಿ ಮುರಿದು ಬಿದ್ದ ಸೇತುವೆ- ಜನಜೀವನ ಅಸ್ತವ್ಯಸ್ತ
Advertisement
Advertisement
ಈ ಅನಾನುಕೂಲಕ್ಕಾಗಿ ವಿಷಾದ ವ್ಯಕ್ತಪಡಿಸಲಾಗಿದೆ. ಹಬ್ಬದ ವೇಳಾಪಟ್ಟಿಯ ಪ್ರಕಾರ ಎಲ್ಲ ಸೇವೆಗಳನ್ನೂ ದೇವರಿಗೆ ಅರ್ಪಿಸಲಾಗುವುದು. ಭಕ್ತರು ಆನ್ ಲೈನ್‍ನಲ್ಲಿ ಭಾಗವಹಿಸಬೇಕೆಂದು ಕೋರಿದೆ. ಇಸ್ಕಾನ್ ಬೆಂಗಳೂರಿನ ಯೂಟ್ಯೂಬ್ ಚಾನೆಲ್ ಮತ್ತು ಇತರ ಸಾಮಾಜಿಕ ಜಾಲತಾಣಗಳನ್ನು ಭೇಟಿಮಾಡಬಹುದಾಗಿದೆ. www.iskconbangalore.org