ಇಸ್ಲಾಮಾಬಾದ್: ಮಹಿಳಾ ನ್ಯಾಯಾಧೀಶರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ವಿರುದ್ಧ ಇಸ್ಲಾಮಾಬಾದ್‌ನ ಮ್ಯಾಜಿಸ್ಟ್ರೇಟ್ ಬಂಧನ ವಾರಂಟ್ ಹೊರಡಿಸಿದ್ದಾರೆ.
ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಝೆಬಾ ಚೌಧರಿ ಅವರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಇಮ್ರಾನ್ ಖಾನ್ ವಿರುದ್ಧ ಆಗಸ್ಟ್ 20 ರಂದು ದಾಖಲಾದ ಪ್ರಕರಣದಲ್ಲಿ ಇಸ್ಲಾಮಾಬಾದ್‌ನ ಮರ್ಗಲ್ಲಾ ಪೊಲೀಸ್ ಠಾಣೆಯ ಮ್ಯಾಜಿಸ್ಟ್ರೇಟ್ ವಾರಂಟ್ ಹೊರಡಿಸಿದ್ದಾರೆ. ಇದನ್ನೂ ಓದಿ: ಸೂಕ್ತ ಒಳಉಡುಪು ಧರಿಸಲೇಬೇಕು – ಪಾಕ್ ವಿಮಾನಯಾನ ಸಂಸ್ಥೆ ಆದೇಶ
Advertisement
Advertisement
ಇಮ್ರಾನ್ ಖಾನ್ ಅಫಿಡವಿಟ್ ಸಲ್ಲಿಸಿದ ಕೆಲವೇ ಗಂಟೆಗಳಲ್ಲಿ ಈ ಬಂಧನ ವಾರಂಟ್ ಬಂದಿದೆ. ಯಾವುದೇ ನ್ಯಾಯಾಲಯ ಮತ್ತು ನ್ಯಾಯಾಂಗದ ಅದರಲ್ಲೂ ಕೆಳಮಟ್ಟದ ನ್ಯಾಯಾಂಗದ ಘನತೆಗೆ ಧಕ್ಕೆ ತರುವಂತಹ ಯಾವುದೇ ಕಾರ್ಯವನ್ನು ಭವಿಷ್ಯದಲ್ಲಿ ಮಾಡುವುದಿಲ್ಲ ಎಂದು ಇಮ್ರಾನ್ ಖಾನ್ ನ್ಯಾಯಾಲಯಕ್ಕೆ ಭರವಸೆ ನೀಡಿದ್ದಾರೆ ಎಂದು ಅಫಿಡವಿಟ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ವರದಿಯಾಗಿದೆ.
Advertisement
Advertisement
ಆ.20 ರಂದು ಇಸ್ಲಾಮಾಬಾದ್‌ನಲ್ಲಿ ನಡೆದ ರ‍್ಯಾಲಿಯಲ್ಲಿ, ದೇಶದ್ರೋಹದ ಆರೋಪದ ಮೇಲೆ ತನ್ನ ಸಹಾಯಕ ಶಹಬಾಜ್ ಗಿಲ್‌ರನ್ನು ಬಂಧಿಸಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ಅವರು, ಈ ಬಗ್ಗೆ ಉನ್ನತ ಪೊಲೀಸ್ ಅಧಿಕಾರಿಗಳು, ಚುನಾವಣಾ ಆಯೋಗ ಮತ್ತು ರಾಜಕೀಯ ವಿರೋಧಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಗುಂಡಿನ ದಾಳಿ -ಚೀನಾ ಪ್ರಜೆ ಬಲಿ