ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಮರ್ಯಾದಾ ಹತ್ಯೆಯಾಗಿದ್ದು, ಪಾಸ್ತೋ ಗಾಯಕಿಯೊಬ್ಬರನ್ನು ಆಕೆಯ ಸಹೋದರನೇ ಕೊಲೆ ಮಾಡಿರುವ ಘಟನೆ ಉತ್ತರ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ನಡೆದಿದೆ.
ಸ್ವಾತ್ ಜಿಲ್ಲೆಯ ಬಾನ್ರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಗಾಯಕಿ ಸನಾಳನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಕುರಿತು ತನಿಖೆ ಕೈಗೊಂಡಿರುವ ಪೊಲೀಸರು, ಸನಾಳನ್ನು ಆಕೆಯ ಸಹೋದರನೇ ಕೊಲೆ ಮಾಡಿದ್ದಾನೆ. ಘಟನೆಯ ನಂತರ ಆತ ತಲೆ ಮರೆಸಿಕೊಂಡಿದ್ದಾನೆ ಎಂದು ತಿಳಿಸಿದ್ದಾರೆ.
Advertisement
Advertisement
ಇದೊಂದು ಮರ್ಯಾದಾ ಹತ್ಯೆ ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಖಚಿತವಾಗಿ ತಿಳಿದು ಬಂದಿಲ್ಲ. ಸದ್ಯಕ್ಕೆ ಪೊಲೀಸರು ಗಾಯಕಿಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆಂದು ಸೈದು ಷರೀಫ್ ಆಸ್ಪತ್ರೆಗೆ ರವಾನಿಸಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
Advertisement
ಉತ್ತರ ಖೈಬರ್ ಪಖ್ತುಂಖ್ವಾ ಪಾಸ್ತೋ ಗಾಯಕರಿಗೆ ಎಂದೂ ಸುರಕ್ಷಿತ ಸ್ಥಳವಾಗಿಲ್ಲ. ಏಕೆಂದರೆ ಅನೇಕ ಮಹಿಳಾ ಗಾಯಕರನ್ನು ಅವರ ಸಂಬಂಧಿಕರೇ ಕೊಲೆ ಮಾಡಿದ್ದಾರೆ. ಮೇ 7, 2019 ರಂದು ಸ್ಥಳೀಯ ಗಾಯಕಿ ಮೀನಾರನ್ನು ಸ್ವಾತ್‍ನಲ್ಲಿ ಕೊಲೆ ಮಾಡಲಾಗಿತ್ತು. ಮೀನಾರನ್ನು ಪತಿಯೇ ಕೊಲೆ ಮಾಡಲಾಗಿದೆ ಎಂದು ವರದಿಯಾಗಿತ್ತು.