ಟೆಲ್ ಅವೀವ್: ಜೆರುಸಲೆಮ್ ಮೇಲೆ ರಾಕೆಟ್ ದಾಳಿ ನಡೆದ ಸಂದರ್ಭದಲ್ಲಿ ಭಯೋತ್ಪಾದಕರು ಎಂದು ತಪ್ಪಾಗಿ ಭಾವಿಸಿ ಮೂವರು ಒತ್ತೆಯಾಳುಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಇಸ್ರೇಲ್ ಸೇನೆ (Israel Army) ತಿಳಿಸಿದೆ.
ಹಮಾಸ್ (Hamas) ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ದಾಳಿ ನಡೆಸಿದ ನಂತರ ಯುದ್ಧ ಪ್ರಾರಂಭವಾಯಿತು. ಇಲ್ಲಿಯವರೆಗೆ ಇಸ್ರೇಲಿ ಅಧಿಕಾರಿಗಳು ಸುಮಾರು 1,200 ಜನರನ್ನು ಹತ್ಯೆ ಮಾಡಿದ್ದಾರೆ. ಅವರ ಪೈಕಿ ಹೆಚ್ಚಿನವರು ನಾಗರಿಕರೇ ಆಗಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಅಮೆರಿಕ ಹಿಂದೂ ಅಧ್ಯಕ್ಷರನ್ನು ಒಪ್ಪಿಕೊಳ್ಳುತ್ತಾ? – ಪ್ರಶ್ನೆಗೆ ಹಿಂದೂ ಧರ್ಮದ ಮೌಲ್ಯ ತಿಳಿಸಿದ ವಿವೇಕ್
- Advertisement 2
- Advertisement 3
ಹಮಾಸ್ ಬಂಡುಕೋರರ ಗುಂಪನ್ನು ನಾಶಮಾಡಲು ಮತ್ತು ಉಗ್ರಗಾಮಿಗಳಿಂದ ಅಪಹರಿಸಲ್ಪಟ್ಟ ಅಂದಾಜು 250 ಒತ್ತೆಯಾಳುಗಳನ್ನು ವಾಪಸ್ ಕರೆತರುವುದಾಗಿ ಪ್ರತಿಜ್ಞೆ ಮಾಡಿದ ಇಸ್ರೇಲ್, ಭಾರಿ ಆಕ್ರಮಣ ನಡೆಸಿದೆ. ಇಸ್ರೇಲ್ ಸೇನೆ ಮುತ್ತಿಗೆ ಹಾಕಿದ ಹೆಚ್ಚಿನ ಪ್ರದೇಶವನ್ನು ನಾಶಮಾಡಿದೆ.
- Advertisement 4
ಯುದ್ಧದಿಂದ ಕನಿಷ್ಠ 18,800 ಜನರು ಹತರಾಗಿದ್ದಾರೆ. ಅವರ ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳು ಎಂದು ಹಮಾಸ್ ಸರ್ಕಾರ ತಿಳಿಸಿದೆ. ಶುಕ್ರವಾರವೂ ಭೀಕರ ದಾಳಿ ಮುಂದುವರಿದಿದ್ದು, ದಕ್ಷಿಣದ ನಗರವಾದ ಖಾನ್ ಯೂನಿಸ್ನಲ್ಲಿ ಇಸ್ರೇಲಿ ಸೈನಿಕರಿದ್ದ ಮನೆಯನ್ನು ಸ್ಫೋಟಿಸಿರುವುದಾಗಿ ಹಮಾಸ್ ಹೇಳಿಕೊಂಡಿದೆ. ಇದನ್ನೂ ಓದಿ: ಹಮಾಸ್ ಉಗ್ರರು ಅವಿತುಕೊಳ್ಳುತ್ತಿದ್ದ ಸುರಂಗಗಳಿಗೆ ಸಮುದ್ರದ ನೀರು ಹರಿಸಿದ ಇಸ್ರೇಲ್
ಇಸ್ರೇಲ್-ಹಮಾಸ್ ಯುದ್ಧ ಪ್ರಾರಂಭವಾದಾಗಿನಿಂದ 60 ಕ್ಕೂ ಹೆಚ್ಚು ಪತ್ರಕರ್ತರು ಮತ್ತು ಮಾಧ್ಯಮ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪತ್ರಕರ್ತರನ್ನು ರಕ್ಷಿಸುವ ಸಮಿತಿ ತಿಳಿಸಿದೆ.