`ಕಾಶ್ಮೀರ್ ಫೈಲ್ಸ್’ (The Kashmir Files) ತೆರೆಕಂಡ ದಿನದಿಂದಲೂ ಸಖತ್ ಸುದ್ದಿಯಲ್ಲಿದೆ. ಇತ್ತೀಚೆಗಷ್ಟೇ ನಡೆದ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಈ ಸಿನಿಮಾ ಸೂಕ್ತವಲ್ಲ ಎಂದು ಭಾಸವಾಯಿತು ಎಂದು ನದಾವ್ ಹೇಳಿಕೆ ನೀಡಿದ್ದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪರ ವಿರೋಧ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಇಸ್ರೇಲ್ ರಾಯಭಾರಿ ನಾರ್ ಗಿಲೋನ್ (naor gilon ನದಾವ್ ತರಾಟೆಗೆ ತೆಗೆದುಕೊಂಡಿದ್ದಾರೆ.
Advertisement
ಗೋವಾದಲ್ಲಿ ನಡೆದ 53ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸೋಮವಾರ (ನವೆಂಬರ್ 28) ಅದ್ದೂರಿಯಾಗಿ ನಡೆದಿತ್ತು. ಮುಕ್ತಾಯ ಸಮಾರಂಭದಲ್ಲಿ ತೀರ್ಪುಗಾರರ ಮುಖ್ಯಸ್ಥರಾಗಿದ್ದ ಇಸ್ರೇಲ್‌ನ ಖ್ಯಾತ ನಿರ್ದೇಶಕ ನದಾವ್ ಲಾಪಿಡ್ ದಿ ಕಾಶ್ಮಿರ್ ಫೈಲ್ಸ್ ಸಿನಿಮಾ ವಿರುದ್ಧ ಅಸಮಾಧಾನ ಹೊರಹಾಕಿದರು. `ಕಾಶ್ಮೀರ ಫೈಲ್ಸ್’ ಸಿನಿಮಾ ವೀಕ್ಷಿಸಿ ತುಂಬಾ ಡಿಸ್ಟರ್ಬ್ ಆಗಿದ್ದೀವಿ. ಇದೊಂದು ಅಶ್ಲೀಲ ಪ್ರಚಾರದ ಸಿನಿಮಾ. ಇಂಥ ಪ್ರತಿಷ್ಠಿತ ಚಲನಚಿತ್ರೋತ್ಸವದ ಕಲಾತ್ಮಕ ಸ್ಪರ್ಧಾ ವಿಭಾಗಕ್ಕೆ ಈ ಸಿನಿಮಾ ಸೂಕ್ತವಲ್ಲ ಎಂದು ಭಾಸವಾಯಿತು ಎಂದು ಹೇಳುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್‌ನಲ್ಲಿ ತಮಿಳು ನಟ ವಿಜಯ್ ಸೇತುಪತಿ
Advertisement
Advertisement
ವಿವಾದದ ಬೆನ್ನಲ್ಲೇ ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನಾರ್ ಗಿಲೋನ್, ನಿರ್ದೇಶಕ ನದಾವ್ ಅವರನ್ನು ತರಾಟೆ ತೆಗೆದುಕೊಂಡಿದ್ದಾರೆ. ಇಂಥ ಹೇಳಿಕೆಗೆ ನಾಚಿಕೆಯಾಗಬೇಕು ಎಂದು ಕಿಡಿಕಾರಿದ್ದಾರೆ.
Advertisement
An open letter to #NadavLapid following his criticism of #KashmirFiles. It’s not in Hebrew because I wanted our Indian brothers and sisters to be able to understand. It is also relatively long so I’ll give you the bottom line first. YOU SHOULD BE ASHAMED. Here’s why: pic.twitter.com/8YpSQGMXIR
— Naor Gilon (@NaorGilon) November 29, 2022
ನಾನು ನದಾವ್ ಹೇಳಿಕೆಗಳನ್ನು ಖಂಡಿಸುತ್ತೇನೆ. ಇದರಲ್ಲಿ ಯಾವುದೇ ಸಮರ್ಥನೆ ಇಲ್ಲ. ಇಲ್ಲಿ ಕಾಶ್ಮೀರ ಸಮಸ್ಯೆಯ ಸೂಕ್ಷ್ಮತೆಯನ್ನು ತೋರಿಸುತ್ತದೆ ಎಂದು ಹೇಳಿದರು. ಭಾರತೀಯ ಸಂಸ್ಕೃತಿಯಲ್ಲಿ ಅತಿಥಿಯನ್ನು ದೇವರಂತೆ ಕಾಣುತ್ತಾರೆ. ಜ್ಯೂರಿ ಮುಖ್ಯಸ್ಥರಾಗಿ ಎಂದು ಭಾರತ ನೀಡಿದ ಆಹ್ವಾನ ಮತ್ತು ನಂಬಿಕೆ, ಗೌರವ, ಆತ್ಮೀಯ ಆತಿಥ್ಯವನ್ನು ದುರುಪಯೋಗ ಪಡಿಸಿಕೊಂಡಿದ್ದೀರಿ ಎಂದು ನದಾವ್ ಅವರನ್ನು ತರಾಟೆ ತೆಗೆದುಕೊಂಡರು ಇಸ್ರೇಲ್ ರಾಯಭಾರಿ ನಾರ್ ಗಿಲೋನ್.