Israel-Iran Conflict | ಇಸ್ರೇಲ್‌ನಲ್ಲಿ ಸಿಲುಕಿದ 18 ಮಂದಿ ಕನ್ನಡಿಗರು

Public TV
1 Min Read
Israel Iran War Kannadigas

ಟೆಲ್ ಅವೀವ್: ಇಸ್ರೇಲ್ (Israel) ಹಾಗೂ ಇರಾನ್ (Iran) ನಡುವೆ ಸಂಘರ್ಷ ತೀವ್ರಗೊಂಡಿದ್ದು, ಅಧ್ಯಯನ ಪ್ರವಾಸಕ್ಕೆಂದು ತೆರಳಿದ್ದ 18 ಮಂದಿ ಕನ್ನಡಿಗರು (Kannadigas) ಇಸ್ರೇಲ್‌ನಲ್ಲಿ ಸಿಲುಕಿದ್ದಾರೆ.

ಒಂದು ವಾರದಿಂದ ಇಸ್ರೇಲ್‌ನಲ್ಲಿದ್ದ ಕನ್ನಡಿಗರ ತಂಡ, ಶುಕ್ರವಾರ ಬೆಂಗಳೂರಿಗೆ ವಾಪಸ್ ಆಗಬೇಕಿತ್ತು. ಆದರೆ ಇಸ್ರೇಲ್ -ಇರಾನ್ ಸಂಘರ್ಷದ ಪರಿಣಾಮ ದಿಢೀರ್ ವಿಮಾನ ಹಾರಾಟ ಸ್ಥಗಿತಗೊಳಿಸಿದ ಹಿನ್ನೆಲೆ ಬಿ ಪ್ಯಾಕ್ ಎನ್‌ಜಿಒ ತಂಡ ಇಸ್ರೇಲ್ ರಾಜಧಾನಿ ಟೆಲ್ ಅವೀವ್‌ನಲ್ಲಿ ಉಳಿದುಕೊಂಡಿದೆ. ಇದನ್ನೂ ಓದಿ: Explainer: ವಿಮಾನ ಸುಟ್ಟು ಬೂದಿಯಾದರೂ ‘ಬ್ಲ್ಯಾಕ್‌ಬಾಕ್ಸ್‌’ಗೆ ಏನಾಗಲ್ಲ – ಏನಿದು ಪೆಟ್ಟಿಗೆ? ಫ್ಲೈಟ್‌ ಆಕ್ಸಿಡೆಂಟ್‌ಗಳಲ್ಲಿ ಏಕೆ ಮುಖ್ಯ?

ಇಸ್ರೇಲ್ ಹಾಗೂ ಇರಾನ್ ನಡುವೆ ದಾಳಿ- ಪ್ರತಿದಾಳಿ ತೀವ್ರಗೊಂಡ ಬೆನ್ನಲ್ಲೇ ವಿಮಾನಗಳ ಹಾರಾಟ ಸ್ಥಗಿತಗೊಳಿಸಲಾಗಿದೆ. ಈ ಹಿನ್ನೆಲೆ 61 ಮಂದಿ ಭಾರತೀಯರು ಜಾರ್ಜಿಯಾದಲ್ಲಿ ಸಿಲುಕಿದ್ದಾರೆ. ರಾಜಸ್ಥಾನದ 61 ಮಂದಿಯ ತಂಡ ವೃತ್ತಿ ಕೌಶಲ್ಯ ಹೆಚ್ಚಿಸಿಕೊಳ್ಳುವ ಕಾರ್ಯಕ್ರಮಕ್ಕೆ ಜೂನ್ 8ರಂದು ತೆರಳಿದ್ದರು. ಜೂನ್ 13ರಂದು ಶಾರ್ಜಾ ಮೂಲಕ ಭಾರತಕ್ಕೆ ವಾಪಸ್ ಆಗಬೇಕಿತ್ತು. ವಿಮಾನ ಸ್ಥಗಿತಗೊಂಡ ಹಿನ್ನೆಲೆ ಅಲ್ಲೇ ಉಳಿದುಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆ ತುರ್ತಾಗಿ ತಮಗೆ ಸಹಾಯ ಮಾಡುವಂತೆ ಕೋರಿ ಭಾರತ ಸರ್ಕಾರಕ್ಕೆ ಭಾರತೀಯ ತಂಡ ಮನವಿ ಮಾಡಿದೆ. ಭಾರತಕ್ಕೆ ಸುರಕ್ಷಿತವಾಗಿ ಕರೆಸಿಕೊಳ್ಳುವಂತೆ ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್ ಅವರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ ಪ್ರಕರಣ – ಕಠಿಣ ಕ್ರಮಕ್ಕೆ ರಾಮಲಿಂಗಾ ರೆಡ್ಡಿ ಪತ್ರ

Share This Article