Israel-Iran tensions: ರಷ್ಯಾ, ಅಮೆರಿಕದಿಂದ ತೈಲ ಆಮದು ಹೆಚ್ಚಿಸಿದ ಭಾರತ

Public TV
2 Min Read
crude oil well petrol

ನವದೆಹಲಿ: ಇರಾನ್ ಮೇಲೆ ಇಸ್ರೇಲ್ (Iran-Israel War) ನಡೆಸಿದ ದಾಳಿಯಿಂದ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದ್ದು, ಭಾರತವು ಜೂನ್‌ನಲ್ಲಿ ರಷ್ಯಾದ (Russia) ತೈಲ ಖರೀದಿಯನ್ನು ಹೆಚ್ಚಿಸಿದೆ. ಸೌದಿ ಅರೇಬಿಯಾ ಮತ್ತು ಇರಾಕ್‌ನಂತಹ ಮಧ್ಯಪ್ರಾಚ್ಯ ಪೂರೈಕೆದಾರರಿಂದ ಒಟ್ಟು ಪ್ರಮಾಣಕ್ಕಿಂತ ಹೆಚ್ಚಿನ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ.

ಜೂನ್ 13 ರಂದು ಮೊದಲು ಇರಾನಿನ ಪರಮಾಣು ತಾಣಗಳ ಮೇಲೆ ದಾಳಿ ಮಾಡಿದ ಇಸ್ರೇಲ್‌ಗೆ ನೇರ ಬೆಂಬಲ ನೀಡಿರುವ ಅಮೆರಿಕ (US), ಇರಾನ್‌ನಲ್ಲಿರುವ ಮೂರು ಪರಮಾಣು ತಾಣಗಳ ಮೇಲೆ ದಾಳಿ ಮಾಡಿದೆ. ಇದನ್ನೂ ಓದಿ: America Strikes | ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಬೆಂಬಲಿಸಿದ್ದ ಪಾಕ್‌ನಿಂದ ಇರಾನ್‌ ಮೇಲಿನ ದಾಳಿ ಖಂಡನೆ

Donald Trump threatens Russia with sanctions tariffs if Vladimir Putin doesnt end Ukraine war 1

ಜೂನ್‌ನಲ್ಲಿ, ಭಾರತೀಯ ಸಂಸ್ಕರಣಾಗಾರಗಳು ದಿನಕ್ಕೆ 2-2.2 ಮಿಲಿಯನ್ ಬ್ಯಾರೆಲ್ ರಷ್ಯಾದ ತೈಲವನ್ನು ಆಮದು ಮಾಡಿಕೊಳ್ಳುವ ನಿರೀಕ್ಷೆಯಿದೆ. ಇದು ಕಳೆದ ಎರಡು ವರ್ಷಗಳಲ್ಲಿ ಅತಿ ಹೆಚ್ಚಿನದ್ದಾಗಲಿದೆ. ಇರಾಕ್, ಸೌದಿ ಅರೇಬಿಯಾ, ಯುಎಇ ಮತ್ತು ಕುವೈತ್‌ನಿಂದ ಖರೀದಿಸಿದ ಒಟ್ಟು ಪ್ರಮಾಣಕ್ಕಿಂತ ಹೆಚ್ಚಾಗಿದೆ ಎಂದು ಜಾಗತಿಕ ವ್ಯಾಪಾರ ವಿಶ್ಲೇಷಣಾ ಸಂಸ್ಥೆ ಕೆಪ್ಲರ್‌ ತಿಳಿಸಿದ್ದಾರೆ.

ಮೇ ತಿಂಗಳಲ್ಲಿ ರಷ್ಯಾದಿಂದ ಭಾರತದ (India) ತೈಲ ಆಮದು ದಿನಕ್ಕೆ 1.96 ಮಿಲಿಯನ್ ಬ್ಯಾರೆಲ್‌ಗಳಷ್ಟಿತ್ತು (bpd). ಇದಲ್ಲದೆ, ಜೂನ್‌ನಲ್ಲಿ ಅಮೆರಿಕದಿಂದ ಆಮದು ದಿನಕ್ಕೆ 4.39 ಲಕ್ಷ ಬ್ಯಾರೆಲ್‌ಗೆ ಏರಿದೆ. ಇದು ಹಿಂದಿನ ತಿಂಗಳಲ್ಲಿ ಖರೀದಿಸಲಾದ 2.80 ಲಕ್ಷ ಬ್ಯಾರೆಲ್‌ಗಳಿಂದ ಭಾರಿ ಜಿಗಿತವಾಗಿದೆ. ಇದನ್ನೂ ಓದಿ: America Strikes In Iran | ಕಚ್ಚಾ ತೈಲ, ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಸಾಧ್ಯತೆ – ಆರ್ಥಿಕ ತಜ್ಞರ ಕಳವಳ

indian flag economy e1658827415328

ಜೂನ್‌ನಲ್ಲಿ ಮಧ್ಯಪ್ರಾಚ್ಯದಿಂದ ಆಮದು ಮಾಡಿಕೊಳ್ಳುವ ಅಂದಾಜುಗಳು ದಿನಕ್ಕೆ ಸುಮಾರು 2 ಮಿಲಿಯನ್ ಬ್ಯಾರೆಲ್‌ಗಳಷ್ಟಿದ್ದು, ಮೇ ತಿಂಗಳ ಖರೀದಿಗಿಂತ ಕಡಿಮೆಯಾಗಿದೆ ಎಂದು ಕೆಪ್ಲರ್ ತಿಳಿಸಿದೆ.

ಭಾರತವು ವಿಶ್ವದ ಮೂರನೇ ಅತಿದೊಡ್ಡ ತೈಲ ಆಮದು ಮತ್ತು ಬಳಕೆಯ ರಾಷ್ಟ್ರವಾಗಿದೆ. ಇದು ಸುಮಾರು 5.1 ಮಿಲಿಯನ್ ಬ್ಯಾರೆಲ್ ಕಚ್ಚಾ ತೈಲವನ್ನು ಖರೀದಿಸಿದೆ. ಇದನ್ನು ಸಂಸ್ಕರಣಾಗಾರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ನಂತಹ ಇಂಧನಗಳಾಗಿ ಪರಿವರ್ತಿಸಲಾಗುತ್ತದೆ. ಇದನ್ನೂ ಓದಿ: ಶಾಂತಿ ಸ್ಥಾಪಿಸಿ, ಇಲ್ಲದಿದ್ರೆ ಭವಿಷ್ಯದಲ್ಲಿ ಬೆಲೆ ತೆರಬೇಕಾಗುತ್ತೆ – ಇರಾನ್‌ಗೆ ಟ್ರಂಪ್ ಖಡಕ್ ವಾರ್ನಿಂಗ್

2022ರ ಫೆಬ್ರವರಿಯಲ್ಲಿ ಉಕ್ರೇನ್ ಆಕ್ರಮಣದ ನಂತರ ಭಾರತವು ಹೆಚ್ಚಿನ ಪ್ರಮಾಣದ ರಷ್ಯಾದ ತೈಲವನ್ನು ಆಮದು ಮಾಡಿಕೊಳ್ಳಲು ಪ್ರಾರಂಭಿಸಿತು. ದೇಶವು ಸಾಂಪ್ರದಾಯಿಕವಾಗಿ ಮಧ್ಯಪ್ರಾಚ್ಯ ತೈಲವನ್ನು ಆಮದು ಮಾಡಿಕೊಳ್ಳುತ್ತಿದೆ. ಪಾಶ್ಚಿಮಾತ್ಯ ನಿರ್ಬಂಧಗಳು ಮತ್ತು ಕೆಲವು ಯುರೋಪಿಯನ್ ದೇಶಗಳು ಖರೀದಿಗಳನ್ನು ತಿರಸ್ಕರಿಸಿದ್ದರಿಂದ ಇತರ ಅಂತರರಾಷ್ಟ್ರೀಯ ಮಾನದಂಡಗಳಿಗೆ ಹೋಲಿಸಿದರೆ, ತೈಲವು ಗಮನಾರ್ಹ ರಿಯಾಯಿತಿಯಲ್ಲಿ ಲಭ್ಯವಿದ್ದ ಕಾರಣ ರಷ್ಯಾದ ಆಮದು ಹೆಚ್ಚಾಗಿದೆ.

Share This Article