ಟೆಲ್ಅವಿವ್: ಗಾಜಾ ಆಸ್ಪತ್ರೆಯಲ್ಲಿ (Gaza Hospital) ಸರಿಸುಮಾರು 1,000 ಜನರನ್ನು ಮತ್ತು ರೋಗಿಗಳನ್ನು ಒತ್ತೆಯಾಳುಗಳಾಗಿ ಇರಿಸಿಕೊಂಡ ಹಮಾಸ್ ನ ಹಿರಿಯ ಕಮಾಂಡರ್ನನ್ನು ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಿರುವುದಾಗಿ ಇಸ್ರೇಲ್ ಮಿಲಿಟರಿ (Israel Military) ಹೇಳಿದೆ.
ಈ ಸಂಬಂಧ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ಎನ್ನ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದೆ. ಅಹ್ಮದ್ ಸಿಯಾಮ್ ( Ahmed Siam) ಎಂಬಾತ ಹಮಾಸ್ ನ ನಾಸೆರ್ ರಾಡ್ವಾನ್ ಕಂಪನಿಯಲ್ಲಿ ಕಮಾಂಡರ್ ಆಗಿದ್ದ. ಈತ ದಾಳಿಗಳಲ್ಲಿ ನಾಗರಿಕರನ್ನು ಮಾನವ ಗುರಾಣಿಗಳಾಗಿ ಬಳಸಿಕೊಂಡಿದ್ದಾನೆ ಎಂದು ಪೋಸ್ಟ್ ಮಾಡಿದೆ.
Advertisement
Advertisement
ಕಳೆದ ತಿಂಗಳು ಗಾಜಾದಲ್ಲಿನ ಹಮಾಸ್ ವಿರುದ್ಧ ತನ್ನ ನೆಲದ ಕಾರ್ಯಾಚರಣೆಯನ್ನು ವಿಸ್ತರಿಸಿದ ನಂತರ, ಪ್ಯಾಲಿಸ್ತೀನಿ ಗುಂಪು ಯಹೂದಿ ರಾಷ್ಟ್ರದ ಮೇಲೆ ದೊಡ್ಡ ದಾಳಿಯನ್ನು ಪ್ರಾರಂಭಿಸಿದಾಗ ಅಕ್ಟೋಬರ್ 7 ರ ದಾಳಿಯಲ್ಲಿ ಭಾಗಿಯಾಗಿದ್ದ ಹಲವಾರು ಹಮಾಸ್ ಕಾರ್ಯಕರ್ತರನ್ನು ಇಸ್ರೇಲ್ ಪಡೆಗಳು ಕೊಂದಿವೆ. ಈ ಯುದ್ಧದಲ್ಲಿ ಇಸ್ರೇಲ್ನಲ್ಲಿ ಸುಮಾರು 1,200 ಜನರನ್ನು ಕೊಂದರೆ, ಗಾಜಾದಲ್ಲಿ 10,000 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಫೋಟೋ ಎಡಿಟ್ ಮಾಡಿ ಬ್ಲಾಕ್ಮೇಲ್ – ಆರೋಪಿ ಅರೆಸ್ಟ್
Advertisement
Advertisement
ಇಸ್ರೇಲ್-ಹಮಾಸ್ ನಡುವಿನ ಯುದ್ಧ ಪ್ರಾರಂಭವಾಗಿ ತಿಂಗಳು ಕಳೆದಿದೆ. ಅಕ್ಟೋಬರ್ 7 ರಂದು ಪ್ರಾರಂಭವಾದ ದಾಳಿಗೆ ಇಸ್ರೇಲ್ ಕೊಂಚ ವಿರಾಮಕ್ಕೆ ಒಪ್ಪಿದೆ. ದಿನಕ್ಕೆ 4 ಗಂಟೆ ಕದನ ವಿರಾಮವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ದೃಢಪಡಿಸಿದ್ದರು. ಗಾಜಾದ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್ ಯುದ್ಧದ ವಲಯದಲ್ಲಿ ನೆಲೆಸಿರುವ ನಾಗರಿಕರನ್ನು ಸುರಕ್ಷಿತ ಪ್ರದೇಶಕ್ಕೆ ತೆರಳಲು ಅನುವುಮಾಡಿಕೊಡುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಯುದ್ಧಕ್ಕೆ ಸಂಪೂರ್ಣ ವಿರಾಮವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ದಿನದಲ್ಲಿ 20 ಗಂಟೆ ಯುದ್ಧ ನಡೆದರೆ 4 ಗಂಟೆ ದಾಳಿ ನಡೆಸುವುದಿಲ್ಲ ಎಂದು ನೆತನ್ಯಾಹು (Benjamin Netanyahu) ತಿಳಿಸಿದ್ದರು.