ಬೈರೂತ್: ಗಾಜಾದಲ್ಲಿನ (Gaza) ಮಸೀದಿಯ (Mosque) ಮೇಲೆ ಇಸ್ರೇಲ್ (Israel) ವಾಯುಪಡೆ ನಡೆಸಿದ ವೈಮಾನಿಕ ದಾಳಿಯಿಂದ 26 ಮಂದಿ ಸಾವಿಗೀಡಾಗಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯವು ತಿಳಿಸಿದೆ.
ಸೆಂಟ್ರಲ್ ಡೀರ್ ಅಲ್-ಬಲಾಹ್‌ನಲ್ಲಿನ ಮಸೀದಿಯೊಂದರಲ್ಲಿ ಜನರು ಆಶ್ರಯ ಪಡೆದಿದ್ದರು. ಇದರ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಪರಿಣಾಮ ಅದರಲ್ಲಿದ್ದ 26 ಮಂದಿ ಸಾವಿಗೀಡಾಗಿದ್ದಾರೆ ಎಂದು ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಇಸ್ರೇಲ್ ವಾಯುದಾಳಿ ಬೆನ್ನಲ್ಲೇ ಬಿಗ್ ಅಪ್ಡೇಟ್ – ನಸ್ರಲ್ಲಾನ ಸಂಭಾವ್ಯ ಉತ್ತರಾಧಿಕಾರಿಯೇ ನಾಪತ್ತೆ
Advertisement
ಈ ಬಗ್ಗೆ ಪ್ರತಿಕ್ರಿಯಿಸಿರುವ ಇಸ್ರೇಲ್, ನಾವು ಹಮಾಸ್ ಉಗ್ರರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದೇವೆ ಎಂದು ಹೇಳಿಕೊಂಡಿದೆ. ಮಸೀದಿಯಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಮಾಸ್ (Hamas) ಭಯೋತ್ಪಾದಕರ ಮೇಲೆ ನಿಖರವಾದ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿಕೆಯಲ್ಲಿ ತಿಳಿಸಿದೆ.
Advertisement
Advertisement
ಶನಿವಾರ ಬೈರೂತ್ ಮೇಲೆ ಇಸ್ರೇಲ್ ನಡೆಸಿದ ವಾಯುದಾಳಿಗೆ ಹಿಜ್ಬುಲ್ಲಾ ಬಂಡುಕೋರ ಸಂಘಟನೆಯ ನಾಯಕ ಹಾಗೂ ನಸ್ರಲ್ಲಾನ ಸಂಭಾವ್ಯ ಉತ್ತರಾಧಿಕಾರಿ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿತ್ತು.
Advertisement
ಈ ಹಿಂದೆ ಹಿಜ್ಬುಲ್ಲಾ ಕಮಾಂಡರ್ ನಬಿಲ್ ಕೌಕ್, ಸಂವಹನ ಘಟಕದ ಕಮಾಂಡರ್ ಮೊಹಮ್ಮದ್ ರಶೀದ್ ಸಕಾಫಿ, ನಸ್ರಲ್ಲಾ ಉತ್ತರಾಧಿಕಾರಿ ಎಂದೇ ಹೇಳಲಾಗುತ್ತಿದ್ದ ಹಶೆಮ್ ಸಫೀದ್ದೀನ್ ಇಸ್ರೇಲ್ ವಾಯುದಾಳಿಯಲ್ಲಿ ಹತರಾಗಿದ್ದರು. ಇದರ ಬೆನ್ನಲ್ಲೇ ಹಿಜ್ಬುಲ್ಲಾದ ಮತ್ತೋರ್ವ ಕಮಾಂಡರ್ ಹಾಗೂ ನಸ್ರಲ್ಲಾನ ಸಂಭಾವ್ಯ ಉತ್ತರಾಧಿಕಾರಿ ಕೂಡ ಕಣ್ಮರೆಯಾಗಿದ್ದು, ಆತ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ವರದಿಯಾಗಿತ್ತು. ಇದನ್ನೂ ಓದಿ: ಉತ್ತರ ಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ – ಹಮಾಸ್ ಟಾಪ್ ಕಮಾಂಡರ್ ಹತ್ಯೆ