‌ಇರಾನ್‌ನಿಂದ ಖಂಡಾಂತರ ಕ್ಷಿಪಣಿ ದಾಳಿ – ದಕ್ಷಿಣ ಇಸ್ರೇಲ್‌ನ ಅತಿದೊಡ್ಡ ಆಸ್ಪತ್ರೆ ಉಡೀಸ್‌

Public TV
2 Min Read
Israeli Hospital 2

– ಇರಾನ್‌ ಅಣ್ವಸ್ತ್ರ ಘಟಕ ಟಾರ್ಗೆಟ್‌ ಮಾಡಿ ಇಸ್ರೇಲ್‌ ದಾಳಿ
– ಇಸ್ರೇಲ್‌ ಮಿಸೈಲ್‌ ದಾಳಿಗೆ ಹಿಜ್ಬುಲ್ಲಾ ಕಮಾಂಡರ್‌ ಖಲ್ಲಾಸ್‌

ಟೆಲ್‌ ಅವಿವ್‌/ಟೆಹ್ರಾನ್‌: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ (Israel-Iran Conflict) 7ನೇ ದಿನಕ್ಕೆ ಕಾಲಿಟ್ಟಿದ್ದು, ಉಭಯ ರಾಷ್ಟ್ರಗಳ ನಡುವಿನ ಪರಸ್ಪರ ಮಿಸೈಲ್‌ ದಾಳಿ (Missile Strike) ಮುಂದುವರಿದಿದೆ. ಇರಾನ್‌ ಟೆಲ್‌ ಅವಿವ್‌ ಮೇಲೆ ನಡೆಸಿದ ಇತ್ತೀಚಿನ ಕ್ಷಿಪಣಿ ದಾಳಿಯಲ್ಲಿ ಕನಿಷ್ಠ ಮೂವರು ಇಸ್ರೇಲಿಯನ್ನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.

iran israel war

ಇಸ್ರೇಲ್‌ ಇರಾನಿನ ಅಣ್ವಸ್ತ್ರ ಘಟಕ (Khondab Nuclear Facility) ಪ್ರದೇಶದಲ್ಲಿರುವ ನೀರಿನ ಸೌಲಭ್ಯಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ರೆ, ಇರಾನ್‌, ಇಸ್ರೇಲಿನ ಆಸ್ಪತ್ರೆಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ. ಈ ನಡುವೆ ಇಸ್ರೇಲ್‌ನಾದ್ಯಂತ ಸೈರನ್‌ಗಳು ಮೊಳಗಿದ್ದು, ಸಾರ್ವಜನಿಕರನ್ನು ಸುರಕ್ಷಿತ ಸ್ಥಳಗಳಿಗೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಕ್ರೊಯೇಷಿಯಾಗೆ ಮೋದಿ ಭೇಟಿ – ಪ್ರಧಾನಿ ಪ್ಲೆಂಕೋವಿಕ್ ಜೊತೆ ಹಲವು ಒಪ್ಪಂದಗಳಿಗೆ ಸಹಿ

ಇಸ್ರೇಲ್‌ನ ಅತಿದೊಡ್ಡ ಆಸ್ಪತ್ರೆ ಮೇಲೆ ಅಟ್ಯಾಕ್‌
7ನೇ ದಿನ ಇರಾನ್‌ ನಡೆಸಿದ ಖಂಡಾಂತರ ಕ್ಷಿಪಣಿ ದಾಳಿಗೆ ದಕ್ಷಿಣ ಇಸ್ರೇಲ್‌ನ ಅತಿದೊಡ್ಡ ಆಸ್ಪತ್ರೆ ʻಬೀರ್‌ಶೆಬಾದಲ್ಲಿರುವ ಸೊರೊಕಾʼ (Soroka Hospital) ಧ್ವಂಸವಾಗಿದೆ. ಇದರಲ್ಲಿ ಸಾವುನೋವಿನ ಪ್ರಮಾಣ ಇನ್ನೂ ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಇರಾನಿನ ಪರಮಾಣು ಘಟಕದ ಮೇಲೆ ಅಮೆರಿಕ 14 ಸಾವಿರ ಕೆಜಿ ತೂಕದ ಬಾಂಬ್‌ ಹಾಕುತ್ತಾ?

Israel Iran Conflict 1

ಅಣ್ವಸ್ತ್ರ ಘಟಕ ಪ್ರದೇಶಗಳ ಮೇಲೆ ಟಾರ್ಗೆಟ್‌
ಪ್ರತೀಕಾರದ ದಾಳಿಯನ್ನು ತೀವ್ರಗೊಳಿಸಿರುವ ಇಸ್ರೇಲ್‌, ಇರಾನ್‌ನ ಖೊಂಡಾಬ್ ಪರಮಾಣು ಘಟಕದ ಬಳಿಯಿರುವ ಭಾರೀ ನೀರಿನ ಸಂಪನ್ಮೂಲ ಪ್ರದೇಶವನ್ನು ಗುರಿಯಾಗಿಸಿ ದಾಳಿ ನಡೆಸಿದೆ. ನ್ಯೂಕ್ಲಿಯರ್‌ ಘಟಕವೇ ಇಸ್ರೇಲ್‌ನ ಮುಂದಿನ ಟಾರ್ಗೆಟ್‌ ಆಗಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಯುದ್ಧ ಶುರುವಾಗಿದೆ – ಟ್ರಂಪ್‌ ಧಮ್ಕಿಗೆ ಇರಾನ್‌ ಸರ್ವೋಚ್ಚ ನಾಯಕ ಖಮೇನಿ ರಿಯಾಕ್ಷನ್‌

Iran Israel

ಹಿಜ್ಬುಲ್ಲಾ ಕಮಾಂಡರ್‌ ಖಲ್ಲಾಸ್‌
ಇನ್ನೂ ಇಸ್ರೇಲ್‌ ಬುಧವಾರ ತಡರಾತ್ರಿ ನಡೆಸಿದ ವಾಯುದಾಳಿಯಲ್ಲಿ ಹಿಜ್ಬುಲ್ಲಾ ಕಮಾಂಡರ್‌ ಯಾಸಿನ್ ಇಜ್ ಎ-ದಿನ್ ಅವರನ್ನ ಕೊಲ್ಲಲಾಗಿದೆ ಎಂದು ಇಸ್ರೇಲ್ ರಕ್ಷಣಾ ಪಡೆ ಹೇಳಿಕೊಂಡಿದೆ. ಬ್ಯಾರಿಶ್‌ ಪಟ್ಟಣದಲ್ಲಿ ನಡೆದ ದಾಳಿಯಲ್ಲಿ ಹತ್ಯೆಗೈಯಲಾಗಿದೆ ಎಂದಿದೆ. ಯಾಸಿನ್‌ ಲಿಟಾನಿ ನದಿ ವಲಯದಲ್ಲಿರುವ ಹೆಜ್ಬೊಲ್ಲಾದ ರಾಕೆಟ್ ಫಿರಂಗಿ ಘಟಕದ ಕಮಾಂಡರ್ ಆಗಿದ್ದರು. ಇದನ್ನೂ ಓದಿ: ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಮತ್ತೆ ವಿಳಂಬ – ಜ್ವೆಜ್ಡಾ ಸೇವಾ ಮಾಡ್ಯೂಲ್‌ ದುರಸ್ತಿ ಬಳಿಕ ಮಿಷನ್ ಶುರು

Share This Article